Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:8 - ಕನ್ನಡ ಸತ್ಯವೇದವು C.L. Bible (BSI)

8 ಜನರು ಹೊರಗೆ ಹೋಗಿ ಅದನ್ನು ಕೂಡಿಸಿಕೊಂಡು ಬಂದು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಲ್ಲಿ ಕುಟ್ಟಿ, ಮಡಕೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಳ್ಳುತ್ತಿದ್ದರು. ಅದರ ರುಚಿ ಎಣ್ಣೆಬೆರೆಸಿ ಮಾಡಿದ ತಿಂಡಿಯಂತೆ ಇರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಿನಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಎಣ್ಣೆ ಬೆರಸಿ ಮಾಡಿದ ಭಕ್ಷ್ಯಗಳಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ ಇಲ್ಲವೆ ಒರಳಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜನರು ಮನ್ನವನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ ಅಥವಾ ಒರಳಲ್ಲಿ ಕುಟ್ಟಿ, ಮಡಕೆಗಳಲ್ಲಿ ಬೇಯಿಸಿ ತೆಳುವಾದ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಆಲಿವ್ ಎಣ್ಣೆಯಿಂದ ಮಾಡಿದ ಭಕ್ಷ್ಯಗಳಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜನರು ಹೊರಗೆ ಹೋಗಿ ಅದನ್ನು ಕೂಡಿಸಿ, ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ, ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡುತ್ತಿದ್ದರು. ಅದರ ರುಚಿಯು ಓಲಿವ್ ಎಣ್ಣೆಯಿಂದ ಮಾಡಿದ ರೊಟ್ಟಿಯಹಾಗೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:8
9 ತಿಳಿವುಗಳ ಹೋಲಿಕೆ  

ಇಸ್ರಯೇಲ್ ಮನೆತನದವರು ಆ ಆಹಾರಕ್ಕೆ ‘ಮನ್ನ’ ಎಂದು ಹೆಸರಿಟ್ಟರು. ಅದು ಬಿಳೀ ಕೊತ್ತಂಬರಿ ಕಾಳಿನಂತಿದ್ದು, ರುಚಿಯಲ್ಲಿ ಜೇನುತುಪ್ಪ ಹಾಕಿ ಕಲಸಿದ ದೋಸೆಗಳ ಹಾಗಿತ್ತು.


ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.


ಅದಕ್ಕೆ ಮೋಶೆ, “ಇದು ಸರ್ವೇಶ್ವರ ಹೇಳಿದ ಮಾತು. ನಾಳೆ ವಿಶ್ರಾಂತಿಯ ದಿನ, ಸರ್ವೇಶ್ವರನ ಪರಿಶುದ್ಧ ‘ಸಬ್ಬತ್’ ದಿನ. ಆಹಾರಕ್ಕೆ ಸುಡಬೇಕಾದುದನ್ನು ಸುಟ್ಟು, ಬೇಯಿಸಬೇಕಾದುದನ್ನು ಬೇಯಿಸಿದ ನಂತರ ಮಿಕ್ಕಿದ್ದನ್ನು ನಾಳೆಯ ತನಕ ಇಟ್ಟುಕೊಳ್ಳಿ,” ಎಂದನು.


ನಮ್ಮ ಪೂರ್ವಜರಿಗೆ ಮರುಭೂಮಿಯಲ್ಲಿ ತಿನ್ನಲು ‘ಮನ್ನಾ’ ಸಿಕ್ಕಿತು. ತಿನ್ನಲು ಅವರಿಗೆ ಸ್ವರ್ಗದಿಂದ ರೊಟ್ಟಿ ದೊರಕಿತು, ಎಂದು ಪವಿತ್ರಗ್ರಂಥವೇ ಹೇಳುತ್ತದೆಯಲ್ಲವೇ?’ ಎಂದರು.


ಒಮ್ಮೆ ಯಕೋಬನು ಅಡಿಗೆ ಮಾಡುತ್ತಿದ್ದ. ಏಸಾವನು ಕಾಡಿನಿಂದ ದಣಿದು ಬಂದು,


ಆ ‘ಮನ್ನ’ ಕೊತ್ತುಂಬರಿ ಬೀಜದಂತಿತ್ತು; ಗುಗ್ಗುಲದಂತೆ ಕಾಣಿಸುತ್ತಿತ್ತು.


ರಾತ್ರಿಯಲ್ಲಿ ಮಂಜು ಪಾಳೆಯದ ಮೇಲೆ ಬೀಳುತ್ತಿದ್ದಾಗ ಅದರೊಂದಿಗೆ ‘ಮನ್ನ’ವೂ ಬೀಳುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು