Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 12:14 - ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಸರ್ವೇಶ್ವರ, “ಅವಳ ತಂದೆ ಅವಳ ಮುಖದ ಮೇಲೆ ಉಗುಳಿದ್ದರೆ ಏಳು ದಿವಸ ಅವಳು ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೆ? ಅಂತೆಯೇ ಅವಳು ಏಳು ದಿವಸ ಪಾಳೆಯದಿಂದ ಹೊರಗಿರಲಿ. ಅನಂತರ ಅವಳನ್ನು ನೀನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಕ್ಕೆ ಯೆಹೋವನು ಮೋಶೆಗೆ, “ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೇ? ಹಾಗಾದರೆ ಆಕೆ ಏಳು ದಿನ ಪಾಳೆಯದ ಹೊರಗೆ ಇರಲಿ, ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದಕ್ಕೆ ಯೆಹೋವನು - ತಂದೆ ಮುಖದ ಮೇಲೆ ಉಗುಳಿದರೆ ಆಕೆ ಹೇಗೂ ಏಳು ದಿವಸ ನಾಚಿಕೆಯಿಂದ ಮರೆಯಾಗುವದಿಲ್ಲವೇ; ಹಾಗಾದರೆ ಆಕೆ ಏಳು ದಿವಸ ಪಾಳೆಯದ ಹೊರಗೆ ಇರಬೇಕು; ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅದಕ್ಕೆ ಯೆಹೋವನು, “ಆಕೆಯ ತಂದೆ ಮುಖದ ಮೇಲೆ ಉಗುಳಿದ್ದರೆ ಆಕೆ ಏಳು ದಿವಸ ನಾಚಿಕೆಯಿಂದ ಇರುತ್ತಿರಲಿಲ್ಲವೇ? ಹಾಗಾದರೆ ಆಕೆ ಏಳು ದಿವಸ ಪಾಳೆಯದ ಹೊರಗೆ ಇರಬೇಕು. ತರುವಾಯ ಆಕೆ ಪಾಳೆಯದೊಳಗೆ ಬರಬಹುದು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಯೆಹೋವ ದೇವರು ಮೋಶೆಗೆ, “ಆಕೆಯ ತಂದೆ ಅವಳ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗಿರುವುದಿಲ್ಲವೇ? ಹಾಗಾದರೆ ಆಕೆಯು ಏಳು ದಿವಸ ಪಾಳೆಯದ ಹೊರಗೆ ಇರಲಿ, ತರುವಾಯ ಅವಳನ್ನು ನೀನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 12:14
13 ತಿಳಿವುಗಳ ಹೋಲಿಕೆ  

ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, ‘ಅಣ್ಣನಿಗೆ ಸಂತಾನವನ್ನು ಹುಟ್ಟಿಸಲೊಲ್ಲದವರೆಲ್ಲರಿಗೂ ಇಂಥ ಅವಮಾನವಾಗಲಿ,’ ಎಂದು ಹೇಳಬೇಕು.


ನನಗೆ ಅಸಹ್ಯಪಟ್ಟು ದೂರಸರಿಯುತ್ತಾರೆ ನನ್ನ ಮೇಲೆ ಉಗುಳುವುದಕ್ಕೂ ಹಿಂಜರಿಯದಿದ್ದಾರೆ.


ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ.


ಲೌಕಿಕ ತಂದೆ ನಮ್ಮನ್ನು ಶಿಕ್ಷಿಸಿದಾಗಲೂ ನಾವು ಅವರನ್ನು ಗೌರವಿಸುತ್ತೇವೆ. ಹೀಗಿರುವಲ್ಲಿ, ಪಾರಮಾರ್ಥಿಕ ತಂದೆಯಾದ ದೇವರಿಗೆ ನಾವು ಎಷ್ಟೋ ವಿಧೇಯರಾಗಿ ಬಾಳಬೇಕಲ್ಲವೇ?


ಬಳಿಕ ಅವರು ಯೇಸುಸ್ವಾಮಿಯ ಮುಖದ ಮೇಲೆ ಉಗುಳಿದರು; ಅವರನ್ನು ಗುದ್ದಿದರು.


ದೇವರು ನನ್ನನು ಈಡಾಗಿಸಿದ್ದಾನೆ ಅನ್ಯರ ಕಟ್ಟುಗಾದೆಗೆ ನನ್ನ ಮುಖ ಗುರಿಯಾಗಿದೆ ಜನರ ಉಗುಳಾಟಕ್ಕೆ.


ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು. ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೇ ಇರಬೇಕು.


ಸರ್ವೇಶ್ವರ ಸ್ವಾಮಿ, ಮೋಶೆಗೆ ಹೀಗೆಂದರು:


ಸರ್ವೇಶ್ವರಸ್ವಾಮಿ ಇವನನ್ನು ಕುಷ್ಠರೋಗದಿಂದ ಶಿಕ್ಷಿಸಿದರು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು. ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಇವನ ಮಗ ಯೋತಾಮನು ನೋಡಿಕೊಳ್ಳುತ್ತಿದ್ದನು.


ಆ ಹೊಳೆಯುವ ಮಚ್ಚೆ ಬೆಳ್ಳಗಾಗಿದ್ದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿರದೆ ಹೋದರೆ ಮತ್ತು ಅಲ್ಲಿರುವ ರೋಮ ಬೆಳ್ಳಗಾಗಿದ್ದರೆ ಯಾಜಕನು ಆ ಮಚ್ಚೆಯಿದ್ದವನನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು