Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 12:6 - ಕನ್ನಡ ಸತ್ಯವೇದವು C.L. Bible (BSI)

6 ಅವರು ಸಮೀಪಿಸಿದಾಗ, “ನನ್ನ ಮಾತಿಗೆ ಕಿವಿಗೊಡಿ ನಿಮ್ಮಲ್ಲಿ ಪ್ರವಾದಿಯಿದ್ದರೆ ಅವನಿಗೆ ಕಾಣಿಸಿಕೊಳ್ಳುವೆ ಜ್ಞಾನದೃಷ್ಟಿಯಲ್ಲಿ ಇಲ್ಲವೆ ಅವನ ಸಂಗಡ ಮಾತಾಡುವೆ ಸ್ವಪ್ನದಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ಬಂದಾಗ ಆತನು - ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಕಾಣಿಸಿಕೊಳ್ಳುವೆನು, ಇಲ್ಲವೆ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ, ನಾನು ಅವನಿಗೆ ನನ್ನನ್ನು ದರ್ಶನದಲ್ಲಿ ಗೊತ್ತುಪಡಿಸಿಕೊಳ್ಳುವೆನು ಅಥವಾ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಅವರಿಗೆ ಹೀಗೆ ಹೇಳಿದನು, “ನನ್ನ ಮಾತುಗಳನ್ನು ಈಗ ಕೇಳಿರಿ: “ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಯೆಹೋವ ದೇವರಾದ ನಾನು ದರ್ಶನದಲ್ಲಿ ಪ್ರಕಟಿಸುವೆನು, ಇಲ್ಲವೆ ಕನಸಿನಲ್ಲಿಯೂ ನಾನು ಅವನೊಡನೆ ಮಾತನಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 12:6
50 ತಿಳಿವುಗಳ ಹೋಲಿಕೆ  

ದೇವರಾದ ಸರ್ವೇಶ್ವರ ಆ ರಾತ್ರಿ ಕನಸಿನಲ್ಲಿ ಅವನಿಗೆ ಕಾಣಿಸಿಕೊಂಡರು; “ನಿನಗೆ ಯಾವ ವರಬೇಕು ಕೇಳಿಕೋ,” ಎಂದು ಹೇಳಿದರು.


ಆ ರಾತ್ರಿ ದೇವರು ಯಕೋಬನಿಗೆ ದರ್ಶನವಿತ್ತು, “ಯಕೋಬನೇ, ಯಕೋಬನೇ,” ಎಂದು ಕರೆಯಲು, ಅವನು, "ಇಗೋ, ಸಿದ್ಧನಿದ್ದೇನೆ,” ಎಂದನು.


ಅಷ್ಟರಲ್ಲಿ ಜಕರೀಯನು ಹೊರಗೆ ಬಂದು ಮಾತನಾಡಲೆತ್ನಿಸಿದರೂ ಅವನ ಬಾಯಿಂದ ಮಾತೇ ಹೊರಡಲಿಲ್ಲ. ಬರೀ ಕೈಸನ್ನೆಮಾಡುತ್ತಿದ್ದ ಅವನಿಗೆ ದೇವಾಲಯದಲ್ಲಿ ಏನೋ ದಿವ್ಯದರ್ಶನ ಆಗಿರಬೇಕೆಂದು ಜನರು ಅರಿತುಕೊಂಡರು. ಅಂದಿನಿಂದ ಅವನು ಮೂಕನಾಗಿಯೇ ಇದ್ದನು.


ಆಗ ಧೂಪಪೀಠದ ಬಲಗಡೆ ಅವನಿಗೆ ದೇವದೂತನೊಬ್ಬನು ಪ್ರತ್ಯಕ್ಷನಾದನು.


ನಾನು ಒಂಟಿಯಾಗಿ ಉಳಿದು ಆ ಅದ್ಭುತವನ್ನು ಕಂಡೆ. ನನ್ನ ಶಕ್ತಿಯೆಲ್ಲಾ ಕರಗಿಹೋಯಿತು. ನನ್ನ ಗಾಂಭೀರ್ಯ ಅಳಿಯಿತು. ನಾನು ನಿತ್ರಾಣನಾದೆ.


ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನ ನಾನು ಗಡೀಪಾರಾಗಿದ್ದ ಯೆಹೂದ್ಯರ ಮಧ್ಯೆ ಕೆಬಾರ್ ನದಿಯ ಹತ್ತಿರ ಇದ್ದೆ. ಆಗ ಆಕಾಶ ತೆರೆಯಿತು. ನನಗೆ ದೇವದರ್ಶನಗಳಾದವು.


ಸ್ವರ್ಗದ ಬಾಗಿಲು ತೆರೆಯಿತು. ದೊಡ್ಡ ದುಪ್ಪಟಿಯಂತಹ ವಸ್ತುವೊಂದು ಇಳಿದು ಬರುತ್ತಿತ್ತು. ಅದರ ನಾಲ್ಕು ಮೂಲೆಗಳನ್ನು ಹಿಡಿದು ಭೂಮಿಯ ಮೇಲೆ ಅದನ್ನು ಇಳಿಯಬಿಡಲಾಗಿತ್ತು.


ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ.


ಈ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿ ನಾನಿದ್ದೆ. ಊಲಾ ಕಾಲುವೆಯ ದಡದ ಮೇಲೆ ನಾನು ನಿಂತುಕೊಂಡಿದ್ದ ಹಾಗೆ ತೋರಿತು.


ಹೆರೋದನು ಸತ್ತುಹೋದನು. ಆಗ ಈಜಿಪ್ಟಿನಲ್ಲಿ ಜೋಸೆಫನಿಗೆ ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು,


ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಒಂದು ಕನಸು ಕಂಡನು. ಅವನ ಮನಸ್ಸಿಗೆ ಒಂದು ದೃಶ್ಯ ಕಾಣಿಸಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದಿಟ್ಟನು.


ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ.


“ನಾನಭಿಷೇಕಿಸಿದವರನಿದೋ ಮುಟ್ಟಬೇಡಿ I ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿ” II


ಹಿಂದೊಮ್ಮೆ ನೀ ದರ್ಶನವಿತ್ತು ಇಂತೆಂದೆ ನಿನ್ನ ಭಕ್ತರಿಗೆ: I “ರಕ್ಷಾಬಲವನು ಅನುಗ್ರಹಿಸಿರುವೆ ಶೂರವೀರನೋರ್ವನಿಗೆ I ಪ್ರಜೆಗಳಲೊರ್ವ ಯುವಕನನು ಏರಿಸಿರುವೆ ಉನ್ನತಸ್ಥಾನಕೆ II


ಮಾನವನಿಗೆ ಗಾಢನಿದ್ರೆ ಬಂದಾಗ ಹಾಸಿಗೆ ಮೇಲೆ ಮಲಗಿರುವಾಗ ಸ್ವಪ್ನ ಬಿದ್ದಾಗ, ಕನಸು ಕಾಣುವಾಗ.


ಜನರಿಗೆ ಗಾಢನಿದ್ರೆ ಹತ್ತುವ ಹೊತ್ತಿನಲಿ ರಾತ್ರಿಕಾಲದ ಸ್ವಪ್ನಯೋಚನೆಗಳ ಸುಳಿಯಲಿ


ಆಗ ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು. “ನೋಡು, ನಾನು ನಿನ್ನನ್ನು ಫರೋಹನ ಮುಂದೆ ದೇವರ ಪ್ರತಿನಿಧಿಯನ್ನಾಗಿ ನೇಮಿಸಿದ್ದೇನೆ. ನಿನ್ನ ಅಣ್ಣ ಆರೋನನು ನಿನ್ನ ಪರವಾಗಿ ವಾದಿಸುವನು.


ಈಗ ಆ ಮನುಷ್ಯನ ಹೆಂಡತಿಯನ್ನು ಮರಳಿ ಅವನಿಗೆ ಒಪ್ಪಿಸಿಬಿಡು. ಅವನೊಬ್ಬ ಪ್ರವಾದಿ. ನಿನ್ನ ಪರವಾಗಿ ನನ್ನನ್ನು ಪ್ರಾರ್ಥಿಸುವನು, ನೀನು ಬದುಕುವೆ. ಆಕೆಯನ್ನು ಒಪ್ಪಿಸಲು ನಿರಾಕರಿಸಿದೆಯಾದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೊ,” ಎಂದು ಕನಸಿನಲ್ಲಿ ಹೇಳಿದರು.


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ಭೂನಿವಾಸಿಗಳನ್ನು ಪೀಡಿಸಿದ್ದ ಆ ಇಬ್ಬರು ಪ್ರವಾದಿಗಳು ಸತ್ತದ್ದಕ್ಕಾಗಿ ಲೋಕದ ಜನರು ಸಂತೋಷದಿಂದ ಸಂಭ್ರಮಿಸುವರು. ಒಬ್ಬರಿಗೊಬ್ಬರು ಬಹುಮಾನಗಳನ್ನು ಹಂಚಿಕೊಳ್ಳುವರು.


ನಾನು ನನ್ನ ಇಬ್ಬರು ಸಾಕ್ಷಿಗಳನ್ನು ಕಳುಹಿಸುವೆನು. ಅವರು ಗೋಣಿತಟ್ಟನ್ನು ಉಟ್ಟುಕೊಂಡು ಒಂದು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದಿಸುವರು.”


ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.


ಇತ್ತ ಪೇತ್ರನು ತಾನು ಕಂಡ ದರ್ಶನದ ಅರ್ಥವೇನಿರಬಹುದೆಂದು ತಬ್ಬಿಬ್ಬಾದನು. ಅಷ್ಟರಲ್ಲಿ ಕೊರ್ನೇಲಿಯನು ಕಳುಹಿಸಿದ್ದ ಆಳುಗಳು ಸಿಮೋನನ ಮನೆಯನ್ನು ವಿಚಾರಿಸಿ ಕಂಡುಹಿಡಿದರು. ಹೊರಬಾಗಿಲ ಬಳಿ ನಿಂತುಕೊಂಡು,


ಮನುಷ್ಯರಿಂದ ಬಂದಿತೆಂದು ಹೇಳಿದೆ ವಾದರೆ ಯೊವಾನ್ನನು ಪ್ರವಾದಿಯೆಂದು ಜನರೆಲ್ಲರಿಗೆ ಮನದಟ್ಟಾಗಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರು,” ಎಂದುಕೊಂಡರು.


“ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.


ಅವರಲ್ಲಿ ಕೆಲವರನ್ನು ಕೊಲೆಮಾಡುವಿರಿ, ಶಿಲುಬೆಗೆ ಏರಿಸುವಿರಿ, ಮತ್ತೆ ಕೆಲವರನ್ನು ನಿಮ್ಮ ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವಿರಿ. ಊರಿಂದೂರಿಗೆ ಅಟ್ಟಿ ಅವರನ್ನು ಪೀಡಿಸುವಿರಿ.


ಹೀಗೆ ಪ್ರವಾದಿಗಳನ್ನು ಕೊಲೆಮಾಡಿದವರ ಪೀಳಿಗೆಗೆ ನೀವು ಸೇರಿದವರು ಎಂದು ನೀವೇ ಸಾಕ್ಷಿಕೊಡುತ್ತೀರಿ.


ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.


ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು.


ಆ ರಾತ್ರಿ ಅವನಿಗೆ ಒಂದು ಕನಸು ಬಿತ್ತು, ಆ ಕನಸಿನಲ್ಲಿ ಒಂದು ನಿಚ್ಚಣಿಗೆ ನೆಲದ ಮೆಲೆ ನಿಂತಿತ್ತು; ಅದರ ತುದಿ ಆಕಾಶವನ್ನು ಮುಟ್ಟಿತ್ತು. ಅದರ ಮೇಲೆ ದೇವದೂತರು ಹತ್ತುತ್ತಾ ಇಳಿಯುತ್ತಾ ಇದ್ದರು.


ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದಾ ವ್ಯಕ್ತಿಯ ವಾಣಿ.


ಅನಂತರ ಸಮುವೇಲನು ಮಲಗಿ, ಮುಂಜಾನೆಯಲ್ಲೇ ಎದ್ದು, ಸರ್ವೇಶ್ವರನ ಮಂದಿರದ ಬಾಗಿಲುಗಳನ್ನು ತೆರೆದನು. ತಾನು ಕಂಡದ್ದನ್ನು ಏಲಿಗೆ ತಿಳಿಸಲು ಭಯಪಟ್ಟನು.


ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದರಿಂದಾಗಲಿ, ಕನಸುಗಳಿಂದಾಗಲಿ, ಊರಿಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಅವನಿಗೆ ಉತ್ತರ ಸಿಗಲಿಲ್ಲ.


ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಕನಸೆಂದು ತಿಳಿದುಕೊಂಡನು. ಅವನು ಜೆರುಸಲೇಮಿಗೆ ಬಂದನಂತರ ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿ, ತನ್ನ ಎಲ್ಲಾ ಪರಿವಾರದವರಿಗೆ ಔತಣವನ್ನು ಏರ್ಪಡಿಸಿದನು.


‘ನನಗೆ ಕನಸು ಬಿತ್ತು, ಕನಸುಬಿತ್ತು’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದನೆ ಮಾಡುವವರ ನುಡಿಯನ್ನು ಕೇಳಿದ್ದೇನೆ.


ಆ ರಾತ್ರಿಯೇ ಸ್ವಪ್ನದಲ್ಲಿ ಕನಸಿನ ಗುಟ್ಟು ದಾನಿಯೇಲನಿಗೆ ವ್ಯಕ್ತವಾಯಿತು. ಕೂಡಲೆ ಆತನು ಪರಲೋಕ ದೇವರನ್ನು ಹೀಗೆಂದು ಸ್ತುತಿಸಿದನು:


ಯಕೋಬನು ನಿದ್ರೆಯಿಂದ ಎಚ್ಚೆತ್ತನು. "ನಿಶ್ಚಯವಾಗಿ ಸರ್ವೇಶ್ವರ ಈ ಸ್ಥಳದಲ್ಲಿದ್ದಾರೆ; ಇದು ನನಗೆ ತಿಳಿಯದೆಹೋಯಿತು!” ಎಂದುಕೊಂಡನು;


ಒಮ್ಮೆ ಜೋಸೆಫನಿಗೆ ಒಂದು ಕನಸು ಬಿತ್ತು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.


ಜೋಸೆಫನಿಗೆ ಇನ್ನೊಂದು ಕನಸು ಬಿತ್ತು. ಅದನ್ನೂ ಅವನು ಅಣ್ಣಂದಿರಿಗೆ ತಿಳಿಸಿದ: “ನಾನು ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯ, ಚಂದ್ರ, ಹಾಗೂ ನಕ್ಷತ್ರಗಳೂ ನನಗೆ ಅಡ್ಡಬಿದ್ದವು,” ಎಂದು ಹೇಳಿದ.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಹೋದರರಲ್ಲಿ, ನನ್ನಂಥ ಒಬ್ಬ ಪ್ರವಾದಿಯನ್ನು ನಿಮಗೆ ಏರ್ಪಡಿಸುವರು. ಅವನಿಗೆ ಮಾತ್ರ ಕಿವಿಗೊಡಬೇಕು.


ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೆ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.


ಸರ್ವೇಶ್ವರ, ಶಿಲೋವಿನಲ್ಲಿ ದರ್ಶನಕೊಡುವುದಕ್ಕೆ ಪ್ರಾರಂಭಿಸಿ ದೈವವಾಣಿಯ ಮೂಲಕ ಸಮುವೇಲನಿಗೆ ತಮ್ಮನ್ನೇ ಶೃತಪಡಿಸುತ್ತಾ ಬಂದರು. ಇಸ್ರಯೇಲರೆಲ್ಲರಿಗೆ ಸಮುವೇಲನು ಸರ್ವೇಶ್ವರನ ವಚನಗಳನ್ನು ತಿಳಿಸುತ್ತಾ ಇದ್ದನು.


ಆದರೆ ಅದೇ ರಾತ್ರಿ ಸರ್ವೇಶ್ವರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದರು:


ಆದರೂ ಗಿಲ್ಯಾದಿನಲ್ಲಿ ಅಧರ್ಮ ನೆಲೆಗೊಂಡಿದೆ. ಅದಕ್ಕೆ ದುರ್ಗತಿ ಕಾದಿದೆ. ಗಿಲ್ಗಾಲಿನಲ್ಲಿ ಬಸವನಿಗೆ ಯಜ್ಞಗಳನ್ನು ಅರ್ಪಿಸಲಾಗುತ್ತಿದೆ. ಅಲ್ಲಿನ ಯಜ್ಞವೇದಿಗಳು ಪುಡಿಪುಡಿಯಾಗುವುವು; ಉಳುವ ನೇಗಿಲಿಗೆ ಸಿಕ್ಕುವ ಕಲ್ಲುಕುಪ್ಪೆಗಳಾಗುವುವು.”


ಸರ್ವೇಶ್ವರಸ್ವಾಮಿಯ ನುಡಿಯಿದು: “ಆ ದಿನಗಳಲ್ಲಿ ಜುದೇಯ ಹಾಗೂ ಜೆರುಸಲೇಮಿನ ಸಿರಿಸಂಪತ್ತನ್ನು ಮರಳಿ ಕೊಡುವೆನು.


ರಾತ್ರಿಯಲ್ಲಿ ನನಗೆ ಈ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನೇರಿದ್ದ ಒಬ್ಬ ವ್ಯಕ್ತಿ ತಗ್ಗಿನಲ್ಲಿರುವ ಸುಗಂಧ ವೃಕ್ಷಗಳ ನಡುವೆ ನಿಂತಿದ್ದಾನೆ. ಅವನ ಹಿಂದೆ ಕೆಂಪು, ನಸುಗೆಂಪು ಮತ್ತು ಬಿಳಿಯ ಕುದುರೆಗಳಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು