Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 12:7 - ಕನ್ನಡ ಸತ್ಯವೇದವು C.L. Bible (BSI)

7 ನನ್ನ ದಾಸನಾದ ಮೋಶೆ ಅಂಥವನಲ್ಲ ಅವನೇ ನಂಬಿಗಸ್ತ ನನ್ನ ಮನೆಯಲ್ಲೆಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ಸೇವಕನಾದ ಮೋಶೆಯು ಅಂಥವನಲ್ಲ. ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನ್ನ ಸೇವಕನಾದ ಮೋಶೆ ಅಂಥವನಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಮೋಶೆಯೊಡನೆ ನಾನು ಆ ರೀತಿ ಮಾಡುವುದಿಲ್ಲ. ಮೋಶೆಯು ನನ್ನ ನಂಬಿಗಸ್ತನಾದ ಸೇವಕನು. ಅವನ ಮೇಲೆ ನನಗೆ ಭರವಸೆಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ನನ್ನ ಸೇವಕನಾದ ಮೋಶೆಯು ಹಾಗಲ್ಲ. ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 12:7
15 ತಿಳಿವುಗಳ ಹೋಲಿಕೆ  

ನಿರ್ವಾಹಕರು ಪ್ರಾಮಾಣಿಕರಾಗಿರಬೇಕಾದುದು ಅತ್ಯವಶ್ಯ.


ಕಳಿಸಿದ ತನ್ನ ದಾಸ ಮೋಶೆಯನು I ತಾನು ಆರಿಸಿಕೊಂಡ ಆರೋನನನು II


ಸರ್ವೇಶ್ವರಸ್ವಾಮಿ, ತಮ್ಮ ದಾಸ ಮೋಶೆ ಮರಣಹೊಂದಿದ ಮೇಲೆ ಅವನ ಶಿಷ್ಯನಾದ ನೂನನ ಮಗ ಯೆಹೋಶುವನಿಗೆ ಹೀಗೆಂದು ಆಜ್ಞಾಪಿಸಿದರು:


ಮಾನವನಾಗಿ ಜನಿಸಿದ್ದವರಲ್ಲಿ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಾರೂ ಹುಟ್ಟಿಲ್ಲ! ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಆದರೂ ಸ್ವರ್ಗಸಾಮ್ರಾಜ್ಯದಲ್ಲಿ ಕನಿಷ್ಠನಾದವನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ.


ಒಂದು ವೇಳೆ ನಾನು ಬರುವುದು ತಡವಾದರೆ, ದೇವರ ಮಂದಿರದಲ್ಲಿ ಅಂದರೆ, ಜೀವಸ್ವರೂಪಿಯಾದ ದೇವರ ಸಭೆಯಲ್ಲಿ, ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ತಿಳಿಯಲೆಂದು ಇದನ್ನು ಬರೆದಿದ್ದೇನೆ. ಸಭೆಯು ಸತ್ಯಕ್ಕೆ ಸ್ತಂಭವೂ ಅಸ್ತಿವಾರವೂ ಆಗಿದೆ.


ಇದನ್ನು ಕಂಡ ಮೋಶೆ ವಿಸ್ಮಿತನಾದನು. ಅದನ್ನು ಚೆನ್ನಾಗಿ ನೋಡಲೆಂದು ಹತ್ತಿರಕ್ಕೆ ಬಂದಾಗ,


ಹಾಗಾದರೆ ಯಾವ ಉದ್ದೇಶದಿಂದ ಹೋದಿರಿ? ಪ್ರವಾದಿಯನ್ನು ನೋಡಲೆಂದೋ ಹೌದು ಪ್ರವಾದಿಗಿಂತಲೂ ಶ್ರೇಷ್ಠನಾದವನನ್ನು ನೋಡಿದಿರಿ ಎಂಬುದು ನಿಜ.


ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೆ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.


ಸರ್ವೇಶ್ವರನ ಮಾತಿನಂತೆ ಅವರ ದಾಸ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮೃತನಾದನು.


ನೀನೀಗ ಎದ್ದು ಸಮಸ್ತ ಪ್ರಜೆಯೊಂದಿಗೆ ಜೋರ್ಡನ್ ನದಿಯನ್ನು ದಾಟಿ, ನಾನು ಇಸ್ರಯೇಲರಿಗೆ ಕೊಡುವ ನಾಡಿಗೆ ಹೋಗು.


ಆಗ ಸರ್ವೇಶ್ವರ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ಆತನಿಗೆ ಸರಿಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಗನು,” ಎಂದು ಹೇಳಿದರು.


ಒಬ್ಬ ಮನುಷ್ಯ ತನ್ನ ಗೆಳೆಯನೊಡನೆ ಹೇಗೆ ಮಾತಾಡುತ್ತಾನೋ ಹಾಗೆಯೇ ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡುತ್ತಿದ್ದರು. ತರುವಾಯ ಮೋಶೆ ಪಾಳೆಯಕ್ಕೆ ಮರಳಿ ಬರುತ್ತಿದ್ದನು. ಆದರೆ ನೂನನ ಮಗನಾದ ಯೆಹೋಶುವ ಎಂಬ ಹೆಸರುಳ್ಳ ಯುವಕನೊಬ್ಬನು ಮೋಶೆಯ ಶಿಷ್ಯನಾಗಿ ಆ ಗುಡಾರದಲ್ಲೇ ಇರುತ್ತಿದ್ದನು. ಅದನ್ನು ಬಿಟ್ಟು ಹೋಗುತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು