Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:17 - ಕನ್ನಡ ಸತ್ಯವೇದವು C.L. Bible (BSI)

17 ಕಾನಾನ್ ನಾಡನ್ನು ಸಂಚರಿಸಿ ನೋಡಿ ಬರುವುದಕ್ಕೆ ಅವರನ್ನು ಕಳಿಸುವಾಗ ಮೋಶೆ ಹೀಗೆಂದು ಸಂಬೋಧಿಸಿದನು: “ನೀವು ನೆಗೆಬಾ ಮಾರ್ಗವಾಗಿ ಮಲೆನಾಡಿಗೆ ಹತ್ತಿಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕಾನಾನ್ ದೇಶದಲ್ಲಿ ಸಂಚರಿಸಿ ನೋಡುವುದಕ್ಕೆ ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದ ಮಾರ್ಗವಾಗಿ ಬೆಟ್ಟದ ಸೀಮೆಗೆ ಹತ್ತಿಹೋಗಿ ಆ ದೇಶದ ಸಂಗತಿಯನ್ನೆಲ್ಲಾ ನೋಡಿ ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕಾನಾನ್ ದೇಶವನ್ನು ಸಂಚರಿಸಿ ನೋಡುವದಕ್ಕೆ ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ - ನೀವು ಕಾನಾನ್ ದೇಶದ ದಕ್ಷಿಣಪ್ರಾಂತ್ಯದ ಮಾರ್ಗವಾಗಿ ಬೆಟ್ಟದ ಸೀಮೆಗೆ ಹತ್ತಿಹೋಗಿ ಆ ದೇಶದ ಸಂಗತಿಯನ್ನೆಲ್ಲಾ ನೋಡಿ ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕಾನಾನ್ ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಬೆಟ್ಟದ ಸೀಮೆಗೆ ನೆಗೆವ್ ಮೂಲಕ ಹತ್ತಿ ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಮೋಶೆ ಕಾನಾನ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ನೆಗೆವ ಮಾರ್ಗವಾಗಿ ಮಲೆನಾಡಿಗೆ ಹತ್ತಿಹೋಗಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:17
16 ತಿಳಿವುಗಳ ಹೋಲಿಕೆ  

ಅನಂತರ ಅವರು ಪರ್ವತಪ್ರದೇಶ, ದಕ್ಷಿಣಸೀಮೆ ಮತ್ತು ತಗ್ಗುಪ್ರದೇಶ ಇವುಗಳಿಗೆ ಹೋಗಿ ಅಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.


ತರುವಾಯ ಅಲ್ಲಿಂದ ಮುಂದ ಮುಂದಕ್ಕೆ ಸಾಗುತ್ತಾ ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯಕ್ಕೆ ಬಂದನು.


ಸರ್ವೇಶ್ವರ ಯೆಹೂದಕುಲದವರ ಸಂಗಡ ಇದ್ದುದರಿಂದ ಅವರು ಪರ್ವತ ಪ್ರದೇಶಗಳನ್ನೆಲ್ಲಾ ಸ್ವತಂತ್ರಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣ ರಥಗಳಿದ್ದುದರಿಂದ ಅವರನ್ನು ಹೊರಗಟ್ಟಲು ಆಗಲಿಲ್ಲ.


ಬುಗ್ಗೆಗಳಿರುವ ಭೂಮಿಯನ್ನು ದಾನವಾಗಿ ಕೊಡಿ,” ಎಂದಳು. ಕಾಲೇಬನು ಆಕೆಗೆ ಮೇಲಿನ ಹಾಗು ಕೆಳಗಿನ ಬುಗ್ಗೆಗಳನ್ನು ದಾನ ಮಾಡಿದನು.


ಅಕ್ರಬ್ಬೀಮ್ ಎಂಬ ಕೊಲ್ಲಿಯ ದಕ್ಷಿಣ ಮಾರ್ಗವಾಗಿ ಚಿನ್ ಗೆ ಹೋಗುತ್ತದೆ.


ಅಬ್ರಾಮನು ತನ್ನದುದನ್ನೆಲ್ಲಾ ತೆಗೆದುಕೊಂಡು ಹೆಂಡತಿ ಮತ್ತು ಲೋಟನ ಸಂಗಡ ಈಜಿಪ್ಟನ್ನು ಬಿಟ್ಟು ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯಕ್ಕೆ ಬಂದನು.


ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರುದ್ಧ ಹೊರಟು ಜೇನುನೊಣಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದವರೆಗೂ ಬೆನ್ನಟ್ಟಿ ಸಂಹರಿಸಿದರು.


ಮಾರನೆಯ ದಿನ ಬೆಳಿಗ್ಗೆ ಜನರು ಎದ್ದು, “ನಾವು ಪಾಪ ಮಾಡಿರುವುದೇನೋ ನಿಜ; ಸರ್ವೇಶ್ವರ ವಾಗ್ದಾನ ಮಾಡಿದ ಸ್ಥಳಕ್ಕೆ ಏರಿಹೋಗೋಣ ಬನ್ನಿ,” ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋಗಲಾರಂಭಿಸಿದರು.


ದಕ್ಷಿಣ ಪ್ರಾಂತದಲ್ಲಿ ಅಮಾಲೇಕ್ಯರು, ಮಲೆನಾಡಿನಲ್ಲಿ ಹಿತ್ತಿಯರು ಯೆಬೂಸಿಯರು ಹಾಗು ಅಮೋರಿಯರು ಮತ್ತು ಸಮುದ್ರ ತೀರದಲ್ಲಿ ಹಾಗೂ ಜೋರ್ಡನ್ ನದಿಯ ಪರಿಸರದಲ್ಲಿ ಕಾನಾನ್ಯರು ವಾಸವಾಗಿದ್ದಾರೆ,” ಎಂದು ವರದಿ ಮಾಡಿದರು.


ಆ ಸಿದ್ದೀಮ್ ತಗ್ಗಿನಲ್ಲಿ ಕಲ್ಲರಗಿನ ಕೆಸರುಗುಣಿಗಳು ಬಹಳವಿದ್ದವು. ಸೊದೋಮ್ ಗೊಮೋರದ ರಾಜರಕಡೆಯವರು ಹಿಮ್ಮೆಟ್ಟಿ ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು. ಉಳಿದವರು ಬೆಟ್ಟಗಳಿಗೆ ಓಡಿಹೋದರು.


ಅಲ್ಲಿಂದ ಮುಂದೆ ಪ್ರಯಾಣ ಮಾಡುತ್ತಾ


ನೀನೆದ್ದು ಈ ನಾಡಿನ ಉದ್ದಗಲಕ್ಕೂ ತಿರುಗಾಡು; ಇದನ್ನು ನಾನು ನಿನಗೆ ಕೊಡುತ್ತೇನೆ, ಎಂದು ಹೇಳಿದರು.


ಆ ನಾಡು ಹೇಗಿದೆ, ಅಲ್ಲಿನ ನಿವಾಸಿಗಳು ಬಲಿಷ್ಠರೋ ಬಲಹೀನರೋ, ಅವರ ಸಂಖ್ಯೆ ದೊಡ್ಡದೋ ಚಿಕ್ಕದೋ


ನೂನನ ಮಗನಾದ ಯೆಹೋಶುವನು ಕಾನಾನ್ ನಾಡನ್ನೂ ಜೆರಿಕೋ ನಗರವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟುಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.


ಹೀಗೆ ಯೆಹೋಶುವನು ಮಲೆನಾಡಿನ ಪ್ರದೇಶ, ದಕ್ಷಿಣಪ್ರಾಂತ್ಯ, ಇಳಿಜಾರಿನ ಪ್ರದೇಶ, ಬೆಟ್ಟಗುಡ್ಡಗಳ ಬುಡ ಪ್ರದೇಶ ಇವುಗಳನ್ನು ಸ್ವತಂತ್ರಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಯೇಲ್ ದೇವರಾದ ಸರ್ವೇಶ್ವರನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಶಾಪನಾಶಕ್ಕೆ ಗುರಿಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು