Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:28 - ಕನ್ನಡ ಸತ್ಯವೇದವು C.L. Bible (BSI)

28 ಅಂತೆಯೇ ಆ ನಾಡಿನ ನಿವಾಸಿಗಳು ಬಲಿಷ್ಠರು. ಅವರಿರುವ ಪಟ್ಟಣಗಳು ದೊಡ್ಡವು; ಅವು ಕೋಟೆ ಕೊತ್ತಲುಗಳಿಂದ ಕೂಡಿವೆ. ಅದೂ ಅಲ್ಲದೆ ಅಲ್ಲಿ ‘ಅನಕಿಮ್’ ವಂಶಸ್ಥರನ್ನು ಕಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದರೆ ಆ ದೇಶದ ನಿವಾಸಿಗಳು ಬಲಿಷ್ಠರು: ಅವರಿರುವ ಪಟ್ಟಣಗಳು ದೊಡ್ಡದಾಗಿಯೂ, ಕೋಟೆ ಕೊತ್ತಲುಗಳುಳ್ಳದ್ದಾಗಿಯೂ ಇದೆ. ಅದಲ್ಲದೆ ಅಲ್ಲಿ ಉನ್ನತ ಪುರುಷರನ್ನು ನೋಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದರೆ ಆ ದೇಶದ ನಿವಾಸಿಗಳು ಬಲಿಷ್ಠರು; ಅವರಿರುವ ಪಟ್ಟಣಗಳು ದೊಡ್ಡವಾಗಿಯೂ ಕೋಟೆ ಕೊತ್ತಲುಗಳುಳ್ಳವಾಗಿಯೂ ಅವೆ; ಅದಲ್ಲದೆ ಅಲ್ಲಿ ಉನ್ನತರಾದ ಪುರುಷರನ್ನು ನೋಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅಲ್ಲಿನ ಜನರು ಬಲಿಷ್ಠರು. ಪಟ್ಟಣಗಳೂ ಬಹಳ ದೊಡ್ಡದಾಗಿವೆ. ಪಟ್ಟಣಗಳು ಕೋಟೆಕೊತ್ತಲುಗಳುಳ್ಳದಾಗಿವೆ. ನಾವು ಕೆಲವು ಅನಾಕ್ಯರನ್ನು ಸಹ ನೋಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು. ಪಟ್ಟಣಗಳು ಭದ್ರವಾಗಿಯೂ, ಬಹಳ ದೊಡ್ಡದಾಗಿಯೂ ಇವೆ. ಅನಾಕನ ಮಕ್ಕಳನ್ನು ನಾವು ಅಲ್ಲಿ ಕಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:28
12 ತಿಳಿವುಗಳ ಹೋಲಿಕೆ  

ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿ ನೋಡಬೇಕು; ಅಲ್ಲಿಗೆ ಹೋಗಿದ್ದ ನಮ್ಮ ಸಹೋದರರು ಬಂದು ಆ ನಾಡಿನ ಜನರು ನಮಗಿಂತ ಬಲಿಷ್ಠರೂ ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡವು, ಆಕಾಶವನ್ನು ಮುಟ್ಟುವಂಥ ಕೋಟೆಕೊತ್ತಲುಳ್ಳವು; ಅಲ್ಲಿ ‘ಅನಾಕಿಮ್’ ವಂಶಸ್ಥರನ್ನು ಕಂಡೆವೆಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ,’ ಎಂದುಕೊಳ್ಳುತ್ತಿದ್ದಿರಿ.


ಇಸ್ರಯೇಲರ ಪ್ರಾಂತ್ಯದಲ್ಲಿ ಜನರಾರೂ ಉಳಿಯಲಿಲ್ಲ. ಗಾಜಾ, ಗತೂರು, ಅಷ್ಡೋದ್ ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದರು.


ಅಲ್ಲಿ ‘ನೆಫೀಲಿಯರನ್ನು’ ಅಂದರೆ ನೆಫೀಲಿಯನ ವಂಶದವರಾದ ‘ಅನಕಿಮ್’ರನ್ನು ನೋಡಿದೆವು. ಅವರ ಮುಂದೆ ನಾವು ಮಿಡತೆಗಳಂತೆ ಇದ್ದೆವು. ಅವರಿಗೂ ನಾವು ಹಾಗೆಯೆ ಕಾಣಿಸಿಕೊಂಡೆವು,” ಎಂದರು.


ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.


ಅವೆಲ್ಲವು ಎತ್ತರವಾದ ಪೌಳಿಗೋಡೆಗಳಿಂದ, ಕದಗಳಿಂದ ಹಾಗು ಅಗುಳಿಗಳಿಂದ ಸುಭದ್ರವಾದ ಪಟ್ಟಣಗಳಾಗಿದ್ದವು. ಅವುಗಳಲ್ಲದೆ ಅನೇಕ ಹಳ್ಳಿಪಳ್ಳಿಗಳು ಇದ್ದವು.


ಅವರು ಬಲಿಷ್ಠರು, ಬಹುಜನರು ಹಾಗು ಅನಾಕಿಮರಂತೆ ಎತ್ತರದವರೂ ಆಗಿದ್ದರು.


ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು; ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಅಟ್ಟಿಬಿಟ್ಟನು.


ಅವನನ್ನು ರೆಫಾಯರಲ್ಲೊಬ್ಬನಾದ ಇಷ್ಬೀಬೆನೋಬ್ ಎಂಬವನು ಕೊಲ್ಲುವುದಕ್ಕಿದ್ದನು. ಅವನ ಭರ್ಜಿಯ ತಾಮ್ರ ಮುನ್ನೂರು ಬೆಳ್ಳಿ ನಾಣ್ಯದ ತೂಕದ್ದು; ಅವನು ಸೊಂಟಕ್ಕೆ ಒಂದು ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು.


ಹೀಗಿರಲು ಸರ್ವೇಶ್ವರ ಆ ದಿನದಂದು ಸೂಚಿಸಿದಂತೆ ಈ ಮಲೆನಾಡನ್ನು ನನಗೆ ಕೊಡು. ‘ಇದರಲ್ಲಿ ಎತ್ತರದ ವ್ಯಕ್ತಿಗಳಿದ್ದಾರೆ, ದೊಡ್ಡ ದೊಡ್ಡ ನಗರಗಳಿವೆ, ಕೋಟೆಕೊತ್ತಲಗಳಿವೆ’ ಎಂದು ಆ ಕಾಲದಲ್ಲಿ ನೀನು ಕೇಳಿದ್ದುಂಟು. ಅವರೆಲ್ಲರನ್ನು ಓಡಿಸಿಬಿಡಲು ಸರ್ವೇಶ್ವರ ತಮ್ಮ ಮಾತಿಗನುಸಾರ ನನಗೆ ಸಹಾಯಮಾಡುವರೆಂಬ ನಂಬಿಕೆ ನನಗಿದೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು