ಅರಣ್ಯಕಾಂಡ 13:29 - ಕನ್ನಡ ಸತ್ಯವೇದವು C.L. Bible (BSI)29 ದಕ್ಷಿಣ ಪ್ರಾಂತದಲ್ಲಿ ಅಮಾಲೇಕ್ಯರು, ಮಲೆನಾಡಿನಲ್ಲಿ ಹಿತ್ತಿಯರು ಯೆಬೂಸಿಯರು ಹಾಗು ಅಮೋರಿಯರು ಮತ್ತು ಸಮುದ್ರ ತೀರದಲ್ಲಿ ಹಾಗೂ ಜೋರ್ಡನ್ ನದಿಯ ಪರಿಸರದಲ್ಲಿ ಕಾನಾನ್ಯರು ವಾಸವಾಗಿದ್ದಾರೆ,” ಎಂದು ವರದಿ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರು, ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರೂ ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಇವರೂ ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಅಮಾಲೇಕ್ಯರು ನೆಗೆವ್‌ನಲ್ಲಿ ವಾಸಿಸುತ್ತಾರೆ. ಹಿತ್ತಿಯರು, ಯೆಬೂಸಿಯರು ಮತ್ತು ಅಮೋರಿಯರು ಪರ್ವತ ಪ್ರದೇಶದಲ್ಲಿ ವಾಸಿಸುತ್ತಾರೆ. ಕಾನಾನ್ಯರು ಸಮುದ್ರ ತೀರದಲ್ಲಿಯೂ ಮತ್ತು ಯೋರ್ದನ್ ನದಿಯ ಉದ್ದಕ್ಕೂ ವಾಸಿಸುತ್ತಾರೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅಮಾಲೇಕ್ಯರು ದೇಶದ ನೆಗೆವನಲ್ಲಿ ವಾಸವಾಗಿದ್ದಾರೆ. ಹಿತ್ತಿಯರೂ ಯೆಬೂಸಿಯರೂ ಅಮೋರಿಯರೂ ಪರ್ವತಗಳಲ್ಲಿಯೂ; ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸವಾಗಿದ್ದಾರೆ,” ಎಂದರು. ಅಧ್ಯಾಯವನ್ನು ನೋಡಿ |