ಅರಣ್ಯಕಾಂಡ 13:30 - ಕನ್ನಡ ಸತ್ಯವೇದವು C.L. Bible (BSI)30 ಮೋಶೆಗೆ ವಿರುದ್ಧ ಗುಣಗುಟ್ಟುತ್ತಿದ್ದವರನ್ನು ಕಾಲೇಬನು ಸಮಾಧಾನಗೊಳಿಸುತ್ತಾ, “ನಾವು ಧೈರ್ಯದಿಂದ ಆ ಮಲೆನಾಡಿಗೆ ಹೋಗಿ ಅದನ್ನು ಸ್ವಾಧೀನ ಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಮ್ಮಿಂದ ಸಾಧ್ಯ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಇಸ್ರಾಯೇಲರು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿದರು. ಕಾಲೇಬನು ಅವರನ್ನು ಸುಮ್ಮನಿರಿಸಿ, “ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಾವು ಶಕ್ತರಾಗಿದ್ದೇವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಇಸ್ರಾಯೇಲ್ಯರು ಮೋಶೆಗೆ ವಿರೋಧವಾಗಿ ಗುಣುಗುಟ್ಟಲಾಗಿ ಕಾಲೇಬನು ಅವರನ್ನು ಸುಮ್ಮನಿರಿಸಿ - ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ; ಅದನ್ನು ಜಯಿಸಬಲ್ಲೆವು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಕಾಲೇಬನು ಮೋಶೆಯ ಬಳಿಯಲ್ಲಿದ್ದ ಗೊಣಗುಟ್ಟುವ ಜನರನ್ನು ಸುಮ್ಮನಿರಿಸಿ, “ನಾವು ಹೋಗಿ ದೇಶವನ್ನು ವಶಪಡಿಸಿಕೊಳ್ಳಬೇಕು. ನಾವು ಸುಲಭವಾಗಿ ದೇಶವನ್ನು ವಶಪಡಿಸಿಕೊಳ್ಳಬಹುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನಂತರ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ, “ನಾವು ತಕ್ಷಣವೇ ಏರಿಹೋಗಿ ಅದನ್ನು ಸ್ವಾಧೀನ ಮಾಡಿಕೊಳ್ಳೋಣ. ಏಕೆಂದರೆ ಅದನ್ನು ಜಯಿಸಲು ನಾವು ನಿಜವಾಗಿಯೂ ಶಕ್ತರಾಗಿದ್ದೇವೆ,” ಎಂದನು. ಅಧ್ಯಾಯವನ್ನು ನೋಡಿ |