Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:32 - ಕನ್ನಡ ಸತ್ಯವೇದವು C.L. Bible (BSI)

32 ಅದಲ್ಲದೆ ತಾವು ಸಂಚರಿಸಿ ನೋಡಿ ಬಂದ ನಾಡಿನ ವಿಷಯವಾಗಿ ಇಸ್ರಯೇಲರಿಗೆ ಅಶುಭ ಸಮಾಚಾರವನ್ನೇ ಹೇಳುವವರಾದರು. “ನಾವು ಸಂಚಾರಮಾಡಿ ನೋಡಿ ಬಂದ ನಾಡು ತನ್ನಲ್ಲಿ ವಾಸಿಸುವವರನ್ನೇ ಕಬಳಿಸುವಂತಿದೆ. ನಾವು ಅಲ್ಲಿ ನೋಡಿದ ಜನರೆಲ್ಲರು ಬಹು ಎತ್ತರವಾದ ವ್ಯಕ್ತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ. ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲ್ಯರಿಗೆ ಅಶುಭಸಮಾಚಾರವನ್ನು ಹೇಳುವವರಾಗಿ - ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ; ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ನಾವು ಸಂಚರಿಸಿ ವಿಷಯ ಸಂಗ್ರಹಿಸಿಕೊಂಡು ಬಂದ ದೇಶವು ಅಲ್ಲಿ ವಾಸಿಸುವವರನ್ನು ನಾಶಪಡಿಸುವ ದೇಶವಾಗಿದೆ. ನಾವು ಅಲ್ಲಿ ನೋಡಿದ ಎಲ್ಲಾ ಜನರು ರಾಕ್ಷಸರಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರು ಸಂಚರಿಸಿ ನೋಡಿದಂಥ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿ ಬಂದ ದೇಶವು ತನ್ನಲ್ಲಿ ವಾಸವಾಗಿರುವವರನ್ನೇ ತಿಂದುಬಿಡುವ ದೇಶವಾಗಿದೆ. ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾ ಶರೀರದ ಮನುಷ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:32
11 ತಿಳಿವುಗಳ ಹೋಲಿಕೆ  

“ಆದರೂ ನನ್ನ ಜನರೇ, ನಿಮಗೆ ಎದುರಾಗಿ ನಿಂತ ಅಮೋರ್ಯದವರನ್ನು ಧ್ವಂಸಮಾಡಿದೆನು. ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ ನಿಮ್ಮ ಶತ್ರು ಅಮೋರ್ಯದವರನ್ನು ನಾಶಪಡಿಸಿದೆನು. ಮರದ ಮುಡಿಯಿಂದ ಫಲವನ್ನೂ ಅಡಿಯಿಂದ ಬೇರನ್ನೂ ಕಿತ್ತುಹಾಕುವಂತೆ ಅವರನ್ನು ನಿರ್ಮೂಲಮಾಡುವೆನು.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರದ ಪುರುಷ ಇದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ, ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳು ಇದ್ದವು. ಅವನೂ ರೆಫಾಯನು.


ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ - ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನೂ ರೆಫಾಯನು.


ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿ ನೋಡಬೇಕು; ಅಲ್ಲಿಗೆ ಹೋಗಿದ್ದ ನಮ್ಮ ಸಹೋದರರು ಬಂದು ಆ ನಾಡಿನ ಜನರು ನಮಗಿಂತ ಬಲಿಷ್ಠರೂ ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡವು, ಆಕಾಶವನ್ನು ಮುಟ್ಟುವಂಥ ಕೋಟೆಕೊತ್ತಲುಳ್ಳವು; ಅಲ್ಲಿ ‘ಅನಾಕಿಮ್’ ವಂಶಸ್ಥರನ್ನು ಕಂಡೆವೆಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ,’ ಎಂದುಕೊಳ್ಳುತ್ತಿದ್ದಿರಿ.


ಅಂತೆಯೇ ಆ ನಾಡಿನ ನಿವಾಸಿಗಳು ಬಲಿಷ್ಠರು. ಅವರಿರುವ ಪಟ್ಟಣಗಳು ದೊಡ್ಡವು; ಅವು ಕೋಟೆ ಕೊತ್ತಲುಗಳಿಂದ ಕೂಡಿವೆ. ಅದೂ ಅಲ್ಲದೆ ಅಲ್ಲಿ ‘ಅನಕಿಮ್’ ವಂಶಸ್ಥರನ್ನು ಕಂಡೆವು.


ಅವರೊ ಬೇಡವೆಂದರು ಆ ಚೆಲುವಿನ ನಾಡನು I ನಂಬದೆ ಹೋದರು ಅವನಿತ್ತಾ ವಾಗ್ದಾನವನು II


ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಯೇಲರೇ, ನಿನ್ನಲ್ಲಿ ಸಂಚರಿಸುತ್ತಾ, ನಿನ್ನನ್ನು ಸೊತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರಶೋಕವನ್ನು ಕೊಡದಿರುವೆ.”


ಈಜಿಪ್ಟಿನಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ಕಾಲ ಅರಣ್ಯದ ಮಾರ್ಗವಾಗಿ ನಿಮ್ಮನ್ನು ನಡೆಸಿ ಕರೆತಂದು, ಅಮೋರ್ಯದವರ ನಾಡನ್ನು ನಿಮಗೆ ದೊರಕಿಸಿಕೊಟ್ಟವನು ನಾನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು