Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:1 - ಕನ್ನಡ ಸತ್ಯವೇದವು C.L. Bible (BSI)

1 ಜನರೆಲ್ಲರು, ಈ ವರದಿಯನ್ನು ಕೇಳಿ ಗಟ್ಟಿಯಾಗಿ ಗೋಳಿಟ್ಟರು. ರಾತ್ರಿಯೆಲ್ಲಾ ಅಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಜನಸಮೂಹದವರೆಲ್ಲರೂ ತಮ್ಮ ಸ್ವರ ಎತ್ತಿ ಆ ರಾತ್ರಿಯೆಲ್ಲಾ ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅದನ್ನು ಕೇಳಿ ಜನಸಮೂಹದವರೆಲ್ಲರೂ ಗುಲ್ಲುಮಾಡಿ ಬಹಳ ಕೂಗಿಕೊಂಡರು; ಆ ರಾತ್ರಿಯೆಲ್ಲಾ ಜನರು ಅಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ರಾತ್ರಿಯಲ್ಲಿ ಜನರೆಲ್ಲರೂ ಗಟ್ಟಿಯಾಗಿ ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಜನರೆಲ್ಲರೂ ತಮ್ಮ ಸ್ವರವೆತ್ತಿ ಆ ರಾತ್ರಿಯೆಲ್ಲಾ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:1
13 ತಿಳಿವುಗಳ ಹೋಲಿಕೆ  

ನೀವು ಹಿಂದಿರುಗಿ ಬಂದು ಸರ್ವೇಶ್ವರನ ಮುಂದೆ ಗೋಳಾಡಿದಿರಿ. ಆಗ ಅವರು ನಿಮ್ಮ ಮೊರೆಯನ್ನು ಕೇಳಲೂ ಇಲ್ಲ, ನಿಮ್ಮನ್ನು ರಕ್ಷಿಸಲೂ ಇಲ್ಲ.


ಫರೋಹನು ಇಸ್ರಯೇಲರಿಗೆ ಹೋಗಲು ಅಪ್ಪಣೆಕೊಟ್ಟಾಗ ದೇವರು ಅವರನ್ನು ಹತ್ತಿರವಾಗಿದ್ದ ಫಿಲಿಷ್ಟಿಯರ ಪ್ರಾಂತ್ಯದ ಮಾರ್ಗವಾಗಿ ಕರೆದುತರಲಿಲ್ಲ. ಬದಲಿಗೆ ಕೆಂಪು ಸಮುದ್ರದ ಬಳಿಯಿರುವ ಮರುಳುಗಾಡಿನ ಬಳಸು ದಾರಿಯಲ್ಲೇ ನಡೆಸಿಕೊಂಡು ಬಂದರು. ಏಕೆಂದರೆ, “ಯುದ್ಧ ತೊಡಗಿದರೆ ಇವರು ಎದೆಗೆಟ್ಟು ಈಜಿಪ್ಟಿಗೆ ಹಿಂದಿರುಗಿಯಾರು” ಎಂದುಕೊಂಡರು ದೇವರು.


ಈ ದುಃಖಕರವಾದ ಮಾತುಗಳನ್ನು ಕೇಳಿ, ಇಸ್ರಯೇಲರು ಶೋಕತಪ್ತರಾದರು; ಒಬ್ಬರೂ ಒಡವೆ ವಸ್ತುಗಳನ್ನು ಧರಿಸಿಕೊಳ್ಳಲಿಲ್ಲ.


ಅಲ್ಲಿ ‘ನೆಫೀಲಿಯರನ್ನು’ ಅಂದರೆ ನೆಫೀಲಿಯನ ವಂಶದವರಾದ ‘ಅನಕಿಮ್’ರನ್ನು ನೋಡಿದೆವು. ಅವರ ಮುಂದೆ ನಾವು ಮಿಡತೆಗಳಂತೆ ಇದ್ದೆವು. ಅವರಿಗೂ ನಾವು ಹಾಗೆಯೆ ಕಾಣಿಸಿಕೊಂಡೆವು,” ಎಂದರು.


ಇಸ್ರಯೇಲರೆಲ್ಲರು ಮೋಶೆ ಮತ್ತು ಆರೋನರ ವಿರುದ್ಧ ಗುಣಗುಟ್ಟಿದರು. “ಈಜಿಪ್ಟಿನಲ್ಲೇ ನಾವು ಸತ್ತಿದ್ದರೆ ಚೆನ್ನಾಗಿತ್ತು.


ಆದರೂ ನೀವು ಅಲ್ಲಿಗೆ ಹತ್ತಿಹೋಗದೆ ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಉಲ್ಲಂಘಿಸಿದಿರಿ;


ದುಃಖ ತಾಳಲಾಗದೆ ದೀರ್ಘಕಾಲ ಅತ್ತು ಗೋಳಾಡಿದರು.


ಇಷ್ಟಾದರೂ ಪಾಪಮಾಡುತ ಬಂದವರು ಪದೇ ಪದೇ I ದೇವರ ಅದ್ಭುತಕಾರ್ಯಗಳನು ತೊರೆದರು ನಂಬದೆ II


ಅಶೇರ್ ಕುಲದ ಮಿಕಾಯೇಲನ ಮಗ ಸೆತೂರ್


ಅದೂ ಅಲ್ಲದೆ, ಕಾದೇಶ್ ಬರ್ನೇಯದಲ್ಲಿ ಸರ್ವೇಶ್ವರ ನಿಮಗೆ, ‘ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ನಾಡನ್ನು ಸ್ವಾಧೀನಮಾಡಿಕೊಳ್ಳಿ,’ ಎಂದು ಅಪ್ಪಣೆ ಕೊಟ್ಟಾಗಲೂ ನೀವು ನಿಮ್ಮ ದೇವರಾದ ಸರ್ವೇಶ್ವರನ ಆ ಆಜ್ಞೆಯನ್ನು ಧಿಕ್ಕರಿಸಿ ಅವರನ್ನು ನಂಬದೆ ಅವರ ಮಾತನ್ನು ಅಲಕ್ಷ್ಯಮಾಡಿದಿರಿ.


ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗೆಡಿಸಿದರು. ನಾನಾದರೋ ನನ್ನ ದೇವರಾದ ಸರ್ವೇಶ್ವರನನ್ನೇ ಸಂಪೂರ್ಣವಾಗಿ ನಂಬಿ ಶ್ರದ್ಧೆಯಿಂದ ಅನುಸರಿಸಿದೆ.


ಗೊಣಗುಟ್ಟಿದರು ತಮ್ಮ ಗುಡಾರಗಳಲಿ I ನಂಬಿಕೆಯಿಡಲಿಲ್ಲ ಆತನ ಮಾತಿನಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು