Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:12 - ಕನ್ನಡ ಸತ್ಯವೇದವು C.L. Bible (BSI)

12 ಆಗಲಿ, ನಾನು ಇವರಿಗೆ ದೊಡ್ಡ ರೋಗವನ್ನು ಬರಮಾಡಿ ಇವರನ್ನು ನಿರ್ಮೂಲ ಮಾಡಿಬಿಡುತ್ತೇನೆ; ಇವರಿಗಿಂತ ದೊಡ್ಡದೂ ಬಲಿಷ್ಠವೂ ಆದ ಜನಾಂಗವೊಂದನ್ನು ನಿನ್ನಿಂದಲೇ ಹುಟ್ಟಿಸುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ಇವರಿಗೆ ವ್ಯಾಧಿಯನ್ನು ಉಂಟುಮಾಡಿ ಇವರನ್ನು ನಿರ್ಮೂಲಮಾಡುವೆನು. ಈ ಜನರಿಗಿಂತ ನಿನ್ನನ್ನು ದೊಡ್ಡದಾಗಿಯೂ, ಬಲಿಷ್ಠವಾಗಿಯೂ ಇರುವ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗಲಿ, ನಾನು ಇವರಿಗೆ ವ್ಯಾಧಿಯನ್ನುಂಟುಮಾಡಿ ಇವರನ್ನು ನಿರ್ಮೂಲಮಾಡಿ ಈ ಜನಕ್ಕಿಂತ ಹೆಚ್ಚಾಗಿಯೂ ಬಲಿಷ್ಠವಾಗಿಯೂ ಇರುವ ಜನಾಂಗವನ್ನು ನಿನ್ನ ಮೂಲಕವೇ ಹುಟ್ಟಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸರಿ, ನಾನು ಇವರಿಗೆ ವ್ಯಾಧಿಯನ್ನು ಉಂಟುಮಾಡಿ ಇವರನ್ನು ನಿರ್ಮೂಲಮಾಡಿ ಈ ಜನಕ್ಕಿಂತ ಹೆಚ್ಚಾಗಿಯೂ ಬಲಿಷ್ಠವಾಗಿಯೂ ಇರುವ ಜನಾಂಗವನ್ನು ನಿನ್ನ ಮೂಲಕವೇ ಹುಟ್ಟಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲ ಮಾಡುವೆನು. ನಿನ್ನನ್ನು ಅವರಿಗಿಂತ ದೊಡ್ಡದಾದ ಮತ್ತು ಬಲವುಳ್ಳ ಜನಾಂಗವನ್ನಾಗಿ ಮಾಡುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:12
9 ತಿಳಿವುಗಳ ಹೋಲಿಕೆ  

ಆದಕಾರಣ ನೀನು ನನಗೆ ಅಡ್ಡಬರಬೇಡ. ನನ್ನ ಕೋಪಾಗ್ನಿ ಉರಿಯಲಿ. ಅವರನ್ನು ಸುಟ್ಟು ಭಸ್ಮ ಮಾಡುವೆನು. ಬಳಿಕ ನಿನ್ನಿಂದಲೇ ಬೇರೆ ಒಂದು ದೊಡ್ಡ ಜನಾಂಗ ಉದಯಿಸುವಂತೆ ಮಾಡುವೆನು,” ಎಂದು ಹೇಳಿದರು.


ಸರ್ವೇಶ್ವರಸ್ವಾಮಿ ಮತ್ತೆ ಇಸ್ರಯೇಲರ ಮೇಲೆ ಕೋಪಗೊಂಡರು. ಇಸ್ರಯೇಲ್ ಹಾಗು ಯೆಹೂದ್ಯಕುಲಗಳವರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದರು.


ಇಪ್ಪತ್ತನಾಲ್ಕು ಸಾವಿರ ಮಂದಿ ಈಗಾಗಲೇ ಈ ಜಾಡ್ಯದಿಂದ ಸತ್ತಿದ್ದರು.


ಮೋಶೆ ಮತ್ತು ಆರೋನರು, “ಹಿಬ್ರಿಯರ ದೇವರು ನಮಗೆ ದರ್ಶನವಿತ್ತರು. ಅಪ್ಪಣೆ ಆದರೆ ನಾವು ಮರುಭೂಮಿಯಲ್ಲಿ ಮೂರು ದಿವಸದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯರ್ಪಿಸಿ ಬರುತ್ತೇವೆ. ಹಾಗೆ ಮಾಡದೆಹೋದರೆ ಅವರು ನಮ್ಮನ್ನು ವ್ಯಾಧಿಯಿಂದಲೋ ಕತ್ತಿಯಿಂದಲೋ ಸಂಹಾರ ಮಾಡುವರು,” ಎಂದರು.


ಶತ್ರುಗಳ ಕತ್ತಿಯ ಮೂಲಕ ನಿಮ್ಮನ್ನು ಸಂಹರಿಸುವೆನು.ನೀವು ನನ್ನ ನಿಬಂಧನವನ್ನು ಮೀರಿದುದರಿಂದ ಆ ಕತ್ತಿ ಪ್ರತಿದಂಡನೆ ಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ಅಂಟುರೋಗವುಂಟಾಗುವಂತೆ ಮಾಡುವೆನು. ಹೀಗೆ ನೀವು ಶತ್ರುಗಳಿಗೆ ಶರಣಾಗುವಿರಿ.


ವ್ಯಾಧಿ ನಿಮಗೆ ಹತ್ತಿಕೊಂಡೇ ಇರುವಂತೆ ಮಾಡಿ ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಸರ್ವೇಶ್ವರ ಮಾಡುವರು.


ಆದರೆ ಇಸ್ರಯೇಲ್ ವಂಶದವರು ಮರುಭೂಮಿಯಲ್ಲಿ ನನ್ನ ವಿರುದ್ಧ ದಂಗೆಯೆದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ಧಿಕ್ಕರಿಸಿದರು. ಮುಖ್ಯವಾಗಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆಗ ನಾನು ‘ಮರುಭೂಮಿಯಲ್ಲಿರುವ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ ಇವರನ್ನು ಧ್ವಂಸಮಾಡುವೆನು’ ಎಂದುಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು