ಅರಣ್ಯಕಾಂಡ 14:19 - ಕನ್ನಡ ಸತ್ಯವೇದವು C.L. Bible (BSI)19 ನಾವು ಈಜಿಪ್ಟ್ ದೇಶವನ್ನು ಬಿಟ್ಟು ಬಂದ ದಿನದಿಂದ ಇಂದಿನವರೆಗೆ ಈ ಜನರ ಪಾಪಗಳನ್ನು ಕ್ಷಮಿಸಿದ್ದೀರಿ. ಅದೇ ಪ್ರಕಾರ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತೇನೆ,” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾವು ಐಗುಪ್ತ ದೇಶದಿಂದ ಬಂದ ದಿನದಿಂದ ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾವು ಐಗುಪ್ತದೇಶದಿಂದ ಬಂದದ್ದು ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷವಿುಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷವಿುಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಾವು ಈಜಿಪ್ಟಿನಿಂದ ಬಂದದ್ದು ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಿಮ್ಮ ಪ್ರೀತಿಯು ದೊಡ್ಡದಾಗಿರುವ ಪ್ರಕಾರವೂ ನೀವು ಈಜಿಪ್ಟಿನಿಂದ ಇಲ್ಲಿಯವರೆಗೆ ಈ ಜನರ ಪಾಪಗಳನ್ನು ಮನ್ನಿಸಿದ ಪ್ರಕಾರ ಈಗಲೂ ಈ ಜನರ ಪಾಪವನ್ನು ಮನ್ನಿಸಿರಿ,” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿ |
ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.