ಅರಣ್ಯಕಾಂಡ 14:2 - ಕನ್ನಡ ಸತ್ಯವೇದವು C.L. Bible (BSI)2 ಇಸ್ರಯೇಲರೆಲ್ಲರು ಮೋಶೆ ಮತ್ತು ಆರೋನರ ವಿರುದ್ಧ ಗುಣಗುಟ್ಟಿದರು. “ಈಜಿಪ್ಟಿನಲ್ಲೇ ನಾವು ಸತ್ತಿದ್ದರೆ ಚೆನ್ನಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, “ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಸ್ರಾಯೇಲ್ಯರೆಲ್ಲರೂ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟಿ - ನಾವು ಐಗುಪ್ತದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಮೇಲಾಗಿತ್ತು; ಈ ಅರಣ್ಯದಲ್ಲಿಯಾದರೂ ಸತ್ತಿದ್ದರೆ ಮೇಲಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಇಸ್ರೇಲರು ಮೋಶೆ ಆರೋನರ ವಿರುದ್ಧ ಗೊಣಗುಟ್ಟಿದರು. ಜನರೆಲ್ಲರೂ ಒಟ್ಟಾಗಿ ಮೋಶೆ ಆರೋನರ ಬಳಿಗೆ ಬಂದು, “ನಾವು ಈಜಿಪ್ಟಿನಲ್ಲಿಯಾಗಲೀ ಅಥವಾ ಈ ಮರುಭೂಮಿಯಲ್ಲಾಗಲಿ ಸತ್ತಿದ್ದರೆ ಒಳ್ಳೆಯದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇಸ್ರಾಯೇಲರೆಲ್ಲರು ಮೋಶೆಗೂ ಆರೋನನಿಗೂ ವಿರೋಧವಾಗಿ ಗೊಣಗುಟ್ಟಿದರು. ಅವರು, “ನಾವು ಈಜಿಪ್ಟ್ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಮರುಭೂಮಿಯಲ್ಲಾದರೂ ಸತ್ತಿದ್ದರೆ ಚೆನ್ನಾಗಿತ್ತು. ಅಧ್ಯಾಯವನ್ನು ನೋಡಿ |