ಅರಣ್ಯಕಾಂಡ 14:21 - ಕನ್ನಡ ಸತ್ಯವೇದವು C.L. Bible (BSI)21 ಆದರೂ ನನ್ನ ಜೀವದಾಣೆ ಸರ್ವೇಶ್ವರನ ಮಹಿಮೆ ಅಖಿಲ ವಿಶ್ವವನ್ನು ತುಂಬಿದೆಯೆಂಬ ಸತ್ಯವಾಕ್ಯದ ಆಣೆ. ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ವಾಗ್ದತ್ತ ನಾಡನ್ನು ನೋಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದರೆ ನನ್ನ ಜೀವದಾಣೆ, ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆದಾಗ್ಯೂ ನನ್ನ ಜೀವದಾಣೆ, ಮತ್ತು ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರಬೇಕೆಂಬುವ ನಿಶ್ಚಯ ವಾಕ್ಯದ ಆಣೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದಾಗ್ಯೂ ನನ್ನ ಜೀವದಾಣೆ ಮತ್ತು ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರಬೇಕೆಂಬುವ ನಿಶ್ಚಯ ವಾಕ್ಯದ ಆಣೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ನನ್ನ ಜೀವದಾಣೆ, ಭೂಮಿಯೆಲ್ಲಾ ಯೆಹೋವ ದೇವರ ಮಹಿಮೆಯಿಂದ ತುಂಬಿರುವುದು. ಅಧ್ಯಾಯವನ್ನು ನೋಡಿ |
ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”