ಅರಣ್ಯಕಾಂಡ 14:22 - ಕನ್ನಡ ಸತ್ಯವೇದವು C.L. Bible (BSI)22 ಈಜಿಪ್ಟ್ ದೇಶದಲ್ಲೂ ಮರುಭೂಮಿಯಲ್ಲೂ ನಾನು ಮಾಡಿದ ಮಹತ್ಕಾರ್ಯಗಳನ್ನು ಹಾಗೂ ನನ್ನ ಅಸ್ತಿತ್ವದ ತೇಜಸ್ಸನ್ನು ಈ ಮಾನವರೆಲ್ಲರೂ ನೋಡಿದ್ದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ. ಬದಲಿಗೆ ನನ್ನನ್ನು ಪದೇ ಪದೇ ಪರೀಕ್ಷಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಈ ಮನುಷ್ಯರೆಲ್ಲರು ಐಗುಪ್ತದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿರುವ ಮಹತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ ಪದೇಪದೇ ನನ್ನನ್ನು ಪರೀಕ್ಷಿಸಿದದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಾನು ನಡಿಸಿರುವ ಮಹಾತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಜನರೆಲ್ಲರೂ ಪದೇಪದೇ ನನ್ನನ್ನು ಪರೀಕ್ಷಿಸಿದ್ದರಿಂದ ಮತ್ತು ನನಗೆ ವಿಧೇಯರಾಗದಿದ್ದ ಕಾರಣ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಏಕೆಂದರೆ ನನ್ನ ಮಹಿಮೆಯನ್ನೂ, ಈಜಿಪ್ಟ್ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ ನಾನು ಮಾಡಿದ ಸೂಚಕಕಾರ್ಯಗಳನ್ನೂ ನೋಡಿದ ಈ ಸಕಲ ಜನರು, ನನ್ನನ್ನು ಈಗ ಹತ್ತು ಸಾರಿ ಪರೀಕ್ಷಿಸಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ, ಅಧ್ಯಾಯವನ್ನು ನೋಡಿ |