ಅರಣ್ಯಕಾಂಡ 14:29 - ಕನ್ನಡ ಸತ್ಯವೇದವು C.L. Bible (BSI)29 ನಿಮ್ಮ ಶವಗಳು ಈ ಮರುಭೂಮಿಯಲ್ಲೇ ಬೀಳುವುವು. ನೀವು ನನಗೆ ವಿರೋಧವಾಗಿ ಗೊಣಗಿದ್ದರಿಂದ ನಿಮ್ಮಲ್ಲಿ ಎಣಿಕೆಯಾದವರೆಲ್ಲರೂ ಅಂದರೆ ಇಪ್ಪತ್ತು ವರ್ಷ ಮತ್ತು ಮೇಲ್ಪಟ್ಟ ವಯಸ್ಸುಳ್ಳವರೆಲ್ಲರೂ ಮರುಭೂಮಿಯಲ್ಲೇ ಸಾಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನೀವು ನನಗೆ ವಿರುದ್ಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಎಣಿಕೆಯಾದವರೆಲ್ಲರು ಅಂದರೆ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರೆಲ್ಲರೂ ಅರಣ್ಯದಲ್ಲಿಯೇ ಸಾಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು. ನೀವು ನನಗೆ ವಿರೋಧವಾಗಿ ಗುಣುಗುಟ್ಟಿದದರಿಂದ ನಿಮ್ಮಲ್ಲಿ ಲೆಕ್ಕಿಸಲ್ಪಟ್ಟವರೆಲ್ಲರೂ ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ [ಅರಣ್ಯದಲ್ಲೇ ಸಾಯುವರು]. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ನಿಮ್ಮ ಶವಗಳು ಈ ಮರುಭೂಮಿಯಲ್ಲಿಯೇ ಬೀಳುವವು. ನೀವು ನನಗೆ ವಿರೋಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಲೆಕ್ಕಿಸಲ್ಪಟ್ಟವರೆಲ್ಲರೂ ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ ಮರುಭೂಮಿಯಲ್ಲೇ ಸಾಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಈ ಮರುಭೂಮಿಯಲ್ಲಿ ನನಗೆ ವಿರೋಧವಾಗಿ ಗೊಣಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸತ್ತು ಹೋಗುವಿರಿ. ಅಧ್ಯಾಯವನ್ನು ನೋಡಿ |