Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:31 - ಕನ್ನಡ ಸತ್ಯವೇದವು C.L. Bible (BSI)

31 ಆದರೆ ನಿಮ್ಮ ಮಕ್ಕಳನ್ನು, ಪರರ ಪಾಲಾಗುವರು ಎಂದು ಹೇಳಿದ ನಿಮ್ಮ ಚಿಕ್ಕಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದ ನಾಡನ್ನು ಅವರು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದರೆ ಇತರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದು ಹೇಳಿದ ದೇಶವನ್ನು ಅವರು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಸೇರಿಸುವೆನು; ನೀವು ಬೇಡವೆಂದು ಹೇಳಿದ ದೇಶವನ್ನು ಅವರು ಅನುಭೋಗಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಪ್ರವೇಶಿಸುವಂತೆ ಮಾಡುವೆನು. ನೀವು ತಿರಸ್ಕರಿಸಿದ ದೇಶವನ್ನು ಅವರು ಅನುಭೋಗಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದರೆ ಸೆರೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು, ನೀವು ಅಲಕ್ಷ್ಯಮಾಡಿದ ದೇಶವನ್ನು ಅವರು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:31
14 ತಿಳಿವುಗಳ ಹೋಲಿಕೆ  

ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರು ಹಾಗು ಒಳ್ಳೆಯದು, ಕೆಟ್ಟದು ಎಂಬುದನ್ನು ಅರಿಯದ ನಿಮ್ಮ ಹಸುಳೆಗಳು ಅಲ್ಲಿಗೆ ಸೇರುವರು; ಅವರಿಗೇ ಆ ನಾಡನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.


ಅವರೊ ಬೇಡವೆಂದರು ಆ ಚೆಲುವಿನ ನಾಡನು I ನಂಬದೆ ಹೋದರು ಅವನಿತ್ತಾ ವಾಗ್ದಾನವನು II


ಮೋಶೆ ಮತ್ತು ಯಾಜಕ ಆರೋನನು ಸೀನಾಯಿ ಮರುಭೂಮಿಯಲ್ಲಿ ಇಸ್ರಯೇಲರ ಜನಗಣತಿ ಮಾಡಿದಾಗ ಎಣಿಕೆಯಾದವರಲ್ಲಿ ಒಬ್ಬರಾದರೂ ಇವರಲ್ಲಿರಲಿಲ್ಲ.


ಹೆಚ್ರೋನನಿಂದ ಹೆಚ್ರೋನ್ಯರು ಹಾಗು ಕರ್ಮೀಯನಿಂದ ಕರ್ಮೀಯರು.


ಕತ್ತಿಯ ಬಾಯಿಗೆ ತುತ್ತಾಗಿಸಲು ಸರ್ವೇಶ್ವರ ಸ್ವಾಮಿ ನಮ್ಮನ್ನೇಕೆ ಈ ನಾಡಿಗೆ ಬರಮಾಡಿದರು? ನಮ್ಮ ಮಡದಿ ಮಕ್ಕಳು ಪರರ ಪಾಲಾಗುವರಲ್ಲಾ? ನಾವು ಮರಳಿ ಈಜಿಪ್ಟ್ ದೇಶಕ್ಕೆ ಹೋಗುವುದೇ ಒಳಿತಲ್ಲವೆ?” ಎಂದು ಹೇಳಿಕೊಂಡರು.


‘ಅವಹೇಳನ ಮಾಡುವವರೇ, ಗಮನಿಸಿರಿ; ದಿಗ್ಭ್ರಮೆಗೊಂಡು ದಿಕ್ಕುಪಾಲಾಗಿರಿ; ನಿಮ್ಮ ಕಾಲದಲ್ಲೇ ನಾನೊಂದು ಮಹತ್ಕಾರ್ಯವನ್ನು ಮಾಡುತ್ತೇನೆ; ಅದನ್ನು ನೀವು ನಂಬಲಾರಿರಿ, ಇನ್ನೊಬ್ಬರು ವಿವರಿಸಿ ಹೇಳಿದರೂ ನಂಬಲಾರಿರಿ’, “ ಎಂದು ಹೇಳಿದನು.


ಆದರೂ ಆಹ್ವಾನಿತರು ಅಲಕ್ಷ್ಯಮಾಡಿದರು. ಒಬ್ಬ ತೋಟಕ್ಕೆ ಹೊರಟುಬಿಟ್ಟ, ಇನ್ನೊಬ್ಬ ವ್ಯಾಪಾರಕ್ಕೆ ಹೊರಟುಹೋದ.


ನನ್ನ ಆಲೋಚನೆಯನ್ನು ಅವರು ಕೇಳಲಿಲ್ಲ, ನನ್ನ ಪ್ರತಿಯೊಂದು ಎಚ್ಚರಿಕೆಯ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ.


ನನ್ನ ಬುದ್ಧಿವಾದವನ್ನು ಅಲಕ್ಷ್ಯಮಾಡಿದಿರಿ, ನನ್ನ ತಿದ್ದುಪಾಟನ್ನು ತಳ್ಳಿಬಿಟ್ಟಿರಿ.


ಆಗ ಯಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯನ್ನೂ ಕೊಟ್ಟ. ಏಸಾವನು ತಿಂದು, ಕುಡಿದು, ಎದ್ದು ಹೋದ. ಜ್ಯೇಷ್ಠತನದ ಹಕ್ಕುಬಾಧ್ಯತೆಗೆ ಏಸಾವನು ಕೊಟ್ಟ ಮರ್ಯಾದೆ ಇಷ್ಟೇ!


ಆಮೇಲೆ ನಾನು ಅವರ ಸಂತಾನದವರಿಗೆ - ‘ನೀವು ನಿಮ್ಮ ಪಿತೃಗಳ ಕಟ್ಟಳೆಗಳನ್ನು ಅನುಸರಿಸದೆ ಅವರ ವಿಧಿಗಳನ್ನು ಕೈಗೊಳ್ಳದೆ ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿ;


ಅವರಿಗೆ ಬದಲಾಗಿ ಹುಟ್ಟಿದ ಅವರ ಗಂಡುಮಕ್ಕಳಿಗೆ ಯೆಹೋಶುವ ಸುನ್ನತಿ ಮಾಡಿದನು. ದಾರಿಯಲ್ಲಿ ಯಾರೂ ಅವರಿಗೆ ಸುನ್ನತಿ ಮಾಡಿರಲಿಲ್ಲ. ಆದ್ದರಿಂದ ಅವರು ಸುನ್ನತಿಯಿಲ್ಲದವರಾಗಿದ್ದರು.


ಅಂತೆಯೇ ಸೇರಿ ಸ್ವಾಧೀನಮಾಡಿಕೊಂಡರು ಆ ನಾಡನು ಅವರಿಗಧೀನಪಡಿಸಿದಿರಿ ಅದರ ರಾಜರನು, ಪ್ರಜೆಗಳನು, ನಿವಾಸಿಗಳನು, ಆ ಕಾನಾನ್ಯರನು, ತಮಗಿಷ್ಟಾನುಸಾರ ನಡೆಸಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು