ಅರಣ್ಯಕಾಂಡ 14:40 - ಕನ್ನಡ ಸತ್ಯವೇದವು C.L. Bible (BSI)40 ಮಾರನೆಯ ದಿನ ಬೆಳಿಗ್ಗೆ ಜನರು ಎದ್ದು, “ನಾವು ಪಾಪ ಮಾಡಿರುವುದೇನೋ ನಿಜ; ಸರ್ವೇಶ್ವರ ವಾಗ್ದಾನ ಮಾಡಿದ ಸ್ಥಳಕ್ಕೆ ಏರಿಹೋಗೋಣ ಬನ್ನಿ,” ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋಗಲಾರಂಭಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಮರುದಿನ ಬೆಳಿಗ್ಗೆ ಜನರು ಎದ್ದು, “ನಾವು ಪಾಪ ಮಾಡಿರುವುದು ನಿಜ; ಯೆಹೋವನು ವಾಗ್ದಾನ ಮಾಡಿದ ಸ್ಥಳಕ್ಕೆ ಹತ್ತೋಣ ಬನ್ನಿ” ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಮರುದಿನ ಬೆಳಿಗ್ಗೆ ಜನರು ಎದ್ದು - ನಾವು ಪಾಪಮಾಡಿರುವದು ನಿಜ; ಯೆಹೋವನು ವಾಗ್ದಾನಮಾಡಿದ ಸ್ಥಳಕ್ಕೆ ಹತ್ತೋಣ ಬನ್ನಿ ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋಗುವವರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಮರುದಿನ ಬೆಳಿಗ್ಗೆ ಜನರು ಎದ್ದು, “ನಾವು ಪಾಪ ಮಾಡಿರುವುದು ನಿಜ. ಯೆಹೋವನು ವಾಗ್ದಾನ ಮಾಡಿರುವ ದೇಶಕ್ಕೆ ಹೋಗಲು ನಾವು ಈಗ ಸಿದ್ಧರಾಗಿದ್ದೇವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಮರುದಿವಸ ಬೆಳಿಗ್ಗೆ ಅವರು ಎದ್ದು, ಬೆಟ್ಟದ ತುದಿಯ ಮೇಲಕ್ಕೆ ಏರಿ, “ಇಗೋ, ಯೆಹೋವ ದೇವರು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವುದಕ್ಕೆ ಇದ್ದೇವೆ. ನಾವು ಪಾಪಮಾಡಿದ್ದೇವೆ,” ಎಂದರು. ಅಧ್ಯಾಯವನ್ನು ನೋಡಿ |