Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:6 - ಕನ್ನಡ ಸತ್ಯವೇದವು C.L. Bible (BSI)

6 ಅಲ್ಲದೆ ನಾಡನ್ನು ಸಂಚರಿಸಿ ನೋಡಿ ಬಂದವರಲ್ಲಿ ನೂನನ ಮಗ ಯೆಹೋಶುವನು ಮತ್ತು ಯೆಫುನ್ನೆಯ ಮಗ ಕಾಲೇಬನು ಸಿಟ್ಟಿನಿಂದ ತಮ್ಮ ಬಟ್ಟೆಗಳನ್ನೇ ಹರಿದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮತ್ತು ದೇಶವನ್ನು ಸಂಚರಿಸಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಪುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬಂದವರಲ್ಲಿ ಇಬ್ಬರಾಗಿದ್ದರು. ಅವರು ಬೇಸರಗೊಂಡು ತಮ್ಮ ಬಟ್ಟೆಗಳನ್ನು ಹರಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿದ್ದ ನೂನನ ಮಗ ಯೆಹೋಶುವನೂ, ಯೆಫುನ್ನೆಯ ಮಗ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:6
22 ತಿಳಿವುಗಳ ಹೋಲಿಕೆ  

ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ನಿವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಸೇರುವುದಿಲ್ಲ.


ಮೋಶೆಗೆ ವಿರುದ್ಧ ಗುಣಗುಟ್ಟುತ್ತಿದ್ದವರನ್ನು ಕಾಲೇಬನು ಸಮಾಧಾನಗೊಳಿಸುತ್ತಾ, “ನಾವು ಧೈರ್ಯದಿಂದ ಆ ಮಲೆನಾಡಿಗೆ ಹೋಗಿ ಅದನ್ನು ಸ್ವಾಧೀನ ಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಮ್ಮಿಂದ ಸಾಧ್ಯ,” ಎಂದನು.


ಅವರಲ್ಲಿ ನೂನನ ಮಗ ಯೆಹೋಶುವನು ಮತ್ತು ಯೆಫುನ್ನೆಯ ಮಗ ಕಾಲೇಬನು ಉಳಿದುಕೊಂಡರು.


ಎಫ್ರಾಯೀಮ್ ಕುಲದ ನೂನನ ಮಗ ಹೋಶೇಯ


ಯೆಹೂದ ಕುಲದ ಯೆಫುನ್ನೆಯ ಮಗನಾದ ಕಾಲೇಬ


ದುಃಖ ತಾಳಲಾಗದೆ ತನ್ನ ಬಟ್ಟೆಯನ್ನು ಹರಿದುಕೊಂಡ; ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡ; ತನ್ನ ಮಗನಿಗಾಗಿ ಬಹುದಿನಗಳವರೆಗೂ ಅತ್ತು ಪ್ರಲಾಪಿಸಿದ.


ರೂಬೇನನು ಮರಳಿ ಆ ಬಾವಿಯ ಬಳಿಗೆ ಬಂದು ನೋಡಿದನು. ಅದರಲ್ಲಿ ಜೋಸೆಫನು ಇರಲಿಲ್ಲ.


ಇದನ್ನು ಕೇಳಿದ್ದೇ ಪ್ರಧಾನಯಾಜಕನು ತನ್ನ ಉಡುಪನ್ನು ಕೋಪದಿಂದ ಹರಿದುಕೊಂಡನು. “ಇವನು ದೇವದೂಷಣೆ ಆಡಿದ್ದಾನೆ. ಇನ್ನು ನಮಗೆ ಸಾಕ್ಷಿಗಳು ಏತಕ್ಕೆ?


ಆಗ ಯೋಬನು ಎದ್ದು ನಿಂತು, ದುಃಖವನ್ನು ತಾಳಲಾರದೆ ತನ್ನ ಮೇಲಂಗಿಯನ್ನು ಹರಿದುಬಿಟ್ಟ, ತಲೆಯನ್ನು ಬೋಳಿಸಿಕೊಂಡ, ನೆಲದ ಮೇಲೆ ಬಿದ್ದು, ದೇವರಿಗೆ ಸಾಷ್ಟಾಂಗವೆರಗಿ:


ಬಳಿಕ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅಗಿದ್ದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ, ಎಂಬವರು ಸಿಟ್ಟಿನಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.


ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣೀತಟ್ಟುಗಳನ್ನು ಉಟ್ಟುಕೊಂಡು, ಸಂತಾಪಸೂಚಿಸುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ,” ಎಂದು ಆಜ್ಞಾಪಿಸಿದನು. ತಾನೂ ಚಟ್ಟದ ಹಿಂದೆ ಹೋದನು.


ಆಕೆಯನ್ನು ಕಾಣುತ್ತಲೆ ಅವನು ದುಃಖತಾಳಲು ಆಗದೆ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ ನನ್ನ ಮಗಳೇ, ನೀನು ನನ್ನನ್ನು ಎಂಥಾ ಯಾತನೆಗೆ ಈಡುಮಾಡಿದೆ; ನನಗೆ ಮಹಾಸಂಕಟವನ್ನುಂಟುಮಾಡಿದೆ! ನಾನು ಬಾಯಾರೆ ಸರ್ವೇಶ್ವರನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾಗದು,” ಎಂದು ಕೂಗಿಕೊಂಡನು.


ಆಗ ಯೆಹೋಶುವನು ಮತ್ತು ಇಸ್ರಯೇಲರ ಹಿರಿಯರು ದುಃಖ ತಾಳಲಾರದೆ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡು ಸಾಯಂಕಾಲದವರೆಗೆ ಸರ್ವೇಶ್ವರನ ಮಂಜೂಷದ ಮುಂದೆ ಅಧೋಮುಖರಾಗಿ ಬಿದ್ದಿದ್ದರು.


ನನ್ನ ದಾಸನಾದ ಕಾಲೇಬನಾದರೋ ಅವರಂಥ ಮನಸ್ಸುಳ್ಳವನಾಗಿರದೆ ಮನಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದಿದ್ದಾನೆ. ಆದ್ದರಿಂದ ಅವನು ಸಂಚರಿಸಿ ಬಂದ ಆ ನಾಡಿಗೆ ಅವನನ್ನು ಸೇರಿಸುವೆನು. ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.


ಆಗ ಅವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಿದರು; ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂದಿರುಗಿ ಬಂದರು.


ಒಡನೆಯೇ, ಪ್ರಧಾನಯಾಜಕನು ಕೋಪದಿಂದ ತನ್ನ ಉಡುಪನ್ನೇ ಹರಿದುಕೊಂಡನು. “ಇನ್ನು ನಮಗೆ ಸಾಕ್ಷಿಗಳೇತಕ್ಕೆ? ಇವನಾಡಿದ ದೇವದೂಷಣೆಯನ್ನು ನೀವೇ ಕೇಳಿದ್ದೀರಿ! ನಿಮ್ಮ ಅಭಿಪ್ರಾಯ ಏನು?” ಎಂದು ಸಭೆಯನ್ನು ಕೇಳಿದನು.


ಇದನ್ನು ಕೇಳಿದ ಬಾರ್ನಬ ಮತ್ತು ಪೌಲರು ಸಿಟ್ಟಿನಿಂದ ತಮ್ಮ ಮೇಲಂಗಿಗಳನ್ನು ಹರಿದು, ಜನಸಂದಣಿಯತ್ತ ಧಾವಿಸಿ ಹೀಗೆಂದು ಕೂಗಿಹೇಳಿದರು:


ಆಗ ಮೋಶೆ ಮತ್ತು ಆರೋನರು ಇಸ್ರಯೇಲರ ಸರ್ವಸಮೂಹದ ಮುಂದೆ ಅಡ್ಡಬಿದ್ದರು.


ಇಸ್ರಯೇಲರ ಸರ್ವಸಮೂಹದವರಿಗೆ ಹೀಗೆಂದರು: “ನಾವು ಸಂಚರಿಸಿ ನೋಡಿಬಂದ ನಾಡು ಅತ್ಯುತ್ತಮವಾದುದು;


ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ, “ಸರ್ವೇಶ್ವರ ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಭಕ್ತನಾದ ಮೋಶೆಗೆ ಹೇಳಿದ್ದು ನಿಮಗೆ ಚೆನ್ನಾಗಿ ಗೊತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು