Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:8 - ಕನ್ನಡ ಸತ್ಯವೇದವು C.L. Bible (BSI)

8 ಹಾಲೂ ಜೇನೂ ಹರಿಯುವ ನಾಡದು! ಸರ್ವೇಶ್ವರನಿಗೆ ಮೆಚ್ಚುಗೆಯಾದರೆ ಅದರಲ್ಲಿ ನಮ್ಮನ್ನು ಸೇರಿಸುವರು, ಅದನ್ನೇ ನಮ್ಮ ಸ್ವಾಧೀನಕ್ಕೆ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಹಾಲೂ, ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದು ಹಾಲೂ ಜೇನೂ ಹರಿಯುವ ದೇಶ; ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಅದರಲ್ಲಿ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅದು ಹಾಲೂ ಜೇನೂ ಹರಿಯುವ ದೇಶ. ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಆ ದೇಶದೊಳಗೆ ನಮ್ಮನ್ನು ಕರೆದೊಯ್ದು ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ನಮ್ಮನ್ನು ಇಷ್ಟಪಟ್ಟರೆ ಹಾಲೂ ಜೇನೂ ಹರಿಯುವ ದೇಶವಾಗಿರುವ ಆ ದೇಶಕ್ಕೆ ನಮ್ಮನ್ನು ಬರಮಾಡಿ, ಅದನ್ನು ನಮಗೆ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:8
15 ತಿಳಿವುಗಳ ಹೋಲಿಕೆ  

ಬಿಕ್ಕಟ್ಟಿನಿಂದ ಬಿಡಿಸಿ ತಂದನು ಬಯಲಿಗೆ ಅಕ್ಕರೆಯಿಂದ ಮೆಚ್ಚಿ ನನಗಾದನು ರಕ್ಷೆ.


“ಎನ್ನ ಮನದನ್ನೆ” ಎನಿಸಿಕೊಳ್ಳುವೆ ನೀನು “ಸುವಿವಾಹಿತೆ” ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ.


ಮೋಶೆಗೆ, “ನೀವು ನಮ್ಮನ್ನು ಕಳಿಸಿದ ನಾಡಿಗೆ ಹೋಗಿದ್ದೆವು. ಅದು ಹಾಲು-ಜೇನು ಹರಿಯುವಂಥ ನಾಡು. ಅಲ್ಲಿನ ಹಣ್ಣುಹಂಪಲುಗಳು ಇಂಥವು.


ಆದರೂ ಅವರು ನಿಮ್ಮ ಪಿತೃಗಳಲ್ಲಿ ಇಷ್ಟವುಳ್ಳವರಾಗಿ ಅವರನ್ನು ಪ್ರೀತಿಸಿದರು. ಈಗ ನಿಮ್ಮ ಅನುಭವಕ್ಕೆ ಬಂದಿರುವಂತೆ, ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲ ಜನಾಂಗಗಳಿಂದ ಆರಿಸಿಕೊಂಡರು.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


“ಇತ್ತನಿವನು ಭರವಸೆ, ಪ್ರಭುವೆ ತನ್ನುದ್ಧಾರಕನೆಂದು I ಆತನಿಗಿವನು ಮೆಚ್ಚುಗೆಯಾದರೆ ರಕ್ಷಿಸಲಿ” - ಇಂತೆಂದು II


ನಿಮ್ಮನ್ನು ಮೆಚ್ಚಿ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ಇಸ್ರಯೇಲರನ್ನು ಸದಾ ಪ್ರೀತಿಸುವವರಾಗಿರುವುದರಿಂದ ಆ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನು ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು.


ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.


ಅವರಿಗೆ ಒಳಿತನ್ನು ಮಾಡುವುದರಲ್ಲಿ ಸಂತೋಷಿಸುವೆನು.


ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.


ಅಷ್ಟುಮಾತ್ರವಲ್ಲ, ಹಾಲೂಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲೇಯಿಲ್ಲ; ಹೊಲ ಹಾಗು ದ್ರಾಕ್ಷೆತೋಟಗಳನ್ನು ನಮ್ಮ ಸ್ವಾಧೀನಕ್ಕೆ ಕೊಟ್ಟೂ ಇಲ್ಲ. ಈ ಜನರ ಕಣ್ಣಿಗೆ ಮಣ್ಣುಹಾಕಬೇಕೆಂದಿರುವೆಯಾ? ನಾವು ಬರುವುದಿಲ್ಲ,” ಎಂದು ಹೇಳಿದರು.


ಹೀಗಿರಲು ಸರ್ವೇಶ್ವರ ಆ ದಿನದಂದು ಸೂಚಿಸಿದಂತೆ ಈ ಮಲೆನಾಡನ್ನು ನನಗೆ ಕೊಡು. ‘ಇದರಲ್ಲಿ ಎತ್ತರದ ವ್ಯಕ್ತಿಗಳಿದ್ದಾರೆ, ದೊಡ್ಡ ದೊಡ್ಡ ನಗರಗಳಿವೆ, ಕೋಟೆಕೊತ್ತಲಗಳಿವೆ’ ಎಂದು ಆ ಕಾಲದಲ್ಲಿ ನೀನು ಕೇಳಿದ್ದುಂಟು. ಅವರೆಲ್ಲರನ್ನು ಓಡಿಸಿಬಿಡಲು ಸರ್ವೇಶ್ವರ ತಮ್ಮ ಮಾತಿಗನುಸಾರ ನನಗೆ ಸಹಾಯಮಾಡುವರೆಂಬ ನಂಬಿಕೆ ನನಗಿದೆ,” ಎಂದನು.


ಸ್ವಲ್ಪಕಾಲವಾದ ನಂತರ ನಾನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವೆನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೀತೋಟ, ಎಣ್ಣೇಮರ, ಜೇನುತುಪ್ಪ ಸಮೃದ್ಧಿಯಾಗಿರುವುವು. ನಿಮ್ಮ ನಾಡಿಗೆ ಸರಿಸಮಾನವಾಗಿರುವುವು; ನೀವು ಸಾಯುವುದಿಲ್ಲ, ಬದುಕುವಿರಿ; ‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು