Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:9 - ಕನ್ನಡ ಸತ್ಯವೇದವು C.L. Bible (BSI)

9 ಆದ್ದರಿಂದ ಸರ್ವೇಶ್ವರನಿಗೆ ವಿರುದ್ಧ ದಂಗೆ ಏಳಬೇಡಿ. ಆ ನಾಡಿನ ಜನರಿಗೆ ದಿಗಿಲುಪಡಬೇಡಿ. ಅವರು ನಮಗೆ ತುತ್ತಾಗುವರು. ನಾವು ಪುಷ್ಠಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ. ಸರ್ವೇಶ್ವರ ನಮ್ಮ ಕಡೆ ಇದ್ದಾರೆ. ಅವರಿಗೆ ಭಯಪಡಬೇಡಿ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೀಗಿರುವದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಅದಲ್ಲದೆ ಆ ದೇಶದ ಜನರಿಗೆ ದಿಗಿಲುಪಡಬೇಡಿರಿ; ನಾವು ಅವರನ್ನು ನುಂಗಿ ಪುಷ್ಟಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟನು; ನಮ್ಮ ಕಡೆ ಯೆಹೋವನು ಇದ್ದಾನೆ. ಅವರಿಗೆ ಭಯಪಡಬೇಡಿರಿ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹೀಗಿರುವುದರಿಂದ ಯೆಹೋವನಿಗೆ ವಿರುದ್ಧವಾಗಿ ಏಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ನಾವು ಅವರನ್ನು ಸೋಲಿಸಬಹುದು. ಅವರಿಗೆ ಯಾವ ಸಂರಕ್ಷಣೆ ಇರುವುದಿಲ್ಲ. ಆದರೆ ನಮ್ಮ ಕಡೆ ಯೆಹೋವನು ಇದ್ದಾನೆ. ಆದ್ದರಿಂದ ಭಯಪಡಬೇಡಿರಿ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದ್ದರಿಂದ ನೀವಾದರೋ ಯೆಹೋವ ದೇವರಿಗೆ ತಿರುಗಿ ಬೀಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ನುಂಗಿಬಿಡುವೆವು. ಅವರ ಆಶ್ರಯವು ಅವರ ಬಳಿಯಿಂದ ಹೋಯಿತು. ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ, ಅವರಿಗೆ ಭಯಪಡಬೇಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:9
50 ತಿಳಿವುಗಳ ಹೋಲಿಕೆ  

ಅವರಿಗೆ ಹೆದರಬೇಡಿ. ನಿಮ್ಮ ದೇವರಾದ ಸರ್ವೇಶ್ವರ ಫರೋಹನಿಗೂ ಈಜಿಪ್ಟರೆಲ್ಲರಿಗೂ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿ.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ನೀವು ಶೂರರಾಗಿ ಧೈರ್ಯದಿಂದಿರಿ; ಅವರಿಗೆ ಅಂಜಬೇಡಿ, ಕಳವಳಪಡಬೇಡಿ. ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇರುತ್ತಾರೆ; ಅವರು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ,” ಎಂದು ಹೇಳಿದನು.


ಲೆವಿಯಾತಾನನ ಶಿರಗಳ ಖಂಡನ ಮಾಡಿದವ ನೀನು I ಕಾಡು ಮೃಗಕ್ಕವನನು ಕೂಳಾಗಿಸಿದವ ನೀನು II


ಅವನಿಗಿರುವ ಸಹಾಯ ಮೂಳೆ ಮಾಂಸದ ತಡಿಕೆಯ ಬಲ; ನಮಗಿದ್ದಾರೆ ನಮ್ಮ ದೇವರಾದ ಸರ್ವೇಶ್ವರ. ಅವರೇ ನಮಗೆ ನೆರವಾಗಿ, ಯುದ್ಧಗಳಲ್ಲಿ ನಮ್ಮ ಪರವಾಗಿ ಕಾದಾಡುವರು,” ಎಂದು ಹೇಳಿ ಹುರಿದುಂಬಿಸಿದನು. ಜನರು ಜುದೇಯದ ಅರಸ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.


ಈ ಸಾರಿ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಜೆರುಸಲೇಮಿನವರೇ, ಸುಮ್ಮನೆ ನಿಂತುಕೊಂಡು ಸರ್ವೇಶ್ವರ ನಿಮಗಾಗಿ ನಡೆಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿ, ಕಳವಳಗೊಳ್ಳಬೇಡಿ. ನಾಳೆ ಅವರೆದುರಿಗೆ ಹೊರಡಿರಿ; ಸರ್ವೇಶ್ವರ ನಿಮ್ಮೊಂದಿಗೆ ಇರುವರು!” ಎಂದು ಹೇಳಿದನು.


ಸರ್ವೇಶ್ವರ ತಾವೇ ನಿನ್ನ ಮುಂದುಗಡೆ ಹೋಗುವರು; ಅವರೇ ನಿನ್ನ ಸಂಗಡ ಇರುವರು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ. ಅಂಜಬೇಡ; ಧೈರ್ಯದಿಂದಿರು,” ಎಂದು ಹೇಳಿದನು.


ಅವರನ್ನು ದೇವರೇ ಕರೆದು ತಂದರು ಈಜಿಪ್ಟಿನಿಂದ ಅವರಿಗಿದೆ ಕಾಡುಕೋಣದಂಥ ಶಕ್ತಿಸಾಮರ್ಥ್ಯ. ನಿರ್ಮೂಲ ಮಾಡುವರವರು ಶತ್ರುಗಳನ್ನು ಮುರಿದು ಹಾಕುವರು ವೈರಿಗಳ ಎಲುಬುಗಳನ್ನು; ನುಚ್ಚುನೂರು ಮಾಡುವರು ಅವರ ಬಿಲ್ಲುಬಾಣಗಳನ್ನು.


ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.


ನಿನ್ನನು ಕಾಯುತಿಹನು ಪ್ರಭುವೇ I ಬಲಗಡೆ ನೆರಳಂತಿಹನು ವಿಭುವೇ II


ದುರ್ಜನರೆನ್ನ ಜನರನು ಅನ್ನದಂತೆ ನುಂಗುವುದೇಕೆ? I ಪ್ರಭುವನು ನೆನೆಯದಾ ದುಷ್ಕರ್ಮಿಗಳಿಗೆ ಅರಿವಿಲ್ಲವೇಕೆ? I


“ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ಕೋಪ ಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿ. ಅದನ್ನು ಮರೆಯಬೇಡಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಸರ್ವೇಶ್ವರನ ಆಜ್ಞೆಗಳನ್ನು ಧಿಕ್ಕರಿಸುತ್ತಾ ಬಂದಿದ್ದೀರಿ.


ಆದರೂ ನೀವು ಅಲ್ಲಿಗೆ ಹತ್ತಿಹೋಗದೆ ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಉಲ್ಲಂಘಿಸಿದಿರಿ;


ನಮ್ಮ ದೇವರಾದ ಸರ್ವೇಶ್ವರ, ನಮ್ಮನ್ನು ಕರುಣಿಸುವವರೂ ಕ್ಷಮಿಸುವವರೂ ಆಗಿದ್ದಾರೆ. ಆದರೆ ನಾವು ಅವರಿಗೆ ವಿರುದ್ಧ ತಿರುಗಿಬಿದ್ದೆವು.


ಮತ್ತವಾಗುವುವು ನನ್ನ ಬಾಣಗಳು ರಕ್ತಕುಡಿದು; ನನ್ನ ಕತ್ತಿಯು ತಿನ್ನುವುದು ಸತ್ತವರ, ಖೈದಿಗಳ ರಕ್ತಮಾಂಸವನು; ಚೆಂಡಾಡುವುವು ಶತ್ರುವೀರರ ತಲೆಬುರುಡೆಗಳು.


ನೀವು ಆ ಜನರಿಗೆ ಹೆದರಿಕೊಳ್ಳಬೇಡಿ.


ನಿಮ್ಮ ದೇವರಾದ ಸರ್ವೇಶ್ವರ ಆ ನಾಡನ್ನು ನಿಮಗೇ ಕೊಟ್ಟಿದ್ದಾರೆ; ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ಹೇಳಿದಂತೆ ಅದನ್ನು ಏರಿ ಸ್ವಾಧೀನಮಾಡಿಕೊಳ್ಳಿ; ನೀವು ದಿಗಿಲುಪಡದೆ ಧೈರ್ಯವಾಗಿಯೇ ಇರಬೇಕು,’ ಎಂದು ಹೇಳಿದೆ.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಪಲಾಯನವಾದವರು ಹೆಷ್ಬೋನಿನ ನೆರಳಲ್ಲಿ ನಿಂತಿದ್ದಾರೆ ಬಲಗುಂದಿದವರಾಗಿ. ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಆ ಹೆಷ್ಬೋನಿನಿಂದಲೆ ಹೊರಟಿದೆ ಅಗ್ನಿ. ಮೋವಾಬಿನ ಮೇರೆಯನ್ನೂ ಶಿಖರವನ್ನೂ ನುಂಗಿಬಿಟ್ಟಿದೆ ಆ ಬೆಂಕಿ.


ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು.


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಪ್ರತಿಯೊಬ್ಬನೂ ಬಿರುಗಾಳಿಗೆ ತಡೆಯಂತೆ, ಬಿರುಮಳೆಗೆ ಬಿಡಾರದಂತೆ, ಮರುಭೂಮಿಯಲ್ಲಿ ಜಲಧಾರೆಯಂತೆ, ಬೆಂಗಾಡಿನಲ್ಲಿ ಭಾರಿಬಂಡೆಯ ನೆರಳಿನಂತೆ ಇರುವನು.


ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.


ಪರಾತ್ಪರ ಪ್ರಭುವಿನ ಮೊರೆಹೊಕ್ಕಿರುವವನು I ಸರ್ವಶಕ್ತನ ಆಶ್ರಯದಲಿ ಸುರಕ್ಷಿತನು II


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದೇವರು II


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II


ಅವನು ಆಸನನ್ನು ಭೇಟಿಯಾಗಲು ಬಂದು, ಅವನಿಗೆ, “ಆಸ ರಾಜನೇ, ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿ; ನೀವು ಸರ್ವೇಶ್ವರನನ್ನು ಹೊಂದಿಕೊಂಡಿರುವ ತನಕ ಅವರೂ ನಿಮ್ಮೊಂದಿಗಿರುವರು; ನೀವು ಅವರನ್ನು ಅರಸಿದರೆ ನಿಮಗೆ ಸಿಕ್ಕುವರು. ಅವರನ್ನು ಬಿಟ್ಟರೆ ಅವರೂ ನಿಮ್ಮನ್ನು ಬಿಟ್ಟುಬಿಡುವರು.


ಇಗೋ, ದೇವರೇ ನಾಯಕರಾಗಿ ನಮ್ಮೊಂದಿಗಿರುತ್ತಾರೆ; ನಿಮಗೆ ವಿರುದ್ಧ ಯುದ್ಧ ಕಹಳೆಗಳನ್ನು ಮೊಳಗಿಸುವ ಯಾಜಕರೂ ನಮ್ಮೊಂದಿಗೆ ಇರುತ್ತಾರೆ. ಇಸ್ರಯೇಲರೇ, ನಿಮ್ಮ ಪೂರ್ವಜರ ದೇವರಾದ ಸರ್ವೇಶ್ವರನೊಡನೆ ಯುದ್ಧಮಾಡಬೇಡಿ; ನೀವು ಜಯಿಸಲಾರಿರಿ,” ಎಂದು ಕೂಗಿ ಹೇಳಿದನು.


ಇವರ ಹಾಗೆಯೇ ಜೋಸೆಫನ ಕುಲದವರು ಹೊರಟು ಬೇತೇಲಿಗೆ ಬಂದರು. ಸರ್ವೇಶ್ವರಸ್ವಾಮಿ ಅವರೊಂದಿಗೆ ಇದ್ದರು.


ನನಗೂ ನಿಮ್ಮ ಪ್ರಜೆಗಳಾದ ಇವರಿಗೂ ನಿಮ್ಮ ಅನುಗ್ರಹ ದೊರಕಿದೆ ಎಂಬುದು ನೀವೇ ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದೀತು? ನೀವು ಬರುವುದರಿಂದ ನಾನೂ ನಿಮ್ಮ ಪ್ರಜೆಗಳಾದ ಇವರೂ ಜಗದಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶಿಷ್ಟರಾದವರೆಂಬುದು ಖಚಿತವಾಗುವುದು,” ಎಂದನು.


ಬಳಿಕ ಯಕೋಬನು ಜೋಸೆಫನಿಗೆ, “ನನಗೆ ಮರಣ ಸಮೀಪಿಸಿದೆ; ಆದರೆ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ಪಿತೃಗಳ ನಾಡಿಗೆ ಮರಳಿ ಬರಮಾಡುವರು.


“ನಾವು ಪಾಪಾಪರಾಧಗಳನ್ನು ಮಾಡಿ, ಕೆಟ್ಟವರಾಗಿ ನಡೆದಿದ್ದೇವೆ; ನಿಮಗೆ ವಿರುದ್ಧ ತಿರುಗಿಬಿದ್ದು, ನಿಮ್ಮ ಆಜ್ಞಾವಿಧಿಗಳನ್ನು ತೊರೆದುಬಿಟ್ಟಿದ್ದೇವೆ.


“ಅದಕ್ಕೆ ನಾನು, ‘ಕಳವಳಪಡಬೇಡಿ, ಅವರಿಗೆ ಭಯಪಡಬೇಡಿ.


ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು, ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿ; ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ಸರ್ವೇಶ್ವರಸ್ವಾಮಿಯನ್ನು ಸ್ಮರಿಸಿಕೊಂಡು, ನಿಮ್ಮ ಸಹೋದರರಿಗಾಗಿ, ಮಡದಿಮಕ್ಕಳಿಗಾಗಿ ಹಾಗು ನಿಮ್ಮ ಮನೆಮಠಗಳಿಗಾಗಿ ಕಾದಾಡಿರಿ,” ಎಂದು ಹುರಿದುಂಬಿಸಿದೆ.


ನಿನಗೆ ವಿರುದ್ಧವಾಗಿ ಅವರು ಯುದ್ಧಮಾಡುವರು; ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗಿರುವೆನು. ಇದು ಸರ್ವೇಶ್ವರನಾದ ನನ್ನ ನುಡಿ".


ಬಾಬಿಲೋನಿಯದ ಅರಸನಿಗೆ ಹೆದರಬೇಡಿ, ಬೆದರಬೇಡಿ. ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಾನೇ ನಿಮ್ಮೊಂದಿಗೆ ಇರುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.


ಮೋಶೆಗೆ ವಿರುದ್ಧ ಗುಣಗುಟ್ಟುತ್ತಿದ್ದವರನ್ನು ಕಾಲೇಬನು ಸಮಾಧಾನಗೊಳಿಸುತ್ತಾ, “ನಾವು ಧೈರ್ಯದಿಂದ ಆ ಮಲೆನಾಡಿಗೆ ಹೋಗಿ ಅದನ್ನು ಸ್ವಾಧೀನ ಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಮ್ಮಿಂದ ಸಾಧ್ಯ,” ಎಂದನು.


ಅದರಂತೆಯೇ ಮೋಶೆ ಇಸ್ರಯೇಲರೊಡನೆ ಮಾತಾಡಿದನು. ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದರಂತೆ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು. ಅವುಗಳೊಡನೆ ಆರೋನನ ಕೋಲು ಇತ್ತು.


ಜನರಿಗೆ ನೀರು ಇಲ್ಲದೆಹೋಯಿತು. ಅವರು ಮೋಶೆ ಮತ್ತು ಆರೋನರ ವಿರುದ್ಧ ಸಭೆಸೇರಿ ಮೋಶೆಯ ಸಂಗಡ ವಾದಿಸತೊಡಗಿದರು:


ಹೀಗಿರಲು ಸರ್ವೇಶ್ವರ ಆ ದಿನದಂದು ಸೂಚಿಸಿದಂತೆ ಈ ಮಲೆನಾಡನ್ನು ನನಗೆ ಕೊಡು. ‘ಇದರಲ್ಲಿ ಎತ್ತರದ ವ್ಯಕ್ತಿಗಳಿದ್ದಾರೆ, ದೊಡ್ಡ ದೊಡ್ಡ ನಗರಗಳಿವೆ, ಕೋಟೆಕೊತ್ತಲಗಳಿವೆ’ ಎಂದು ಆ ಕಾಲದಲ್ಲಿ ನೀನು ಕೇಳಿದ್ದುಂಟು. ಅವರೆಲ್ಲರನ್ನು ಓಡಿಸಿಬಿಡಲು ಸರ್ವೇಶ್ವರ ತಮ್ಮ ಮಾತಿಗನುಸಾರ ನನಗೆ ಸಹಾಯಮಾಡುವರೆಂಬ ನಂಬಿಕೆ ನನಗಿದೆ,” ಎಂದನು.


ಪ್ರಭುವಿನ ಕಾರ್ಯಗಳ ನೋಡಬನ್ನಿ I ಇಳೆಯೊಳಗೆಸಗಿದ ಪವಾಡಗಳನು ನೋಡಿ II


ಅವರೊ ಬೇಡವೆಂದರು ಆ ಚೆಲುವಿನ ನಾಡನು I ನಂಬದೆ ಹೋದರು ಅವನಿತ್ತಾ ವಾಗ್ದಾನವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು