Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:15 - ಕನ್ನಡ ಸತ್ಯವೇದವು C.L. Bible (BSI)

15 ಸರ್ವರಿಗೂ ಅಂದರೆ ನಿಮಗೂ ನಿಮ್ಮಲ್ಲಿರುವ ಅನ್ಯದೇಶೀಯರಿಗೂ ಒಂದೇ ವಿಧಿಯಿರಬೇಕು. ಇದು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ. ಸರ್ವೇಶ್ವರನ ಸನ್ನಿಧಿಯಲ್ಲಿ ನೀವು ಹೇಗೆ ಇರುವಿರೋ ಹಾಗೆಯೇ ಅನ್ಯದೇಶೀಯನೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸರ್ವರಿಗೂ ಅಂದರೆ ನಿಮಗೂ, ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ, ಅನ್ಯದೇಶದವನೂ ಸಹ ಹಾಗೆಯೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸರ್ವರಿಗೂ ಅಂದರೆ ನಿಮಗೂ ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ವಿಧಿಯಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ ಅನ್ಯದೇಶದವನೂ ಹಾಗೆಯೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿಮಗೂ ನಿಮ್ಮಲ್ಲಿರುವ ಪರದೇಶದವರಿಗೂ ಒಂದೇ ವಿಧಿಯಿರಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವೂ ಪರದೇಶಿಯರೂ ಒಂದೇ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮಗೂ ನಿಮ್ಮ ಕೂಡ ಪ್ರಯಾಣ ಮಾಡುವ ಪರಕೀಯನಿಗೂ ಒಂದೇ ಕಟ್ಟಳೆ ಇರಬೇಕು. ಯೆಹೋವ ದೇವರ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:15
17 ತಿಳಿವುಗಳ ಹೋಲಿಕೆ  

ಈ ಬಗ್ಗೆ ಇಸ್ರಯೇಲರಲ್ಲಿರುವ ಸ್ವದೇಶೀಯರಿಗೂ ವಿದೇಶೀಯರಿಗೂ ಒಂದೇ ವಿಧಿಯಿರಬೇಕು.


ನಿಮ್ಮಲ್ಲಿ ಅನ್ಯದೇಶಿಯನೊಬ್ಬನು ಪ್ರವಾಸಿಯಾಗಿದ್ದು ಸರ್ವೇಶ್ವರನಿಗೆ ಪಾಸ್ಕ ಹಬ್ಬವನ್ನು ಆಚರಿಸಬೇಕೆಂದು ಬಯಸಿದರೆ ಅದನ್ನು ವಿಧಿನಿಯಮಗಳ ಅನುಸಾರವೇ ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ವಿಧಿಯಿರಬೇಕು.


ಸ್ವದೇಶಿಗೂ ನಿಮ್ಮೊಡನೆ ವಾಸವಾಗಿರುವ ವಿದೇಶಿಗೂ ಅನ್ವಯಿಸುವ ವಿಧಿ ಒಂದೇ ಆಗಿರುತ್ತದೆ,”


ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ದಾವೀದನು ಇಸ್ರಯೇಲರಲ್ಲಿ ಇದನ್ನು ಒಂದು ಕಟ್ಟಳೆಯನ್ನಾಗಿ ಅಂದು ವಿಧಿಸಿದ್ದರಿಂದ ಇಂದಿನವರೆಗೂ ಹಾಗೆಯೇ ನಡೆಯುತ್ತಾ ಬಂದಿದೆ.


ಆರೋನನ ವಂಶಸ್ಥರಾದ ಯಾಜಕರೇ ಆ ಕಹಳೆಗಳನ್ನು ಊದಬೇಕು. “ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮವಾಗಿರಲಿ.


ಅನ್ಯರಿಗಾಗಲಿ ಸ್ವಜನರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಸರ್ವೇಶ್ವರ.”


ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಹೀಗೆಂದರು: “ಪಾಸ್ಕಹಬ್ಬ ಆಚರಣೆಯ ಕ್ರಮ ಇದು - ವಿದೇಶೀಯನಾರೂ ಆ ಭೋಜನದಲ್ಲಿ ಪಾಲ್ಗೊಳ್ಳಬಾರದು.


ನೀವು ಮತ್ತು ನಿಮ್ಮ ಸಂತತಿಯವರು ಈ ನಿಯಮಗಳನ್ನು ಶಾಶ್ವತವಾಗಿ ಆಚರಿಸಬೇಕು.


ಆ ದಿನವು ನಿಮಗೆ ಸ್ಮರಣೀಯ ದಿನವಾಗಿರುವುದು. ಅಂದು ನೀವು ಸರ್ವೇಶ್ವರನ ಗೌರವಾರ್ಥ ಹಬ್ಬವನ್ನು ಕೊಂಡಾಡಬೇಕು. ಅದನ್ನು ಶಾಶ್ವತ ನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು.


ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ಸರ್ವೇಶ್ವರ ಆರೋನನಿಗೆ ಹೀಗೆಂದು ಆಜ್ಞಾಪಿಸಿದರು: “ಇಸ್ರಯೇಲರು ನನಗಾಗಿ ಮೀಸಲಾಗಿಟ್ಟು ಸಮರ್ಪಿಸುವ ಪದಾರ್ಥಗಳನ್ನೆಲ್ಲ ಅಂದರೆ ಪ್ರತಿಷ್ಠಾಪಿತವಾದ ವಸ್ತುಗಳನ್ನೆಲ್ಲಾ ನಿನಗೂ ನಿನ್ನ ಸಂತತಿಯವರಿಗೂ ದಾನಮಾಡಿದ್ದೇನೆ. ಅವು ಸದಾಕಾಲ ನಿಮಗೆ ಸಲ್ಲಬೇಕಾದ ಪಾಲು.


ನಿಮ್ಮ ಮಧ್ಯೆ, ಇಲ್ಲವೆ ನಿಮ್ಮ ಸಂತತಿಯವರ ಮಧ್ಯೆ ವಾಸಿಸುವ ಅನ್ಯದೇಶೀಯನಾಗಲಿ ಪ್ರವಾಸಿಯಾಗಲಿ ಸುಗಂಧ ದಹನಬಲಿಯನ್ನು ಅರ್ಪಿಸಲಾಶಿಸಿದರೆ ನಿಮ್ಮಂತೆಯೇ ಅವನೂ ಮಾಡಬೇಕು.


ಆರೋನನು ಮತ್ತು ಅವನ ಮಕ್ಕಳು ದೇವದರ್ಶನದ ಗುಡಾರದೊಳಗೆ ಬರುವಾಗ ಹಾಗು ಪವಿತ್ರಸ್ಥಾನದಲ್ಲಿ ಸೇವೆ ಮಾಡಲು ಬಲಿಪೀಠದ ಹತ್ತಿರ ಬರುವಾಗ ಇವುಗಳನ್ನು ಹಾಕಿಕೊಂಡಿರಲಿ. ಇಲ್ಲವಾದರೆ ಅವರು ಆ ಅಪರಾಧದ ನಿಮಿತ್ತ ಸಾಯುವರು. ಆರೋನನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮ.


ಎಲ್ಲ ಇಸ್ರಯೇಲರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಅನ್ಯದೇಶೀಯರು ಹಾಗೂ ಸ್ವದೇಶೀಯರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ನಿಂತರು. ಆ ಮಂಜೂಷವನ್ನು ಹೊತ್ತ ಲೇವಿಯರಾದ ಯಾಜಕರಿಗೆ ಅಭಿಮುಖರಾಗಿ ನಿಂತರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನ, ಏಬಾಲ್ ಬೆಟ್ಟದ ಕಡೆ ಅರ್ಧಜನ, ಹೀಗೆ ಸರ್ವೇಶ್ವರನ ದಾಸ ಮೋಶೆ ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ಪಡೆಯುವುದಕ್ಕೋಸ್ಕರ ನಿಂತರು.


ಅವುಗಳಿಗೆ ಸಂಬಂಧಪಟ್ಟ ಶಾಸನದ ಪ್ರಕಾರ, ನಿಯಮಿತ ಕಾಲದಲ್ಲಿ ಆಚರಿಸುವುದು ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಮೀರಕೂಡದ ಪದ್ಧತಿನಿಯಮಗಳಾಬೇಕು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು