Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:20 - ಕನ್ನಡ ಸತ್ಯವೇದವು C.L. Bible (BSI)

20 ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಕಿಂಚಿತ್ತನ್ನು ಸರ್ವೇಶ್ವರನಿಗೆಂದು ಮೀಸಲಾಗಿಡುವಂತೆಯೆ ಆ ಕಣಕದಿಂದ ಮಾಡುವ ಮೊದಲ ರೊಟ್ಟಿಯನ್ನು ಮೀಸಲಾಗಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಪ್ರತ್ಯೇಕಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀವು ಕಣದಲ್ಲಿರುವ ಗೋಧಿಯಲ್ಲಿ ಪ್ರಥಮಫಲವನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡುವಂತೆಯೇ ನೀವು ಪ್ರಥಮವಾಗಿ ನಾದಿದ ಹಿಟ್ಟಿನಿಂದ ಒಂದು ರೊಟ್ಟಿಯನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀವು ಕಣದಲ್ಲಿರುವ ಗೋಧಿಯಲ್ಲಿ ಪ್ರಥಮ ಫಲವನ್ನು ಕಾಣಿಕೆಯಾಗಿ ಅರ್ಪಿಸುವಂತೆ ಕಣಕದಿಂದ ಮಾಡುವ ನಿಮ್ಮ ಪ್ರಥಮ ಬೀಸಿದ ಹಿಟ್ಟಿನ ರೊಟ್ಟಿಯನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:20
21 ತಿಳಿವುಗಳ ಹೋಲಿಕೆ  

“ನೀವು ಸರ್ವೇಶ್ವರನಿಗೆ ಪ್ರಥಮ ಧಾನ್ಯ ನೈವೇದ್ಯವನ್ನು ಮಾಡಬೇಕಾದರೆ ಅದು ಬೆಂಕಿಯಲ್ಲಿ ಸುಟ್ಟ ಗೋದಿಯ ಹಸಿ ತೆನೆಗಳಾಗಿರಬೇಕು.


“ಭೂಮಿಯ ಮೊದಲನೆಯ ಬೆಳೆಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”


ಎಲ್ಲ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದು ಹಾಗು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲ ಪದಾರ್ಥಗಳು ಅವರದಾಗಬೇಕು. ನಿಮ್ಮ ಮನೆ ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.


ನಾವು ದೇವರಿಗಾಗಿ ಪ್ರತ್ಯೇಕಿಸಿಡತಕ್ಕ ಪ್ರಥಮ ಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ, ಮೊದಲಾದವುಗಳನ್ನು ಯಾಜಕರಿಗಾಗಿ ನಮ್ಮ ದೇವಾಲಯದ ಕೊಠಡಿಗಳಲ್ಲಿ ತಂದಿಡುತ್ತೇವೆ; ನಮ್ಮ ಭೂಮಿಯ ಆದಾಯದ ದಶಮಾಂಶವು ಲೇವಿಯರದಾಗಬೇಕು; ಲೇವಿಯರು ತಾವೇ ಬಂದು ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಕೂಡಿಸಬೇಕು;


“ನಾನು ನಿಮಗೆ ಕೊಡುವ ನಾಡನ್ನು ನೀವು ಸೇರಿದ ನಂತರ ಅಲ್ಲಿನ (ಜವೆಗೋದಿ) ಪೈರನ್ನು ಕೊಯ್ಯುವಾಗ ಪ್ರಥಮ ಫಲದ ಸಿವುಡನ್ನು ಯಾಜಕನ ಬಳಿಗೆ ತಂದೊಪ್ಪಿಸಬೇಕು.


“ನಿಮ್ಮ ಬೆಳೆಯ ಪ್ರಥಮ ಫಲದಲ್ಲಿ ಅತಿಶ್ರೇಷ್ಠವಾದುದ್ದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. "ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರು; ಕನ್ಯೆಯರಂತೆ ಕಳಂಕರಹಿತರು; ಇವರು ಯಜ್ಞದ ಕುರಿಮರಿ ಹೋದೆಡೆಯಲ್ಲೆಲ್ಲಾ ಹಿಂಬಾಲಿಸುವವರು; ದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರು.


ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


ಕ್ರಿಸ್ತಯೇಸು ಪುನರುತ್ಥಾನಹೊಂದಿದ್ದೇನೋ ಸತ್ಯಸ್ಯ ಸತ್ಯ. ಅವರ ಪುನರುತ್ಥಾನವು, ಸತ್ತವರು ಪುನರುತ್ಥಾನ ಹೊಂದುತ್ತಾರೆ ಎನ್ನುವುದಕ್ಕೆ ಪ್ರಮಾಣ.


ಹಿಟ್ಟಿನಲ್ಲಿ ಮೊದಲ ಹಿಡಿ ನೈವೇದ್ಯ ಆದಮೇಲೆ ಹಿಟ್ಟಿನ ರಾಶಿಯೆಲ್ಲಾ ನೈವೇದ್ಯ ಆದಂತೆಯೇ. ಅಂತೆಯೇ, ಬೇರು ದೇವರದಾಗಿದ್ದ ಮೇಲೆ ರೆಂಬೆಗಳೂ ದೇವರಿಗೆ ಸೇರಿದವು ಅಲ್ಲವೆ?


ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


“ಪ್ರತಿ ವರ್ಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮಭಾಗವನ್ನು ಪ್ರತ್ಯೇಕಿಸಬೇಕು.


“ಇಸ್ರಯೇಲರು ನನಗೆ ಸಮರ್ಪಿಸುವ ಪ್ರಥಮ ಫಲಗಳು, ಅಂದರೆ ಎಣ್ಣೆ, ದ್ರಾಕ್ಷಾರಸ, ಧಾನ್ಯ, ಇವುಗಳಲ್ಲಿ ಶ್ರೇಷ್ಠವಾದುದು ನಿನಗೇ ಸಿಗಬೇಕೆಂದು ವಿಧಿಸಿದ್ದೇನೆ.


ಯಾಜಕನು ಇವುಗಳನ್ನೂ ಪ್ರಥಮಫಲದ ರೊಟ್ಟಿಗಳನ್ನೂ ಎರಡು ಕುರಿಗಳನ್ನೂ ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯವಾಗಿ ಆರತಿ ಎತ್ತಬೇಕು. ಅವು ಸರ್ವೇಶ್ವರನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.


ನೀವು ಹಾಗು ನಿಮ್ಮ ಸಂತತಿಯವರು ಹೀಗೆ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಸರ್ವೇಶ್ವರನಿಗೆ ಮೀಸಲಾಗಿಡಬೇಕು.” ಎಂದರು.


ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನು ಹಾಗು ದನಕುರಿಗಳ ಚೊಚ್ಚಲು ಮರಿಗಳನ್ನು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅವರು ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಸರ್ವೇಶ್ವರನಲ್ಲೇ ಯಾವಾಗಲು ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸಮಾಡಿಕೊಳ್ಳುವಿರಿ.


“ನೀವು ಕಣದ ಕೆಲಸವನ್ನೂ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ, ಏಳು ದಿನಗಳವರೆಗೂ ಪರ್ಣಕುಠೀರಗಳ ಜಾತ್ರೆಯನ್ನು ಆಚರಿಸಬೇಕು.


ಅವುಗಳನ್ನು ಪ್ರಥಮ ಫಲವಾಗಿ ಸರ್ವೇಶ್ವರನಿಗೆ ಸಮರ್ಪಿಸಬಹುದೇ ಹೊರತು ಬಲಿಪೀಠದ ಮೇಲೆ ಸುವಾಸನೆಯನ್ನುಂಟುಮಾಡುವುದಕ್ಕಾಗಿ ಹೋಮ ಮಾಡಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು