ಅರಣ್ಯಕಾಂಡ 15:29 - ಕನ್ನಡ ಸತ್ಯವೇದವು C.L. Bible (BSI)29 ಈ ಬಗ್ಗೆ ಇಸ್ರಯೇಲರಲ್ಲಿರುವ ಸ್ವದೇಶೀಯರಿಗೂ ವಿದೇಶೀಯರಿಗೂ ಒಂದೇ ವಿಧಿಯಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಈ ವಿಷಯದಲ್ಲಿ ಇಸ್ರಾಯೇಲರಲ್ಲಿರುವ ಸ್ವದೇಶದವರಿಗೂ, ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಈ ವಿಷಯದಲ್ಲಿ ಇಸ್ರಾಯೇಲ್ಯರಲ್ಲಿರುವ ಸ್ವದೇಶದವರಿಗೂ ಅನ್ಯದೇಶದವರಿಗೂ ಒಂದೇ ವಿಧಿಯಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ನಿರುದ್ದೇಶದಿಂದ ತಪ್ಪುಮಾಡಿದ ಪ್ರತಿಯೊಬ್ಬರಿಗೂ ಈ ನಿಯಮ ಅನ್ವಯಿಸುತ್ತದೆ. ಈ ವಿಷಯದಲ್ಲಿ ಇಸ್ರೇಲರಲ್ಲಿರುವ ಸ್ವದೇಶದವರಿಗೂ ಪರದೇಶದವರಿಗೂ ಒಂದೇ ವಿಧಿಯಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಸ್ಥಳೀಯ ಮೂಲದ ಇಸ್ರಾಯೇಲರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ನಿಯಮ ಇರಬೇಕು. ಅಧ್ಯಾಯವನ್ನು ನೋಡಿ |
ಎಲ್ಲ ಇಸ್ರಯೇಲರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಅನ್ಯದೇಶೀಯರು ಹಾಗೂ ಸ್ವದೇಶೀಯರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ನಿಂತರು. ಆ ಮಂಜೂಷವನ್ನು ಹೊತ್ತ ಲೇವಿಯರಾದ ಯಾಜಕರಿಗೆ ಅಭಿಮುಖರಾಗಿ ನಿಂತರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನ, ಏಬಾಲ್ ಬೆಟ್ಟದ ಕಡೆ ಅರ್ಧಜನ, ಹೀಗೆ ಸರ್ವೇಶ್ವರನ ದಾಸ ಮೋಶೆ ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ಪಡೆಯುವುದಕ್ಕೋಸ್ಕರ ನಿಂತರು.