Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:30 - ಕನ್ನಡ ಸತ್ಯವೇದವು C.L. Bible (BSI)

30 ಆದರೆ ಒಬ್ಬನು ಸ್ವದೇಶದವನೇ ಆಗಲಿ ವಿದೇಶದವನೇ ಆಗಲಿ ಮನಪೂರ್ವಕವಾಗಿ, ಬೇಕು ಬೇಕೆಂದು ಪಾಪವನ್ನು ಮಾಡಿದರೆ ಅಂಥವನನ್ನು ಕುಲದಿಂದ ತೆಗೆದುಹಾಕಬೇಕು. ಏಕೆಂದರೆ ಅವನು ಸರ್ವೇಶ್ವರನನ್ನು ತೃಣೀಕರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆದರೆ ಸ್ವದೇಶದವನಾಗಲಿ ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದ್ದರಿಂದ ಕುಲದಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ಆದರೆ ಉದ್ದೇಶಪೂರ್ವಕವಾಗಿ ಪಾಪಮಾಡುವವನು ಯೆಹೋವನಿಗೆ ಅವಮಾನ ಮಾಡುವವನಾಗಿದ್ದಾನೆ. ಅವನನ್ನು ಕುಲದಿಂದ ಬಹಿಷ್ಕರಿಸಬೇಕು. ಈ ನಿಯಮವು ಇಸ್ರೇಲರಲ್ಲಿ ಹುಟ್ಟಿದ ಪ್ರತಿಯೊಬ್ಬನಿಗೂ ಹಾಗೂ ಪರದೇಶಸ್ಥರಿಗೂ ಅನ್ವಯಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ ‘ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ, ಪರಕೀಯನಾಗಲಿ ಬೇಕೆಂದು ಪಾಪಮಾಡಿದರೆ, ಅವನು ಯೆಹೋವ ದೇವರನ್ನು ನಿಂದಿಸಿದ್ದಾನೆ. ಆ ಮನುಷ್ಯನನ್ನು ಸ್ವಜನರಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:30
30 ತಿಳಿವುಗಳ ಹೋಲಿಕೆ  

ನಾವು ಸತ್ಯವನ್ನು ಅರಿತವರಾದ ಮೇಲೂ ಬೇಕುಬೇಕಾಗಿ ಪಾಪಮಾಡುತ್ತಲೇ ಇದ್ದರೆ, ಪಾಪಪರಿಹಾರಕ್ಕೆ ಇನ್ನು ನಮಗೆ ಬೇರೆ ಯಾವ ಬಲಿಯೂ ಇರುವುದಿಲ್ಲ;


ಕಾಪಾಡೆನ್ನನು, ಬೇಕು ಬೇಕೆಂದು ಪಾಪಮಾಡದಂತೆ I ಕಾದಿಡು, ಅಂಥ ಪಾಪಕೆ ನಾ ದಾಸನಾಗದಂತೆ I ನಿರ್ದೋಷಿಯಾಗುವೆನು, ಆ ದ್ರೋಹಕ್ಕೊಳಗಾಗದಂತೆ II


“ನಾನು ಆ ಮಾತನ್ನು ನಿಮಗೆ ತಿಳಿಸಿದರೂ ನೀವು ಕಿವಿಗೊಡದೆ ಸರ್ವೇಶ್ವರನ ಆಜ್ಞೆಯನ್ನು ತಾತ್ಸಾರಮಾಡಿ ಸೊಕ್ಕಿನಿಂದ ಆ ಬೆಟ್ಟವನ್ನು ಹತ್ತಿದಿರಿ.


ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ!


ಯಾರಾದರೂ ನರಪುತ್ರನ ವಿರುದ್ಧ ಮಾತಾಡಿದರೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಇಹದಲ್ಲೇ ಆಗಲಿ, ಪರದಲ್ಲೇ ಆಗಲಿ ಕ್ಷಮೆ ದೊರಕದು.


ಮುಖ್ಯವಾಗಿ, ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಬಲಿಯಾಗಿರುವವರನ್ನು ಮತ್ತು ದೇವರ ಅಧಿಕಾರವನ್ನು ತೃಣೀಕರಿಸುವವರನ್ನು ಅವರು ಶಿಕ್ಷಿಸದೆ ಬಿಡುವುದಿಲ್ಲ.


ನಿಂದಿಸುತಿಹರು ಪ್ರಭು, ವೈರಿಗಳು ನಿನ್ನಭಿಷಿಕ್ತನನು I ಹೆಜ್ಜೆಹೆಜ್ಜೆಗು ಅವಮಾನಿಸುತಿಹರು ಶತ್ರುಗಳವನನು I ಆಮೆನ್, ಆಮೆನ್, ಪ್ರಭುವಿಗೆ ಸರ್ವದಾ ಧನ್ಯವಾದವು II


ಪ್ರಭು, ನಿನ್ನನು ನಿಂದಿಸಿದ ಅನ್ಯಜನರ ಮೇಲೆ I ಎರಗಲಿ ಏಳ್ಮಡಿ ದಂಡನೆ ಅವರೆದೆಯ ಮೇಲೆ II


ಎಚ್ಚೆತ್ತು, ದೇವಾ, ನಡೆಸು ನಿನ್ನ ನ್ಯಾಯವನು I ಗಮನಿಸು, ಅನುದಿನ ದುರ್ಮತಿ ನಿನ್ನ ನಿಂದಿಪುದನು II


ನೆನಪಿರಲಿ ಪ್ರಭು, ಶತ್ರು ನಿನಗೆ ಮಾಡಿದಪಮಾನ I ನಿನ್ನ ಪೂಜ್ಯ ನಾಮಕೆ ದುರುಳರು ಕಕ್ಕಿದ ದೂಷಣ II


ಒಬ್ಬನು ತಾನು ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಾಸ್ಕ ಹಬ್ಬವನ್ನು ಆಚರಿಸಲು ತಪ್ಪಿದ್ದೇ ಆದರೆ ಅಂಥವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಸರ್ವೇಶ್ವರನಿಂದ ನಿಯಮಿತವಾದ ಬಲಿಯನ್ನು ಸಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ಪಾಪಫಲವನ್ನು ಅನುಭವಿಸಲೇಬೇಕು.


ಕೊಲ್ಲಬೇಕೆಂಬ ಉದ್ದೇಶದಿಂದಲೆ ಮತ್ತೊಬ್ಬನನ್ನು ಮೋಸದಿಂದ ಕೊಂದವನನ್ನು ನನ್ನ ಬಲಿಪೀಠದ ಬಳಿಯಿದ್ದರೂ ಎಳೆದು ಅವನಿಗೆ ಮರಣ ದಂಡನೆ ಕೊಡಬೇಕು.”


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ನಿರ್ಗತಿಕನಿಗೆ ದಯೆತೋರಿಸುವವನು ಆತನನ್ನು ಘನಪಡಿಸುತ್ತಾನೆ.


ಅಗ್ನಿಯಂತೆನ್ನ ದಹಿಸುತ್ತಿದೆ ನಿನ್ನಾಲಯದಭಿಮಾನ I ಎನ್ನ ಮೇಲೆರಗಿದೆ ನಿನ್ನ ಕಡುದ್ರೋಹಿಗಳ ದೂಷಣ II


“ಯಾವನಾದರು ಪರಪತ್ನಿಯೊಡನೆ ವ್ಯಭಿಚಾರ ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


“ಯಾರಾದರು ಭೂತ-ಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆಯನ್ನು ಕೇಳಿ, ದೇವದ್ರೋಹಿಯಾದರೆ ನಾನು ಅಂಥ ವ್ಯಕ್ತಿಗೆ ವಿಮುಖನಾಗಿ ಅವನನ್ನು ತನ್ನ ಜನತೆಯಿಂದ ತೆಗೆದುಹಾಕುವೆನು.


ಅವನು ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿ ನನ್ನ ದೇವಸ್ಥಾನವನ್ನು ಅಶುದ್ಧಮಾಡಿ ನನ್ನ ಪವಿತ್ರ ನಾಮಕ್ಕೆ ಅಪಕೀರ್ತಿ ತಂದಿದ್ದಾನೆ. ಆದ್ದರಿಂದ ನಾನು ಅವನಿಗೆ ವಿಮುಖನಾಗಿ ಅವನನ್ನು ನನ್ನ ಜನತೆಯಿಂದ ತೆಗೆದುಹಾಕುವೆನು.


ಸುನ್ನತಿ ಮಾಡಿಸಿಕೊಳ್ಳದ ಗಂಡಸು ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದವನಾದ ಕಾರಣ, ಅವನು ಕುಲದಿಂದ ಬಹಿಷ್ಕೃತನಾಗಬೇಕು.


ಮಾರಕವಲ್ಲದ ಪಾಪವೊಂದನ್ನು ಸಹೋದರನು ಮಾಡುವುದನ್ನು ಯಾರಾದರೂ ಕಂಡರೆ, ಆ ಸಹೋದರನಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಆ ಸಹೋದರನಿಗೆ ಸಜ್ಜೀವವನ್ನು ಅನುಗ್ರಹಿಸುವರು. ಮಾರಕವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಮಾರಕವಾದ ಪಾಪವೂ ಉಂಟು. ಅದರ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.


ಈ ಬಗ್ಗೆ ಇಸ್ರಯೇಲರಲ್ಲಿರುವ ಸ್ವದೇಶೀಯರಿಗೂ ವಿದೇಶೀಯರಿಗೂ ಒಂದೇ ವಿಧಿಯಿರಬೇಕು.


ಆದರೆ ತಪ್ಪು ತಿಳಿಯುತ್ತಿದ್ದರು ಅವರ ವಿರೋಧಿಗಳು; ‘ಇದಾಯಿತು ನಮ್ಮ ಶಕ್ತಿಯಿಂದ, ಸರ್ವೇಶ್ವರನಿಂದಲ್ಲ’ವೆಂದುಕೊಂಡು ಈ ಕಾರಣ ಹಿಂತೆಗೆದುಕೊಂಡೆನು ನನ್ನ ನಿಗದಿನಿರ್ಣಯವನು.


ಮನುಷ್ಯನು ಮನುಷ್ಯನಿಗೆ ವಿರುದ್ಧ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುತ್ತಾರೆ. ಆದರೆ ಮನುಷ್ಯನು ಸರ್ವೇಶ್ವರನಿಗೆ ವಿರುದ್ಧ ಅಪರಾಧ ಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದನು. ಆದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಎಂದೇ ಅವರನ್ನು ಕೊಲ್ಲಬೇಕೆಂಬುದು ಸರ್ವೇಶ್ವರನ ಚಿತ್ತವಾಗಿತ್ತು.


ದುರುಳರಿಂದ ಬೆಳಕನು ಹಿಂತೆಗೆದುಕೊಳ್ಳಲಾಗುವುದು ಅವರು ಎತ್ತಿದ ಕೈಯನು ಮುರಿಯಲಾಗುವುದು.


“ಹೀಗಿರಲು, ನರಪುತ್ರನೇ, ಇಸ್ರಯೇಲ್ ವಂಶದವರಿಗೆ ಈ ಮಾತನ್ನು ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿಮ್ಮ ಪಿತೃಗಳು ಪುನಃ ದ್ರೋಹಮಾಡಿ ನನ್ನನ್ನು ದೂಷಿಸಿದ್ದಾರೆ.


ಇದರಂತೆ ತೈಲವನ್ನು ಮಾಡುವವನು ಹಾಗು ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು.


ಏಲಿಯ ಮನೆಯವರ ಅಪರಾಧವು ಎಂದಿಗೂ ಬಲಿಯಿಂದಾಗಲಿ ನೈವೇದ್ಯಗಳಿಂದಾಗಲಿ ಪರಿಹಾರವಾಗುವುದಿಲ್ಲವೆಂದು ಪ್ರಮಾಣಮಾಡಿದ್ದೇನೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು