Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:35 - ಕನ್ನಡ ಸತ್ಯವೇದವು C.L. Bible (BSI)

35 ಆಗ ಸರ್ವೇಶ್ವರ ಮೋಶೆಗೆ, “ಆ ಮನುಷ್ಯನಿಗೆ ಮರಣ ಶಿಕ್ಷೆಯಾಗಬೇಕು. ಜನಸಮೂಹದವರೆಲ್ಲ ಅವನನ್ನು ಪಾಳೆಯದ ಹೊರಗೆ ಕಲ್ಲೆಸೆದು ಕೊಲ್ಲಬೇಕು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ತರುವಾಯ ಯೆಹೋವನು ಮೋಶೆಗೆ, “ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ತರುವಾಯ ಯೆಹೋವನು - ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರು ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆಗ ಯೆಹೋವನು ಮೋಶೆಗೆ, “ಆ ಮನುಷ್ಯನು ಸಾಯಬೇಕು. ಅವನನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಎಲ್ಲಾ ಜನರು ಕಲ್ಲೆಸೆದು ಕೊಲ್ಲಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆಗ ಯೆಹೋವ ದೇವರು ಮೋಶೆಗೆ, “ಆ ಮನುಷ್ಯನು ಖಂಡಿತವಾಗಿಯೂ ಸಾಯಲೇಬೇಕು, ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:35
11 ತಿಳಿವುಗಳ ಹೋಲಿಕೆ  

ಪಟ್ಟಣದಿಂದ ಹೊರಕ್ಕೆ ದಬ್ಬಿ ಅವನ ಮೇಲೆ ಕಲ್ಲು ತೂರಿದರು. ಸಾಕ್ಷಿಕೊಟ್ಟವರು ತಮ್ಮ ಬಟ್ಟೆಬರೆಗಳನ್ನು ತರುಣ ಸೌಲನ ವಶದಲ್ಲಿ ಇಟ್ಟಿದ್ದರು.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಅಗ ಊರಿನವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದು ಹಾಕಿಬಿಡಬೇಕು. ಇಸ್ರಯೇಲರೆಲ್ಲರು ಕೇಳಿ ಭಯಪಡುವರು.


ಮೋಶೆ ಈ ಮಾತುಗಳನ್ನು ಇಸ್ರಯೇಲರಿಗೆ ತಿಳಿಸಿದನು. ಅವರು ಆ ದೂಷಕನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದರು. ಸರ್ವೇಶ್ವರ ಸ್ವಾಮಿ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು.


ಇಸ್ರಯೇಲರಲ್ಲೇ ಆಗಲಿ, ಅವರ ಮಧ್ಯೆ ವಾಸಿಸುವ ಅನ್ಯದೇಶೀಯರಲ್ಲೇ ಆಗಲಿ ಯಾವನಾದರು ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ನಾಡಿನ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.


ಯೇಸುವನ್ನು ಆ ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರಿದ್ದ ಗುಡ್ಡದ ತುದಿಗೆ ಕೊಂಡೊಯ್ದು, ಅಲ್ಲಿಂದ ಅವರನ್ನು ಕೆಳಕ್ಕೆ ದಬ್ಬಬೇಕೆಂದಿದ್ದರು.


ಭೂತಪ್ರೇತಗಳನ್ನು ವಿಚಾರಿಸುವವರು ಸ್ತ್ರೀಯರಾಗಲಿ ಪುರುಷರಾಗಲಿ ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು; ಆ ಶಿಕ್ಷೆಗೆ ಅವರೇ ಕಾರಣರು.


ಅಂತೆಯೇ ಜನಸಮೂಹದವರೆಲ್ಲರು ಆ ವ್ಯಕ್ತಿಯನ್ನು ಪಾಳೆಯದ ಹೊರಗೆ ಎಳೆದುಕೊಂಡು ಹೋಗಿ ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಕಲ್ಲೆಸೆದು ಕೊಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು