ಅರಣ್ಯಕಾಂಡ 16:13 - ಕನ್ನಡ ಸತ್ಯವೇದವು C.L. Bible (BSI)13 ಅವರು ಅವನಿಗೆ, “ನಾವು ಬರುವುದಿಲ್ಲ, ಹಾಲೂಜೇನೂ ಹರಿಯುವ ದೇಶದಿಂದ ನಮ್ಮನ್ನು ಕರೆತಂದು ಈ ಮರಳುಗಾಡಿನಲ್ಲಿ ಸಾಯಿಸುತ್ತಿರುವೆ. ಇದು ಅಲ್ಪಕಾರ್ಯವೆಂದು ಎಣಿಸುತ್ತೀಯೋ? ನಮ್ಮ ಮೇಲೆ ದೊರೆತನ ಮಾಡಬೇಕೆಂದು ಕೋರುತ್ತಿರುವೆಯೋ?” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀನು ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾವು ಬರುವದಿಲ್ಲ, ನೀನು ಹಾಲೂ ಜೇನೂಹರಿಯವ ದೇಶದಿಂದ ನಮ್ಮನ್ನು ಕರಕೊಂಡು ಬಂದು ಮರಳುಕಾಡಿನಲ್ಲಿ ಸಾಯಿಸುವದು ಅಲ್ಪಕಾರ್ಯವೆಂದು ಎಣಿಸಿ ನಮ್ಮ ಮೇಲೆ ದೊರೆತನ ಮಾಡಬೇಕೆಂದು ಕೋರುತ್ತೀಯೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀನು ಹಾಲೂ ಜೇನೂ ಹರಿಯುವ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದು ಮರಳುಗಾಡಿನಲ್ಲಿ ಸಾಯಿಸುವುದು ಸಾಕಾಗಲಿಲ್ಲವೆಂದು ಭಾವಿಸಿ ನಮ್ಮ ಮೇಲೆ ದೊರೆತನ ಮಾಡಲು ಅಪೇಕ್ಷಿಸುತ್ತಿರುವೆಯೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನೀನು ಮರುಭೂಮಿಯಲ್ಲಿ ನಮ್ಮನ್ನು ಸಾಯಿಸುವುದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಹೊರಕ್ಕೆ ಕರೆದುಕೊಂಡು ಬಂದದ್ದು ನಿನಗೆ ಸಾಕಾಗಲಿಲ್ಲವೋ? ನೀನು ಅರಸನಾಗಿ ನಮ್ಮನ್ನು ಆಳಬೇಕೋ? ಅಧ್ಯಾಯವನ್ನು ನೋಡಿ |