ಅರಣ್ಯಕಾಂಡ 16:15 - ಕನ್ನಡ ಸತ್ಯವೇದವು C.L. Bible (BSI)15 ಅದಕ್ಕೆ ಮೋಶೆ ಬಹುಕೋಪಗೊಂಡನು. ಸರ್ವೇಶ್ವರನಿಗೆ, “ತಾವು ಇವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡಿ. ನಾನು ಇವರಿಂದ ಒಂದು ಕತ್ತೆಯನ್ನೂ ಕೂಡ ತೆಗೆದುಕೊಂಡವನಲ್ಲ. ಅವರಲ್ಲಿ ಒಬ್ಬನಿಗಾದರೂ ಹಾನಿಮಾಡಿದವನಲ್ಲ,” ಎಂದು ಮನವಿಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, “ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ” ಎಂದು ಮನವಿಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅದಕ್ಕೆ ಮೋಶೆ ಬಹು ಕೋಪಗೊಂಡು ಯೆಹೋವನಿಗೆ - ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ ಎಂದು ಮನವಿಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಇದರಿಂದ ಮೋಶೆ ಬಹಳ ಕೋಪಗೊಂಡನು. ಅವನು ಯೆಹೋವನಿಗೆ, “ನಾನು ಈ ಜನರಿಗೆ ಎಂದೂ ತೊಂದರೆ ಮಾಡಲಿಲ್ಲ. ಅವರಿಂದ ನಾನು ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ. ಯೆಹೋವನೇ, ಅವರ ಕಾಣಿಕೆಯನ್ನು ಸ್ವೀಕರಿಸಬೇಡ” ಎಂದು ಮನವಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಮೋಶೆಯು ಬಹಳವಾಗಿ ಕೋಪಿಸಿಕೊಂಡು ಯೆಹೋವ ದೇವರಿಗೆ, “ಅವರ ಬಲಿಯನ್ನು ನೀವು ಗೌರವಿಸಬೇಡಿ, ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ. ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |