Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:18 - ಕನ್ನಡ ಸತ್ಯವೇದವು C.L. Bible (BSI)

18 ಅದರಂತೆ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಬಂದು, ಅವುಗಳಲ್ಲಿ ಕೆಂಡವನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆ ದೇವದರ್ಶನದ ಗುಡಾರದ ಬಾಗಿಲಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದಕ್ಕೆ ಅನುಸಾರವಾಗಿ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದಕ್ಕನುಸಾರವಾಗಿ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಆರೋನರ ಜೊತೆಯಲ್ಲಿ ದೇವದರ್ಶನದ ಗುಡಾರದ ಬಾಗಲಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅದಕ್ಕನುಸಾರವಾಗಿ ಅವರೆಲ್ಲರೂ ತಮ್ಮತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಆರೋನರ ಜೊತೆಯಲ್ಲಿ ದೇವದರ್ಶನಗುಡಾರದ ಪ್ರವೇಶದ್ವಾರದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಅವರು ತಮ್ಮ ತಮ್ಮ ಧೂಪ ಪಾತ್ರೆಗಳನ್ನು ತೆಗೆದುಕೊಂಡು ಅವುಗಳ ಮೇಲೆ ಬೆಂಕಿಯನ್ನು ಹಾಕಿ, ಧೂಪವನ್ನು ಅದರ ಮೇಲೆ ಹಾಕಿ, ದೇವದರ್ಶನ ಗುಡಾರದ ಬಾಗಿಲಿನ ಮುಂದೆ ಮೋಶೆ ಆರೋನರ ಸಂಗಡ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:18
7 ತಿಳಿವುಗಳ ಹೋಲಿಕೆ  

ಅವನು ತನಗೋಸ್ಕರವಾದ ಆ ಹೋರಿಯನ್ನು ವಧಿಸಿದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳ ಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ,


ಪಂಗಡದ ಪ್ರತಿಯೊಬ್ಬನು ತನ್ನ ತನ್ನ ಧೂಪಾರತಿಯನ್ನು ಅಂದರೆ ಒಟ್ಟು 250 ಧೂಪಾರತಿಗಳನ್ನು ತೆಗೆದುಕೊಂಡು ಧೂಪಹಾಕಿ ಸರ್ವೇಶ್ವರನ ಸನ್ನಿಧಿಗೆ ಬರಬೇಕು. ನೀನು ಮತ್ತು ಆರೋನನು ಕೂಡ ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು,” ಎಂದು ಹೇಳಿದನು.


ಬಳಿಕ ಕೋರಹನು ಸಮುದಾಯದವರೆಲ್ಲರನ್ನು ತಮಗೆದುರಾಗಿ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿದನು. ಆಗ ಸರ್ವೇಶ್ವರನ ತೇಜಸ್ಸು ಸಮುದಾಯದವರೆಲ್ಲರಿಗೆ ಹೊಳೆಯಿತು.


ಆ ಧೂಪವನ್ನು ಸರ್ವೇಶ್ವರನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಧೂಪದ ಹೊಗೆ ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಮುಚ್ಚುವುದು.


“ಸುಟ್ಟುಹೋದವರ ನಡುವೆಯಿಂದ ಆ ಧೂಪಾರತಿಗಳನ್ನು ಎತ್ತಬೇಕೆಂದು ಮಹಾಯಾಜಕ ಆರೋನನ ಮಗ ಎಲ್ಲಾಜಾರನಿಗೆ ಆಜ್ಞಾಪಿಸು; ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರಕ್ಕೆ ಚೆಲ್ಲು.


ಸತ್ತವರಿಗೂ ಹಾಗೂ ಬದುಕುವವರಿಗೂ ನಡುವೆ ಅವನು ನಿಂತನು. ಆ ವಿಪತ್ತು ಶಮನವಾಯಿತು.


ಆದರೆ ಅವನು ಬಲಿಷ್ಠನಾದ ಮೇಲೆ, ಗರ್ವಿಷ್ಠನೂ ಭ್ರಷ್ಠನೂ ಆದನು. ತನ್ನ ದೇವರಾದ ಸರ್ವೇಶ್ವರನಿಗೆ ದ್ರೋಹಿಯಾಗಿ, ಧೂಪವೇದಿಯ ಮೇಲೆ ತಾನೇ ಧೂಪಾರತಿ ಎತ್ತಬೇಕೆಂದು ಸರ್ವೇಶ್ವರನ ಆಲಯದ ಒಳಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು