ಅರಣ್ಯಕಾಂಡ 16:21 - ಕನ್ನಡ ಸತ್ಯವೇದವು C.L. Bible (BSI)21 “ನೀವು ಈ ಸಮುದಾಯದವರಿಂದ ಪ್ರತ್ಯೇಕವಾಗಿ ನಿಲ್ಲಿ; ನಾನು ಇವರನ್ನು ಒಂದು ಕ್ಷಣಮಾತ್ರದಲ್ಲಿ ಭಸ್ಮ ಮಾಡಿಬಿಡುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ನೀವು ಈ ಸರ್ವಸಮೂಹದವರಿಂದ ಪ್ರತ್ಯೇಕವಾಗಿ ನಿಲ್ಲಿರಿ; ನಾನು ಇವರನ್ನು ಒಂದು ಕ್ಷಣದಲ್ಲಿ ದಹಿಸಿಬಿಡುತ್ತೇನೆ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ಈ ಜನರನ್ನು ಬಿಟ್ಟು ಪ್ರತ್ಯೇಕವಾಗಿ ನಿಲ್ಲಿರಿ. ನಾನು ಅವರನ್ನು ಈಗ ನಾಶ ಮಾಡಬಯಸುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಈ ಜನರ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿ |
ಈಜಿಪ್ಟಿನವರು ತಮ್ಮ ವಿಷಯದಲ್ಲಿ, ‘ಸರ್ವೇಶ್ವರನು ಕೇಡುಮಾಡಬೇಕೆಂಬ ಉದ್ದೇಶದಿಂದಲೇ ಇಸ್ರಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದದ್ದು; ಅವರನ್ನು ಬೆಟ್ಟಗುಡ್ಡಗಳಲ್ಲಿ ಸಾಯಿಸಿ ಇಳೆಯಲ್ಲಿ ಉಳಿಯದಂತೆ ನಿರ್ಮೂಲ ಮಾಡಬೇಕೆಂದೇ ಅವರನ್ನು ಕರೆದುಕೊಂಡು ಹೋದದ್ದು ಎಂದು ಆಡಿಕೊಳ್ಳುವುದಕ್ಕೆ ಎಡೆಮಾಡಿಕೊಳ್ಳಬೇಕೆ? ತಾವು ಕೋಪಾಗ್ನಿಯನ್ನು ಬಿಟ್ಟು ತಮ್ಮ ಪ್ರಜೆಗೆ ಕೇಡುಮಾಡಬೇಕೆಂಬ ಮನಸ್ಸನ್ನು ಮಾರ್ಪಡಿಸಿಕೊಳ್ಳಿ.