Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:24 - ಕನ್ನಡ ಸತ್ಯವೇದವು C.L. Bible (BSI)

24 “ಇಸ್ರಯೇಲ್ ಸಮಾಜದವರು ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದ ಸುತ್ತಲಿರದೆ ದೂರವಿರಬೇಕೆಂದು ಅವರಿಗೆ ಆಜ್ಞಾಪಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಇಸ್ರಾಯೇಲರ ಸಮೂಹದವರಿಗೆ, ‘ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರವಿರಬೇಕು’ ಎಂದು ಅವರಿಗೆ ಆಜ್ಞಾಪಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇಸ್ರಾಯೇಲ್ಯರ ಸಮೂಹದವರು ಕೋರಹ ದಾತಾನ್ ಅಬೀರಾಮರ ಗುಡಾರದ ಸುತ್ತಲಿರದೆ ದೂರವಿರಬೇಕೆಂದು ಅವರಿಗೆ ಆಜ್ಞಾಪಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಜನರಿಗೆ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದ ಸುತ್ತಮುತ್ತಲಿಂದ ದೂರಹೋಗಬೇಕೆಂದು ಆಜ್ಞಾಪಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ನೀನು ಜನರ ಸಮೂಹಕ್ಕೆ, ‘ಕೋರಹ, ದಾತಾನ್, ಅಬೀರಾಮರ ನಿವಾಸದ ಸುತ್ತಲಿಂದ ದೂರವಿರಬೇಕು,’ ಎಂದು ಅವರಿಗೆ ಆಜ್ಞಾಪಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:24
5 ತಿಳಿವುಗಳ ಹೋಲಿಕೆ  

“ನೀವು ಈ ಸಮುದಾಯದವರಿಂದ ಪ್ರತ್ಯೇಕವಾಗಿ ನಿಲ್ಲಿ; ನಾನು ಇವರನ್ನು ಒಂದು ಕ್ಷಣಮಾತ್ರದಲ್ಲಿ ಭಸ್ಮ ಮಾಡಿಬಿಡುತ್ತೇನೆ,” ಎಂದರು.


ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಚಾರನ ಮಗನೂ ಆದ ಕೋರಹ ಮತ್ತು ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನ್ ಹಾಗೂ ಅಬೀರಾಮ್ ಮತ್ತು ಪೆಲೆತನ ಮಗ ಓನ್ - ಇವರು ಮೋಶೆಗೆ ವಿರುದ್ಧ ಪ್ರತಿಭಟಿಸಿದರು.


ಆಗ ಮೋಶೆ ಎದ್ದು ದಾತಾನ್ - ಅಬೀರಾಮರ ಬಳಿಗೆ ಹೋದನು. ಇಸ್ರಯೇಲರ ಹಿರಿಯರು ಅವನ ಹಿಂದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು