Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:25 - ಕನ್ನಡ ಸತ್ಯವೇದವು C.L. Bible (BSI)

25 ಆಗ ಮೋಶೆ ಎದ್ದು ದಾತಾನ್ - ಅಬೀರಾಮರ ಬಳಿಗೆ ಹೋದನು. ಇಸ್ರಯೇಲರ ಹಿರಿಯರು ಅವನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಮೋಶೆ ಎದ್ದು ದಾತಾನ್ ಮತ್ತು ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲರ ಹಿರಿಯರು ಅವನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಮೋಶೆ ಎದ್ದು ದಾತಾನ್ ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲ್ಯರ ಹಿರಿಯರು ಅವನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಮೋಶೆಯು ಎದ್ದು ಕೋರಹ, ದಾತಾನ್ ಮತ್ತು ಅಬೀರಾಮರ ಬಳಿಗೆ ಹೋದನು. ಇಸ್ರೇಲರ ಹಿರಿಯರೆಲ್ಲರೂ ಅವನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮೋಶೆಯು ಎದ್ದು ದಾತಾನ್, ಅಬೀರಾಮರ ಬಳಿಗೆ ಹೋದನು. ಇಸ್ರಾಯೇಲರ ಹಿರಿಯರು ಅವನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:25
6 ತಿಳಿವುಗಳ ಹೋಲಿಕೆ  

ತರುವಾಯ ಮೋಶೆ ಮತ್ತು ಇಸ್ರಯೇಲರ ಹಿರಿಯರು ಪಾಳೆಯಕ್ಕೆ ಹಿಂದಿರುಗಿದರು.


ಆಗ ಸರ್ವೇಶ್ವರ ಮೇಘದಲ್ಲಿ ಇಳಿದುಬಂದು ಅವನೊಡನೆ ಮಾತಾಡಿ ಅವನಿಗೆ ಅನುಗ್ರಹಿಸಲಾಗಿದ್ದ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಹಂಚಿದರು. ಆ ಶಕ್ತಿ ಅವರ ಮೇಲೆ ಇಳಿದುಬಂದಾಗ ಅವರು ಪರವಶರಾಗಿ ಪ್ರವಾದಿಸಿದರು. ಅಂಥ ಅನುಭವ ಅವರಿಗೆ ಮತ್ತೆ ಬರಲಿಲ್ಲ.


ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಚಾರನ ಮಗನೂ ಆದ ಕೋರಹ ಮತ್ತು ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನ್ ಹಾಗೂ ಅಬೀರಾಮ್ ಮತ್ತು ಪೆಲೆತನ ಮಗ ಓನ್ - ಇವರು ಮೋಶೆಗೆ ವಿರುದ್ಧ ಪ್ರತಿಭಟಿಸಿದರು.


“ಇಸ್ರಯೇಲ್ ಸಮಾಜದವರು ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದ ಸುತ್ತಲಿರದೆ ದೂರವಿರಬೇಕೆಂದು ಅವರಿಗೆ ಆಜ್ಞಾಪಿಸು,” ಎಂದರು.


ಇಸ್ರಯೇಲ್ ಸಮಾಜದವರಿಗೆ ಅವನು, “ಈ ದುಷ್ಟರ ಡೇರೆಗಳ ಬಳಿಯಿರದೆ ದೂರಹೋಗಿ. ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬೇಡಿ. ಇವರ ದೋಷಗಳಿಗೆ ಬರಲಿರುವ ಶಿಕ್ಷೆ ನಿಮ್ಮನ್ನು ಕೊಚ್ಚಿಕೊಂಡು ಹೋದೀತು,” ಎಂದು ಎಚ್ಚರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು