Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:27 - ಕನ್ನಡ ಸತ್ಯವೇದವು C.L. Bible (BSI)

27 ಆದಕಾರಣ ಅವರೆಲ್ಲ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದ ಸುತ್ತಲಿರದೆ ಬೇರೆಹೋದರು. ದಾತಾನ್, ಅಬೀರಾಮ ಮತ್ತು ಅವರ ಮಡದಿ ಮಕ್ಕಳು, ಬಂಧುಬಳಗದವರೂ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದಕಾರಣ ಅವರೆಲ್ಲರೂ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರ ಹೋದರು. ದಾತಾನ್ ಮತ್ತು ಅಬೀರಾಮರೂ ಅವರ ಹೆಂಡತಿ, ಮಕ್ಕಳು ಮತ್ತು ಅವರಿಗೆ ಸಂಬಂಧಪಟ್ಟವರೆಲ್ಲರೂ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದಕಾರಣ ಅವರೆಲ್ಲರೂ ಕೋರಹ ದಾತಾನ್ ಅಬೀರಾಮರ ಗುಡಾರದ ಸುತ್ತಲಿರದೆ ಬೇರೆ ಹೋದರು. ದಾತಾನ್ ಅಬೀರಾಮರೂ ಅವರ ಹೆಂಡರೂ ಮಕ್ಕಳೂ ಅವರಿಗೆ ಸಂಬಂಧಪಟ್ಟವರೆಲ್ಲರೂ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಬಾಗಲುಗಳಲ್ಲಿ ನಿಂತು ಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದ್ದರಿಂದ ಜನರು ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರಗಳನ್ನು ಬಿಟ್ಟು ದೂರಹೋದರು. ದಾತಾನ್ ಮತ್ತು ಅಬೀರಾಮ್ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಪ್ರವೇಶದ್ವಾರದ ಬಳಿ ತಮ್ಮ ಹೆಂಡತಿಯರೊಡನೆ, ಮಕ್ಕಳೊಡನೆ ಮತ್ತು ಕೂಸುಗಳೊಡನೆ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಅವರು ಕೋರಹನ ದಾತಾನ್, ಅಬೀರಾಮರ ಡೇರೆಗಳ ಸುತ್ತಲಿಂದ ದೂರ ಹೋದರು. ದಾತಾನನೂ, ಅಬೀರಾಮನೂ ತಮ್ಮ ಹೆಂಡತಿಯರೂ, ಪುತ್ರರೂ, ಚಿಕ್ಕ ಮಕ್ಕಳೂ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:27
9 ತಿಳಿವುಗಳ ಹೋಲಿಕೆ  

ಆದಕಾರಣ, ಜೆರುಸಲೇಮಿನ ಜನರನ್ನಾಳುವ ಧರ್ಮನಿಂದಕರೇ, ಸರ್ವೇಶ್ವರ ಸ್ವಾಮಿಯ ಮಾತನ್ನು ಕೇಳಿರಿ.


ಭಂಗಕ್ಕೆ ಮುಂಚೆ ಗರ್ವದ ಗುಂಡಿಗೆ; ಗೌರವಕ್ಕೆ ಮೊದಲು ನಮ್ರತೆ.


ವಿನಾಶಕ್ಕೆ ಮುಂಚೆ ವಿಪರೀತ ಬುದ್ಧಿ; ನೆಲಕ್ಕುರುಳುವುದಕ್ಕೆ ಮುಂಚೆ ನೆತ್ತಿಗೇರಿತು ಸೊಕ್ಕು.


ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ.


ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಚಾರನ ಮಗನೂ ಆದ ಕೋರಹ ಮತ್ತು ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನ್ ಹಾಗೂ ಅಬೀರಾಮ್ ಮತ್ತು ಪೆಲೆತನ ಮಗ ಓನ್ - ಇವರು ಮೋಶೆಗೆ ವಿರುದ್ಧ ಪ್ರತಿಭಟಿಸಿದರು.


ಆ ಪಂಗಡದವರೆಲ್ಲರು ಸತ್ತರು. ಆದರೆ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.


ಮೋಶೆ ಗುಡಾರಕ್ಕೆ ಹೋಗುವಾಗಲೆಲ್ಲಾ ಜನರೆಲ್ಲರು ಎದ್ದು ತಮ್ಮತಮ್ಮ ಡೇರೆಗಳ ಬಾಗಿಲಲ್ಲಿ ನಿಂತು ಮೋಶೆ ಆ ಗುಡಾರದೊಳಗೆ ಹೋಗುವ ತನಕ ಅವನ ಹಿಂದೆ ನೋಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು