Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:28 - ಕನ್ನಡ ಸತ್ಯವೇದವು C.L. Bible (BSI)

28 ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲ ನನ್ನ ಸ್ವಂತ ಆಲೋಚನೆಯಿಂದ ಆಗಲಿಲ್ಲ, ಸರ್ವೇಶ್ವರನೇ ಇವುಗಳನ್ನು ನಡೆಸುವುದಕ್ಕೆ ನನ್ನನ್ನು ಕಳಿಸಿದ್ದಾರೆಂದು ನೀವೇ ತಿಳಿದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಮತ್ತು ಯೆಹೋವನೇ ಇವುಗಳನ್ನು ನಡಿಸುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವೇ ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಗ ಮೋಶೆ ಜನರಿಗೆ - ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಯೆಹೋವನೇ ಇವುಗಳನ್ನು ನಡಿಸುವದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವು ತಿಳುಕೊಳ್ಳುವದು ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಯೆಹೋವನೇ ಈ ಕಾರ್ಯಗಳನ್ನು ಮಾಡುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವು ತಿಳಿದುಕೊಳ್ಳುವಂತೆ ನಾನು ಸಾಕ್ಷಿಯನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಮೋಶೆಯು, “ಈ ಕಾರ್ಯಗಳನ್ನೆಲ್ಲಾ ಮಾಡುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ, ಅವುಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲ ಎಂದು ನೀವು ಇದರಿಂದ ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:28
17 ತಿಳಿವುಗಳ ಹೋಲಿಕೆ  

ನಾನು ಸ್ವರ್ಗದಿಂದ ಇಳಿದು ಬಂದುದು ನನ್ನ ಇಚ್ಛೆಯಂತೆ ನಡೆಯುವುದಕ್ಕಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತದಂತೆ ನಡೆಯುವುದಕ್ಕೆ.


ಅದಕ್ಕೆ ದೇವರು, “ನಾನೇ ನಿನ್ನ ಸಂಗಡ ಇರುವೆನು; ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ. ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ಯೊವಾನ್ನನು ನೀಡಿದ ಸಾಕ್ಷ್ಯಕ್ಕಿಂತಲೂ ಮಿಗಿಲಾದ ಸಾಕ್ಷ್ಯ ನನಗುಂಟು; ನಾನು ಸಾಧಿಸುತ್ತಿರುವ ಸುಕೃತ್ಯಗಳೇ, ಅಂದರೆ, ಪಿತನು ನನಗೆ ಮಾಡಿಮುಗಿಸಲು ಕೊಟ್ಟ ಕಾರ್ಯಗಳೇ, ನಾನು ಪಿತನಿಂದ ಬಂದವನೆಂದು ನನ್ನ ಪರವಾಗಿ ಸಾಕ್ಷಿಕೊಡುತ್ತವೆ.


“ನರಪುತ್ರನೇ, ಸ್ವಕಲ್ಪಿತವಾದದ್ದನ್ನು ಭವಿಷ್ಯವಾಣಿ ಎಂದು ಹೇಳುವ ನಿನ್ನ ಸ್ವಕುಲ ಮಹಿಳೆಯರ ಕಡೆಗೆ ಮುಖಮಾಡಿಕೊಂಡು ಅವರನ್ನೂ ಖಂಡಿಸಿ ಹೀಗೆ ಪ್ರವಾದಿಸು:


ಸರ್ವಶಕ್ತ ಸರ್ವೇಶ್ವರನ ನುಡಿಯಿದು: “ಪ್ರವಾದಿಗಳು ನಿಮಗೆ ಹೇಳುವ ಮಾತುಗಳನ್ನು ಕೇಳಬೇಡಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಂಬಿಕೆ ನಿರೀಕ್ಷೆಯನ್ನು ಹುಟ್ಟಿಸುತ್ತಾರಷ್ಟೆ. ಸರ್ವೇಶ್ವರನ ಬಾಯಿಂದ ಹೊರಟದ್ದನ್ನು ನುಡಿಯದೆ ತಮ್ಮ ಸ್ವಂತ ಮನಸ್ಸಿಗೆ ತೋಚಿದ್ದನ್ನೇ ಹೇಳುತ್ತಾರೆ.


‘ನಾನು ಪಿತನಲ್ಲಿ ಇದ್ದೇನೆ. ಪಿತನು ನನ್ನಲ್ಲಿ ಇದ್ದಾರೆ,’ ಎನ್ನುವ ನನ್ನ ಮಾತುಗಳನ್ನು ವಿಶ್ವಾಸಿಸಿರಿ; ಇಲ್ಲವೇ, ನಾನು ಸಾಧಿಸಿದ ಸುಕೃತ್ಯಗಳ ನಿಮಿತ್ತದಿಂದಾದರೂ ವಿಶ್ವಾಸಿಸಿರಿ.


ನನ್ನ ಪ್ರಾರ್ಥನೆಗೆ ನೀವು ಯಾವಾಗಲೂ ಕಿವಿಗೊಡುತ್ತೀರಿ ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಆದರೆ ನನ್ನನ್ನು ಕಳುಹಿಸಿದಾತ ನೀವೇ ಎಂದು ಸುತ್ತಲೂ ನೆರೆದಿರುವವರು ನಂಬುವಂತೆ ನಾನು ಹೀಗೆ ಹೇಳಿದೆನು,” ಎಂದು ನುಡಿದರು.


“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆ. ಪಿತನು ನನಗೆ ತಿಳಿಸಿದ ಪ್ರಕಾರ ನಾನು ತೀರ್ಪು ಕೊಡುತ್ತೇನೆ. ಈ ನನ್ನ ತೀರ್ಪು ನ್ಯಾಯಬದ್ಧ ಆದುದು. ಏಕೆಂದರೆ, ನಾನು ನನ್ನ ಸ್ವಂತ ಇಚ್ಛೆಯನ್ನು ನೆರವೇರಿಸದೆ ಪಿತನ ಚಿತ್ತವನ್ನೇ ನೆರವೇರಿಸಲು ಆಶಿಸುತ್ತೇನೆ.


ಪ್ರಾರಂಭದಲ್ಲಿ ಚಿಕ್ಕಕಾರ್ಯಗಳನ್ನು ನೋಡಿ ಪರಿಹಾಸ್ಯಮಾಡಿದವರು ಆಗ ಜೆರುಬ್ಬಾಬೆಲನ ಕೈಯಲ್ಲಿ ಅಳತೆನೂಲಿನ ಗುಂಡನ್ನು ಕಂಡು ಸಂತೋಷಪಡುವರು.”


‘ನಿಮ್ಮನ್ನು ಮುಟ್ಟುವವರು ನನ್ನ ಕಣ್ಮಣಿಯನ್ನೇ ಮುಟ್ಟಿದಂತೆ! ಇಗೋ, ನಾನು ಅವರ ಮೇಲೆ ಕೈಯೆತ್ತುವೆನು. ಅವರು ತಮ್ಮ ದಾಸರ ಕೈಯಿಂದಲೇ ಸೂರೆಯಾಗುವರು. ನನ್ನನ್ನು ಕಳುಹಿಸಿದವರು ಸೇನಾಧೀಶ್ವರ ಸರ್ವೇಶ್ವರ ಎಂಬುದು ಆಗ ನಿಮಗೆ ಗೊತ್ತಾಗುವುದು’.”


ಸಂಧ್ಯಾನೈವೇದ್ಯದ ಹೊತ್ತಿಗೆ, ಪ್ರವಾದಿ ಎಲೀಯನು ಪೀಠದ ಹತ್ತಿರ ಬಂದು, “ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರೇ, ಸರ್ವೇಶ್ವರಾ, ನೀವೊಬ್ಬರೇ ಇಸ್ರಯೇಲರ ದೇವರಾಗಿರುತ್ತೀರಿ ಎಂಬುದನ್ನು, ನಾನು ನಿನ್ನ ದಾಸನಾಗಿರುತ್ತೇನೆಂಬುದನ್ನು ಹಾಗು ಇದನ್ನೆಲ್ಲಾ ನಿಮ್ಮ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನು ಈ ದಿನ ತೋರಿಸಿಕೊಡಿ.


ಪ್ರವಾದಿ ಸರ್ವೇಶ್ವರನ ಮಾತೆಂದು ಹೇಳಿ, ಮುಂತಿಳಿಸಿದ ಸಂಗತಿ ನಡೆಯದೆ ಹೋದರೆ, ಅವನ ಮಾತು ಸರ್ವೇಶ್ವರನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ಅಧಿಕಾರವಿಲ್ಲದೆ ಮಾತಾಡಿದವನು; ಅವನಿಗೆ ಹೆದರಬಾರದು.


"ಫರೋಹನು ನಿಮಗೆ, ‘ನಾನು ನಿಮ್ಮ ಮಾತನ್ನು ನಂಬಬೇಕಾದರೆ ಮಹತ್ಕಾರ್ಯವೊಂದನ್ನು ನನ್ನ ಮುಂದೆ ಮಾಡಿ,’ ಎಂದು ಹೇಳಿದರೆ ಮೋಶೆ ಆರೋನನಿಗೆ, ‘ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದ ಮೇಲೆ ಬಿಸಾಡು’ ಎಂದು ಹೇಳಲಿ. ಅದು ಸರ್ಪವಾಗುವುದು,” ಎಂದು ಹೇಳಿದರು.


ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮಾಡುವೆನೆಂದು ನೀನು ನನ್ನ ಬಳಿಗೆ ಕಳಿಸಿದ ದೂತರಿಗೆ ನಾನು ಹೇಳಲಿಲ್ಲವೆ?


ಆದುದರಿಂದ ಈಗಲೇ ಹೊರಡು; ನಿನ್ನ ಬಾಯಲ್ಲಿ ನಾನೇ ಇರುವೆನು; ನೀನು ಮಾತಾಡಬೇಕಾದುದನ್ನು ನಿನಗೆ ಕಲಿಸಿಕೊಡುವೆನು,” ಎಂದು ಹೇಳಿದರು.


ನೀನು ಅವನ ಸಂಗಡ ಮಾತಾಡಿ ಹೇಳಬೇಕಾದ ವಿಷಯಗಳನ್ನು ತಿಳಿಸು . ನಾನು ನಿನಗೂ ಅವನಿಗೂ ಹೇಗೆ ಮಾತಾಡಬೇಕೆಂದು ತಿಳಿಸಿ ನೀವು ಮಾಡಬೇಕಾದುದನ್ನು ಕಲಿಸುವೆನು .


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು