ಅರಣ್ಯಕಾಂಡ 16:3 - ಕನ್ನಡ ಸತ್ಯವೇದವು C.L. Bible (BSI)3 ಇವರೆಲ್ಲರೂ ಜೊತೆಗೂಡಿ ಮೋಶೆ ಮತ್ತು ಆರೋನರ ಬಳಿಗೆ ಬಂದು, “ನಿಮ್ಮ ವರ್ತನೆ ಅಧಿಕವಾಯಿತು. ಈ ಸಮುದಾಯದಲ್ಲಿ ಪ್ರತಿಯೊಬ್ಬನೂ ಪ್ರತಿಷ್ಠಿತನೇ. ಸರ್ವೇಶ್ವರ ಇವರೆಲ್ಲರಲ್ಲಿ ವಾಸವಾಗಿದ್ದಾರಲ್ಲವೇ? ಹೀಗಿರಲಾಗಿ ಸರ್ವೇಶ್ವರನ ಸಮುದಾಯದವರಿಗಿಂತ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇಕೆ?” ಎಂದು ವಾದಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, “ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಆರೋನರ ಬಳಿಗೆ ಬಂದು ಅವರಿಗೆ - ನಿವ್ಮಿುಂದ ಸಾಕಾಯಿತು; ಈ ಸಮೂಹದವರಲ್ಲಿ ಪ್ರತಿಯೊಬ್ಬನೂ ದೇವರಿಗೆ ಪ್ರತಿಷ್ಠಿತನೇ; ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನಲ್ಲವೇ; ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವದೇನು ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅವರು ಮೋಶೆ ಮತ್ತು ಆರೋನರ ವಿರುದ್ಧ ಒಟ್ಟಾಗಿ ಸೇರಿಬಂದು, ಅವರಿಗೆ, “ನೀವು ಅಧಿಕಾರವನ್ನು ಮತ್ತು ಘನತೆಯನ್ನು ಅತಿಯಾಗಿ ಅಪೇಕ್ಷಿಸುತ್ತಿರುವಿರಿ. ಈ ಸಮೂಹದವರಲ್ಲಿರುವ ಪ್ರತಿಯೊಬ್ಬನೂ ದೇವರಿಗೆ ಪ್ರತಿಷ್ಠಿತನೇ. ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಜನರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇನು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರು ಮೋಶೆಗೂ, ಆರೋನನಿಗೂ ವಿರೋಧವಾಗಿ ಕೂಡಿಕೊಂಡು, “ನೀವು ಹೆಚ್ಚು ಅಧಿಕಾರ ತೆಗೆದುಕೊಳ್ಳುತ್ತೀರಿ, ಏಕೆಂದರೆ ಈ ಸಮೂಹದಲ್ಲಿರುವ ಎಲ್ಲರೂ ಪರಿಶುದ್ಧರು. ಯೆಹೋವ ದೇವರು ಅವರ ಮಧ್ಯದಲ್ಲಿದ್ದಾರೆ. ಹೀಗಿರಲಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಅವರಿಗೆ ಕೇಳಿದರು. ಅಧ್ಯಾಯವನ್ನು ನೋಡಿ |