Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:32 - ಕನ್ನಡ ಸತ್ಯವೇದವು C.L. Bible (BSI)

32 ಭೂಮಿ ಬಾಯ್ದೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸೇರಿದ ವ್ಯಕ್ತಿಗಳೆಲ್ಲರನ್ನೂ ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನಿಗೆ ಸೇರಿದ ಮನುಷ್ಯರೆಲ್ಲರನ್ನೂ, ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಭೂವಿುಯು ಬಾಯ್ದೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸೇರಿದ ಮನುಷ್ಯರೆಲ್ಲರನ್ನೂ ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಭೂಮಿಯೇ ಬಾಯಿತೆರೆದು ಅವರನ್ನು ನುಂಗಿಬಿಟ್ಟಿತೊ ಎಂಬಂತೆ, ಅವರ ಕುಟುಂಬಗಳವರನ್ನು ಕೋರಹನ ಎಲ್ಲಾ ಹಿಂಬಾಲಕರನ್ನು ಮತ್ತು ಅವರ ಆಸ್ತಿಯೆಲ್ಲವನ್ನು ನುಂಗಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಭೂಮಿಯು ತನ್ನ ಬಾಯಿತೆರೆದು, ಅವರನ್ನೂ, ಅವರ ಮನೆಗಳನ್ನೂ, ಕೋರಹನಿಗೆ ಸಂಬಂಧಪಟ್ಟ ಸಕಲ ಜನರನ್ನೂ, ಅವರಿಗಿದ್ದದ್ದನ್ನೆಲ್ಲಾ ನುಂಗಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:32
21 ತಿಳಿವುಗಳ ಹೋಲಿಕೆ  

ಆ ಪಂಗಡದವರೆಲ್ಲರು ಸತ್ತರು. ಆದರೆ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.


ಆದರೆ ಭೂಮಿ ಆಕೆಯ ನೆರವಿಗೆ ಬಂದಿತು. ಅದು ತನ್ನ ಬಾಯನ್ನು ತೆರೆದು ಘಟಸರ್ಪದ ಬಾಯಿಂದ ಹೊರಬಂದ ನದಿಯನ್ನು ಕುಡಿದುಬಿಟ್ಟಿತು.


ಭೂಮಿ ಬಾಯ್ದೆರೆದು ನುಂಗಿತು ದಾತಾನನನು I ಮುಚ್ಚಿಬಿಟ್ಟಿತು ಅಭಿರಾಮನ ಕಡೆಯವರನು II


ಪಾತಾಳವು ಹಸಿದು ಹಂಬಲಿಸುತ್ತಿದೆ. ಅಗಾಧವಾಗಿ, ಬಾಯಿ ತೆರೆದು ನಿಂತಿದೆ. ಜೆರುಸಲೇಮಿನ ಶ್ರೀಮಂತರು, ಸದ್ದುಗದ್ದಲ ಮಾಡುವ, ಹೆಮ್ಮೆಯಿಂದ ಹಿಗ್ಗುವ ಜನಸಾಮಾನ್ಯರು ಆ ಪಾತಾಳದೊಳಕ್ಕೆ ಬಿದ್ದುಹೋಗುವರು.


ಕೆಹಾತನ ಸಂತತಿಯವರು: ಅಮ್ಮೀನಾದಾಬ್, ಕೋರಹ, ಅಸ್ಸೀರ್,


ಪ್ರಭು, ಜೀವೋದ್ಧಾರಕನೇ ಕೇಳು I ನಿನಗೆ ಮೊರೆಯಿಡುವೆ ಹಗಲಿರುಳು II


ಪ್ರಭೂ, ತೋರಿಸಿದೆ ಕರುಣೆ ನಿನ್ನ ನಾಡಿಗೆ I ಮರಳಿಸಿದೆ ಸುಕ್ಷೇಮವನು ಯಕೋಬ್ಯರಿಗೆ II


ಹೇ ಪ್ರಭು, ಸ್ವರ್ಗ ಸೇನಾಧೀಶ್ವರ I ನಿನ್ನ ನಿವಾಸಗಳೆನಿತೋ ಸುಂದರ II


ರೂಬೇನನ ಮೊಮ್ಮಕ್ಕಳೂ ಎಲೀಯಾಬನ ಮಕ್ಕಳೂ ಆದ ದಾತಾನ್ ಅಬೀರಾಮರು ದಂಗೆಯೆದ್ದಾಗ ಭೂಮಿ ಬಾಯ್ದೆರೆದು ಅವರನ್ನೂ ಅವರ ಮನೆಯವರನ್ನೂ ಡೇರೆಗಳನ್ನೂ ಅವರಿಗೆ ಸೇರಿದ ಎಲ್ಲ ಪಶುಪ್ರಾಣಿಗಳನ್ನೂ ಇಸ್ರಯೇಲರ ನಡುವೆ ನುಂಗಿಬಿಟ್ಟದ್ದನ್ನೂ ಈಗ ಜ್ಞಾಪಕಮಾಡಿಕೊಳ್ಳಿ. ಈ ಕಾರ್ಯಗಳನ್ನು ನೋಡದೆ ಹಾಗು ತಿಳಿಯದೆ ಇರುವ ನಿಮ್ಮ ಮಕ್ಕಳಿಗೆ ನಾನು ಈ ಮಾತನ್ನು ಹೇಳುತ್ತಿಲ್ಲ;


“ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದರು. ಅವರು ಕೋರಹನ ಜತೆ ಸೇರಿ ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದವರಲ್ಲ. ಅವರು ಸತ್ತದ್ದು ತಮ್ಮ ಸ್ವಂತ ಪಾಪದ ನಿಮಿತ್ತ. ಅವರಿಗೆ ಗಂಡುಮಕ್ಕಳಿರಲಿಲ್ಲ.


ಬದಲಿಗೆ ಸರ್ವೇಶ್ವರ ಇವರಿಗಾಗಿ ಆಶ್ಚರ್ಯಕರವಾದ ಶಿಕ್ಷೆಯನ್ನು ಕಲ್ಪಿಸಿ ಅಂದರೆ ಭೂಮಿ ಬಾಯ್ದೆರೆದು ಇವರನ್ನು ಹಾಗೂ ಇವರಿಗಿರುವ ಸರ್ವಸ್ವವನ್ನು ನುಂಗಿಬಿಟ್ಟರೆ, ಇವರೆಲ್ಲರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಸರ್ವೇಶ್ವರನನ್ನು ಉಲ್ಲಂಘಿಸಿದವರೆಂದು ನೀವು ತಿಳಿದುಕೊಳ್ಳಬೇಕು,” ಎಂದು ಹೇಳಿದನು.


ಪಂಗಡದ ಪ್ರತಿಯೊಬ್ಬನು ತನ್ನ ತನ್ನ ಧೂಪಾರತಿಯನ್ನು ಅಂದರೆ ಒಟ್ಟು 250 ಧೂಪಾರತಿಗಳನ್ನು ತೆಗೆದುಕೊಂಡು ಧೂಪಹಾಕಿ ಸರ್ವೇಶ್ವರನ ಸನ್ನಿಧಿಗೆ ಬರಬೇಕು. ನೀನು ಮತ್ತು ಆರೋನನು ಕೂಡ ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು,” ಎಂದು ಹೇಳಿದನು.


ನಿನ್ನ ಕೈ ಸುರಿಸಿದ ನಿನ್ನ ತಮ್ಮನ ರಕ್ತವನ್ನು ಕುಡಿದ ಈ ನೆಲದಿಂದಾಗಿ ನೀನು ಶಾಪಗ್ರಸ್ತನು; ತಿರಸ್ಕೃತನು.


ಮೋಶೆ ಈ ಮಾತುಗಳನ್ನು ಹೇಳಿ ಮುಗಿಸಿದ ಕೂಡಲೆ ಆ ಜನರ ಕೆಳಗಿದ್ದ ನೆಲವು ಸೀಳಿತು.


ಅವರು ಸಜೀವರಾಗಿ ತಮ್ಮ ಸರ್ವಸ್ವ ಸಹಿತವಾಗಿ ಪಾತಾಳಕ್ಕೆ ಇಳಿದುಬಿಟ್ಟರು. ಭೂಮಿ ಅವರನ್ನು ಮುಚ್ಚಿಕೊಂಡಿತು.


ಕೋರಹನನ್ನು ಸೇರಿಕೊಂಡು ಸತ್ತವರಲ್ಲದೆ ಆ ವಿಪತ್ತಿನಿಂದಲೇ ಸತ್ತವರ ಸಂಖ್ಯೆ 14,700:


ಇವರನ್ನು ಹಾಗು ಕೋರಹನನ್ನು ಭೂಮಿ ಬಾಯ್ದೆರೆದು ನುಂಗಿಬಿಟ್ಟಿತು. ಆ ಪಂಗಡದವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ಬೆಂಕಿ ಸುಟ್ಟು ಹಾಕಿತು. ಹೀಗೆ ಇಸ್ರಯೇಲರಿಗೆ ಎಚ್ಚರಿಕೆ ಉಂಟಾಗುವಂತೆ ಮಾಡಿತು.


ಉತ್ತ ಹೊಲದ ಹೆಂಟೆಗಳನು ಒಡೆದು ಚದರಿಸುವ ಹಾಗೆ I ಎರಚಲಾಗುವುದು ಅವರ ಎಲುಬುಗಳನು ಸನರಕದ ಬಾಯಿಗೆ II


ಬಿರುಕು ಬಿಡುವುದು ಭೂಮಿ ಸೀಳುಪಾಳಾಗಿ ಕತ್ತರಿಸುವುದು ಕದಲಿಹೋಗಿ.


“ಕೆಹಾತ್ಯರ ಗೋತ್ರಕುಟುಂಬಗಳವರು ಲೇವಿಯರೊಳಗೆ ಉಳಿಯದೆ ನಾಶವಾಗುವುದಕ್ಕೆ ಆಸ್ಪದಕೊಡಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು