ಅರಣ್ಯಕಾಂಡ 16:39 - ಕನ್ನಡ ಸತ್ಯವೇದವು C.L. Bible (BSI)39 ಮೋಶೆಯ ಮುಖಾಂತರ ಸರ್ವೇಶ್ವರ ಹೇಳಿದ ಅಪ್ಪಣೆಯ ಮೇರೆಗೆ ಯಾಜಕ ಎಲ್ಲಾಜಾರನು, ಸುಟ್ಟುಹೋದವರು ತಂದಿದ್ದ ಆ ಕಂಚಿನ ಧೂಪಾರತಿಗಳನ್ನು ತಗಡುಗಳನ್ನಾಗಿ ತಟ್ಟಿಸಿ ಬಲಿಪೀಠಕ್ಕೆ ಮುಚ್ಚಳವನ್ನು ಮಾಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಆಗ ಯಾಜಕನಾದ ಎಲ್ಲಾಜಾರನು ಯೆಹೋವನು ಮೋಶೆಯ ಮೂಲಕ ಹೇಳಿದ ಅಪ್ಪಣೆಯ ಪ್ರಕಾರ ದಹಿಸಿಹೋದವರು ಅರ್ಪಿಸಿದ ಆ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಮಾಡಿಸಿ, ಯಜ್ಞವೇದಿಯನ್ನು ಮುಚ್ಚಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಯೆಹೋವನು ಮೋಶೆಯ ಮೂಲಕ ಹೇಳಿದ ಅಪ್ಪಣೆಯ ಮೇರೆಗೆ ಯಾಜಕನಾದ ಎಲ್ಲಾಜಾರನು ಸುಟ್ಟುಹೋದವರಿಂದ ಮೊದಲು ತರಲ್ಪಟ್ಟಿದ್ದ ಆ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಹೊಡಿಸಿ ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಯೆಹೋವನು ಮೋಶೆಗೆ ಕೊಟ್ಟ ಅಪ್ಪಣೆಯ ಮೇರೆಗೆ ಯಾಜಕನಾದ ಎಲ್ಲಾಜಾರನು ಸುಟ್ಟುಹೋದವರಿಂದ ತರಲ್ಪಟ್ಟಿದ್ದ ಆ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಹೊಡಿಸಿ ಯಜ್ಞವೇದಿಕೆಗೆ ಮುಚ್ಚಳವನ್ನು ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಆಗ ಯಾಜಕನಾದ ಎಲಿಯಾಜರನು ಯೆಹೋವ ದೇವರು ಮೋಶೆಯ ಮೂಲಕ ಹೇಳಿದ ಅಪ್ಪಣೆಯ ಪ್ರಕಾರ ಸುಟ್ಟು ಹೋದವರು ಅರ್ಪಿಸಿದ ಕಂಚಿನ ಧೂಪದ ಪಾತ್ರೆಗಳನ್ನು ತೆಗೆದುಕೊಂಡು, ಬಲಿಪೀಠವನ್ನು ಮುಚ್ಚುವುದಕ್ಕಾಗಿ ಅವುಗಳನ್ನು ಅಗಲವಾದ ತಗಡುಗಳನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿ |