Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:41 - ಕನ್ನಡ ಸತ್ಯವೇದವು C.L. Bible (BSI)

41 ಆದರೂ ಇಸ್ರಯೇಲ್ ಸಮುದಾಯದವರು ಮೋಶೆ ಮತ್ತು ಆರೋನರ ಮೇಲೆ ಗೊಣಗುಟ್ಟ ತೊಡಗಿದರು. ‘ಸರ್ವೇಶ್ವರನ ಜನರನ್ನು ಸಾಯಸಿದವರು ನೀವೇ’ ಎಂದು ಹೇಳುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಮರುದಿನ ಇಸ್ರಾಯೇಲರ ಸರ್ವಸಮೂಹದವರು ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟಿ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಮರುದಿನ ಇಸ್ರಾಯೇಲ್ಯರ ಸರ್ವಸಮೂಹದವರು ಮೋಶೆ ಆರೋನರ ಮೇಲೆ ಗುಣುಗುಟ್ಟುತ್ತಾ - ನೀವೇ ಯೆಹೋವನ ಜನರನ್ನು ಸಾಯಿಸಿದಿರಿ ಎಂದು ಹೇಳುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಮರುದಿನ ಇಸ್ರೇಲರೆಲ್ಲರೂ ಮೋಶೆ ಆರೋನರ ವಿರುದ್ಧ ಗುಣುಗುಟ್ಟುತ್ತಾ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆದರೆ ಮರುದಿನದಲ್ಲಿ ಇಸ್ರಾಯೇಲರ ಸಮೂಹವೆಲ್ಲಾ ಮೋಶೆಗೆ ವಿರೋಧವಾಗಿಯೂ ಆರೋನನಿಗೆ ವಿರೋಧವಾಗಿಯೂ ಗೊಣಗುಟ್ಟುತ್ತಾ, “ನೀವು ಯೆಹೋವ ದೇವರ ಜನರನ್ನು ಕೊಂದುಹಾಕಿದ್ದೀರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:41
18 ತಿಳಿವುಗಳ ಹೋಲಿಕೆ  

ಎಂತಲೇ ‘ಸಂಹರಿಸುವೆ’ ಎನ್ನಲು ಪ್ರಭು ಅವರನು I ಆಪ್ತ ಮೋಶೆಯು ಮಧ್ಯಸ್ಥನಾಗಿ ಬಂದನು I ಸಂಹರಿಸದಂತೆ ಶಮನಗೊಳಿಸಿದನಾ ಕೋಪವನು II


ಇಸ್ರಯೇಲರೆಲ್ಲರು ಮೋಶೆ ಮತ್ತು ಆರೋನರ ವಿರುದ್ಧ ಗುಣಗುಟ್ಟಿದರು. “ಈಜಿಪ್ಟಿನಲ್ಲೇ ನಾವು ಸತ್ತಿದ್ದರೆ ಚೆನ್ನಾಗಿತ್ತು.


“ಇಸ್ರಯೇಲಿನ ಮಹಾಜನರೇ, ಬೇಗ ಬನ್ನಿ; ನಮ್ಮ ಜನಾಂಗಕ್ಕೂ ನಮ್ಮ ಧರ್ಮಶಾಸ್ತ್ರಕ್ಕೂ ಈ ಮಹಾದೇವಾಲಯಕ್ಕೂ ವಿರುದ್ಧವಾಗಿ ಬೋಧಿಸುವ ವ್ಯಕ್ತಿ ಇವನೇ; ಎಲ್ಲೆಡೆಯಲ್ಲೂ ಎಲ್ಲರಿಗೂ ಇವನು ನಮಗೆ ವಿರುದ್ಧವಾಗಿ ಬೋಧಿಸುತ್ತಾನೆ. ಅಷ್ಟು ಮಾತ್ರವಲ್ಲ. ಈ ಪವಿತ್ರಾಲಯದೊಳಕ್ಕೆ ಅನ್ಯಧರ್ಮೀಯರನ್ನು ಕರೆತಂದು ಇದನ್ನು ಭ್ರಷ್ಟಗೊಳಿಸಿದ್ದಾನೆ,” ಎಂದು ಕೂಗಿಕೊಂಡರು.


“ಆ ವ್ಯಕ್ತಿಯ ಹೆಸರಿನಲ್ಲಿ ಉಪದೇಶ ಮಾಡಕೂಡದು ಎಂದು ನಿಮಗೆ ಕಟ್ಟಪ್ಪಣೆ ಮಾಡಿದೆವು. ಆದರೂ ನೀವು ಮಾಡಿರುವುದೇನು? ನಿಮ್ಮ ಬೋಧನೆ ಜೆರುಸಲೇಮ್ ಆದ್ಯಂತ ಹಬ್ಬಿಹರಡಿದೆ. ಅಷ್ಟುಮಾತ್ರವಲ್ಲ, ಆ ವ್ಯಕ್ತಿಯ ಕೊಲೆಗೆ ನಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದಿರುವಿರಿ,” ಎಂದು ಆಪಾದಿಸಿದನು.


“ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು.


ತರುವಾಯ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಯೇಲಿನ ಅರಸ ಯಾರೊಬ್ಬಾಮನಿಗೆ ಹೀಗೆ ಹೇಳಿಕಳುಹಿಸಿದನು: “ಆಮೋಸನು ನಿನಗೆ ವಿರುದ್ಧವಾಗಿ ಇಸ್ರಯೇಲರಲ್ಲಿ ಒಳಸಂಚು ಹೂಡಿದ್ದಾನೆ. ಅವನ ಮಾತುಗಳನ್ನು ನಾಡು ಸಹಿಸಲಾರದು.


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ಆದರೆ ಮರೆತರು ಬೇಗನೆ ಆತನ ಸತ್ಕಾರ್ಯಗಳನು I ಕಾಯದೆ ಹೋದರು ಆತನಾ ಸಂಕಲ್ಪ ಸಾದನೆಯನು II


ಅವನನ್ನು ಕಂಡಕೂಡಲೆ, “ಇಸ್ರಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿರುವೆಯಾ?’ ಎಂದನು.


ಮಾನ-ಅವಮಾನ, ಕೀರ್ತಿ-ಅಪಕೀರ್ತಿ ಎರಡನ್ನೂ ಅನುಭವಿಸುತ್ತಿದ್ದೇವೆ. ಸತ್ಯವಾದಿಗಳು ನಾವಾದರೂ ಮಿಥ್ಯವಾದಿಗಳು ಎಂದೆನಿಸಿಕೊಂಡಿದ್ದೇವೆ.


ಬದಲಿಗೆ ಬಾಬಿಲೋನಿಯರು ನಮ್ಮನ್ನು ಕೊಲ್ಲಲಿ ಅಥವಾ ಸೆರೆಗೊಯ್ಯಲಿ ಎಂದು ನಮ್ಮನ್ನು ಅವರ ಕೈಗೆ ಸಿಕ್ಕಿಸುವುದಕ್ಕಾಗಿ ನೇರೀಯನ ಮಗ ಬಾರೂಕನೇ ನಿನ್ನನ್ನು ನಮ್ಮ ಮೇಲೆ ದೊಬ್ಬಿದ್ದಾನೆ,” ಎಂದರು.


ಈ ಪದಾಧಿಕಾರಿಗಳು ಅರಸನ ಬಳಿಗೆ ಬಂದು, “ಒಡೆಯಾ, ಈ ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇವನು ನಗರದಲ್ಲಿರುವ ಸೈನಿಕರಿಗೂ ಜನರೆಲ್ಲರಿಗೂ ಇಂಥ ಭವಿಷ್ಯವನ್ನು ನುಡಿಯುತ್ತಾ ಅವರು ಎದೆಗುಂದುವಂತೆ ಮಾಡುತ್ತಿದ್ದಾನೆ. ಅವನು ಹಾರೈಸುವುದು ಜನರ ಕ್ಷೇಮವನ್ನಲ್ಲ ಹಾನಿಯನ್ನೇ,” ಎಂದು ದೂರಿತ್ತರು.


ಮತ್ತೆ ಕೆಲವರು ಗೊಣಗುಟ್ಟಿದರು; ಸಂಹಾರಕ ದೂತನಿಂದ ಸಂಹರಿಸಲ್ಪಟ್ಟರು. ನೀವೂ ಅವರಂತೆ ಗೊಣಗುಟ್ಟುವವರಾಗಬೇಡಿ.


ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು