Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:46 - ಕನ್ನಡ ಸತ್ಯವೇದವು C.L. Bible (BSI)

46 ಮೋಶೆ, ಆರೋನನನ್ನು ಉದ್ದೇಶಿಸಿ, “ಸರ್ವೇಶ್ವರನಿಗೆ ಕೋಪವುಂಟಾಗಿದೆ: ಈ ಜನರೊಳಗೆ ಘೋರ ವ್ಯಾಧಿಯೊಂದು ಪ್ರಾರಂಭವಾಗಿಬಿಟ್ಟಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಬಲಿಪೀಠದಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮುದಾಯದವರ ಬಳಿಗೆ ಬೇಗ ಹೋಗು; ಅವರ ಪರವಾಗಿ ದೋಷಪರಿಹಾರವನ್ನು ಮಾಡು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಮೋಶೆಯು ಆರೋನನಿಗೆ, “ಯೆಹೋವನ ಕೋಪದಿಂದ ಈ ಜನರೊಳಗೆ ಘೋರವ್ಯಾಧಿಯು ಪ್ರಾರಂಭವಾಯಿತು. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪಹಾಕಿ, ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಯೆಹೋವನಿಗೆ ಕೋಪವುಂಟಾಗಿ ಈ ಜನರೊಳಗೆ ಘೋರವ್ಯಾಧಿ ಪ್ರಾರಂಭವಾಯಿತು; ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಮೋಶೆಯು ಆರೋನನಿಗೆ, “ಯೆಹೋವನಿಗೆ ಕೋಪವುಂಟಾಗಿ ಈ ಜನರೊಳಗೆ ಘೋರವ್ಯಾಧಿ ಪ್ರಾರಂಭವಾಗಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಕೆಯಿಂದ ತೆಗೆದ ಕೆಂಡಗಳನ್ನು ಇಟ್ಟು ಧೂಪಹಾಕಿ ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಮೋಶೆಯು ಆರೋನನಿಗೆ, “ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು, ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು, ಧೂಪ ಹಾಕಿ, ಶೀಘ್ರವಾಗಿ ಜನರೊಳಗೆ ಹೋಗಿ, ಅವರಿಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಕೋಪವು ಹೊರಟು, ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:46
23 ತಿಳಿವುಗಳ ಹೋಲಿಕೆ  

ಇಸ್ರಯೇಲರ ಪರವಾಗಿ ದೇವದರ್ಶನದ ಗುಡಾರದ ಪರಿಚರ್ಯವನ್ನು ನಡೆಸುವುದಕ್ಕೂ ಪಾಪಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರಿಸಿಕೊಂಡು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಆದುದರಿಂದ ಇಸ್ರಯೇಲರು ದೇವಸ್ಥಾನದ ಹತ್ತಿರಕ್ಕೆ ಬಂದಾಗ ಅವರಿಗೆ ಯಾವ ಅಪಾಯವು ಸಂಭವಿಸುವುದಿಲ್ಲ.”


ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರಿಗೆ, “ನೀವು ಸಂತಾಪ ಸೂಚಿಸಲು ಕೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವು ಕೂಡ ಸಾಯುವಿರಿ; ಅದು ಮಾತ್ರವಲ್ಲ, ಇಡೀ ಜನಸಮೂಹದ ಮೇಲೆ ಸರ್ವೇಶ್ವರ ಸಿಟ್ಟುಗೊಳ್ಳುವರು. ಸರ್ವೇಶ್ವರನಿಂದ ಹೊರಟ ಆ ಬೆಂಕಿಯ ನಿಮಿತ್ತ ನಿಮ್ಮ ಸೋದರರಾದ ಇಸ್ರಯೇಲ್ ಸಮಾಜದವರೇ ದುಃಖಿಸಲಿ.


ಅವರಕ್ರಮ ನಡತೆ ಪ್ರಭುವನು ಕೆಣಕಿತು I ಭೀಕರ ವ್ಯಾಧಿ ಅವರ ಮಧ್ಯೆ ಹಬ್ಬಿತು II


ಚೆರೂಯಳ ಮಗ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ, ಇದರ ನಿಮಿತ್ತ ಇಸ್ರಯೇಲರ ಮೇಲೆ ದೇವರ ಕೋಪವುಂಟಾಗಿ, ಅದನ್ನು ಪೂರ್ತಿಗೊಳಿಸಲಿಲ್ಲ. ಈ ಜನಗಣತಿ ದಾವೀದನ ರಾಜ್ಯದ ಇತಿಹಾಸದಲ್ಲಿ ಲಿಖಿತವಾಗಲಿಲ್ಲ.


ದೇವಸ್ಥಾನದ ವ್ಯವಹಾರವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು. ಆಗ ದೇವರ ಕೋಪ ಮತ್ತೆ ಇಸ್ರಯೇಲರ ಮೇಲೆ ಬಾರದು.


ಅವರು ಆ ಮಾಂಸವನ್ನು ಕಚ್ಚಿ ಅಗಿದು ತಿಂದು ಮುಗಿಸುವುದರೊಳಗೆ ಸರ್ವೇಶ್ವರನ ಕೋಪ ಅವರ ವಿರುದ್ಧ ಉದ್ರೇಕಗೊಂಡಿತು. ಬಹಳಷ್ಟು ಜನ ಘೋರವ್ಯಾಧಿಗೆ ತುತ್ತಾಗಿ ಸತ್ತರು.


ಸಮರ್ಪಕವಾಗಲಿ ನನ್ನ ಪ್ರಾರ್ಥನೆ ಧೂಪಾರತಿಯಂತೆ I ಕೈಮುಗಿದು ಮಾಡುವ ವಂದನೆ ಸಂಧ್ಯಾಬಲಿಯರ್ಪಣೆಯಂತೆ II


ಸರ್ವೇಶ್ವರನ ಸನ್ನಿಧಿಯಿಂದ ಅಗ್ನಿ ಹೊರಟು ಬಲಿಪೀಠದ ಮೇಲಿದ್ದ ದಹನಬಲಿದ್ರವ್ಯವನ್ನೂ, ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರು ಅದನ್ನು ಕಂಡು ಜಯ ಜಯಕಾರ ಮಾಡಿದರು; ಅಡ್ಡಬಿದ್ದು ನಮಸ್ಕರಿಸಿದರು.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


“ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲೂ ನೀವು ಸರ್ವೇಶ್ವರನಿಗೆ ಕೋಪವನ್ನು ಹುಟ್ಟಿಸಿದಿರಿ.


ಆ ಒಪ್ಪಂದವೇನೆಂದರೆ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ವಾಗ್ದಾನ ಮಾಡುತ್ತೇನೆ. ಅವನು ತನ್ನ ದೇವರ ಗೌರವದ ಬಗ್ಗೆ ಅಭಿಮಾನ ವ್ಯಕ್ತಪಡಿಸಿದ್ದಾನೆ; ಇಸ್ರಯೇಲರ ದೋಷಕ್ಕಾಗಿ ಪ್ರಾಯಶ್ಚಿತ್ತ ಮಾಡಿದ್ದಾನೆ. ಆದ್ದರಿಂದ ಅವನಿಗೇ ಈ ವಾಗ್ದಾನ ಮಾಡಿದ್ದೇನೆ.”


ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗೆ ಮಾಡಿದರೆ ನನ್ನ ಕೋಪ ಇಸ್ರಯೇಲರ ಮೇಲೆ ಎರಗಲು ಆಸ್ಪದವಿರದು. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”


ಆ ಇಸ್ರಯೇಲ ವ್ಯಕ್ತಿಯ ಹಿಂದೆಯೇ ಹೋಗಿ, ಅವನ ಒಳಕೋಣೆಯನ್ನು ಹೊಕ್ಕು ಅವರಿಬ್ಬರನ್ನು, ಅಂದರೆ ಆ ಇಸ್ರಯೇಲನನ್ನು ಮತ್ತು ಆ ಮಹಿಳೆಯನ್ನು ಒಂದೇ ಬಾರಿಗೆ ಹೊಟ್ಟೆಯಲ್ಲಿ ತಿವಿದುಕೊಂದನು. ಹೀಗೆ ಇಸ್ರಯೇಲರಿಗೆ ಒದಗಿದ್ದ ಜಾಡ್ಯ ನಿಂತುಹೋಯಿತು.


ಸಾಗುತಿದೆ ವ್ಯಾಧಿ ಆತನ ಮುಂದೆ ಬರುತಿದೆ ಮೃತ್ಯು ಆತನ ಹಿಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು