Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:48 - ಕನ್ನಡ ಸತ್ಯವೇದವು C.L. Bible (BSI)

48 ಸತ್ತವರಿಗೂ ಹಾಗೂ ಬದುಕುವವರಿಗೂ ನಡುವೆ ಅವನು ನಿಂತನು. ಆ ವಿಪತ್ತು ಶಮನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅವನು ಸತ್ತವರಿಗೂ, ಬದುಕುವವರಿಗೂ ಮಧ್ಯದಲ್ಲಿ ನಿಂತುಕೊಂಡುದರಿಂದ ಆ ವ್ಯಾಧಿಯು ಶಮನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಅವನು ಸತ್ತವರಿಗೂ ಬದುಕುವವರಿಗೂ ನಡುವೆ ನಿಂತಿರುವಾಗಲೇ ಆ ವಿಪತ್ತು ಶಮನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಅವನು ಸತ್ತವರಿಗೂ ಬದುಕಿರುವವರಿಗೂ ನಡುವೆ ನಿಂತುಕೊಂಡನು. ಆಗ ಕಾಯಿಲೆ ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡದ್ದರಿಂದ ವ್ಯಾಧಿಯು ಶಮನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:48
14 ತಿಳಿವುಗಳ ಹೋಲಿಕೆ  

ಅಲ್ಲಿ ಸರ್ವೇಶ್ವರನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಅವರಿಗೆ ದಹನಬಲಿಗಳನ್ನು ಹಾಗು ಶಾಂತಿಸಮಾಧಾನದ ಬಲಿಗಳನ್ನು ಅರ್ಪಿಸಿದನು. ಹೀಗೆ ನಾಡಿನ ಮೇಲಿದ್ದ ಸರ್ವೇಶ್ವರನ ಕೋಪ ಶಮನವಾಯಿತು. ಇಸ್ರಯೇಲರಲ್ಲಿದ್ದ ಆ ಸಂಹಾರಕವ್ಯಾಧಿ ನಿಂತುಹೋಯಿತು.


ಆದ್ದರಿಂದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಕೊಳ್ಳಿರಿ. ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗೂ ಫಲದಾಯಕವಾದುದು.


ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.


ಅನಂತರ ದೇವಾಲಯದಲ್ಲಿ ಯೇಸು ಆ ಮನುಷ್ಯನನ್ನು ಕಂಡು, “ನೋಡು, ನೀನು ಗುಣಹೊಂದಿರುವೆ; ಇನ್ನುಮೇಲೆ ಪಾಪಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ನಿನ್ನ ಗತಿ ಇನ್ನಷ್ಟು ಚಿಂತಾಜನಕವಾದೀತು,” ಎಂದರು.


ಫಿನೆಹಾಸನೆದ್ದು ದಂಡಿಸಿದೊಡನೆ I ನಿಂತುಹೋಯಿತು ಆ ಘೋರ ಬೇನೆ II


ಸರ್ವೇಶ್ವರನ ಬಳಿಯಿಂದ ಬೆಂಕಿ ಹೊರಟು ಧೂಪಾರತಿಯನ್ನು ಅರ್ಪಿಸುತ್ತಿದ್ದ ಆ 250 ಮಂದಿಯನ್ನು ಭಸ್ಮಮಾಡಿತು.


ಅದರಂತೆ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಬಂದು, ಅವುಗಳಲ್ಲಿ ಕೆಂಡವನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆ ದೇವದರ್ಶನದ ಗುಡಾರದ ಬಾಗಿಲಲ್ಲಿ ನಿಂತುಕೊಂಡರು.


ಮೋಶೆ ಹೇಳಿದಂತೆಯೇ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮುದಾಯದವರ ಬಳಿಗೆ ಓಡಿಬಂದಾಗ ಆ ಘೋರವ್ಯಾಧಿ ಜನರಲ್ಲಿ ಹರಡಿಕೊಳ್ಳುತ್ತಲಿತ್ತು. ಅವನು ಧೂಪಹಾಕಿ ಆ ಜನರ ಪರವಾಗಿ ದೋಷಪರಿಹಾರ ಮಾಡಿದನು;


ಕೋರಹನನ್ನು ಸೇರಿಕೊಂಡು ಸತ್ತವರಲ್ಲದೆ ಆ ವಿಪತ್ತಿನಿಂದಲೇ ಸತ್ತವರ ಸಂಖ್ಯೆ 14,700:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು