Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:5 - ಕನ್ನಡ ಸತ್ಯವೇದವು C.L. Bible (BSI)

5 ಕೋರಹನಿಗೂ ಅವನ ಪಂಗಡದವರೆಲ್ಲರಿಗೂ ಹೀಗೆಂದನು: “ಸರ್ವೇಶ್ವರ ತನ್ನವರು ಯಾರೆಂದು ನಾಳೆ ತಿಳಿಸುವರು. ಯಾರನ್ನು ಪ್ರತಿಷ್ಠಿಸಿದ್ದಾರೋ ಹಾಗೂ ತಾವೇ ಆರಿಸಿಕೊಂಡಿದ್ದಾರೋ ಅವರನ್ನು ಮಾತ್ರ ತಮ್ಮ ಹತ್ತಿರಕ್ಕೆ ಬರಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮೋಶೆಯು ಕೋರಹನಿಗೂ ಮತ್ತು ಅವನ ಎಲ್ಲಾ ಸಮೂಹದವರಿಗೂ, “ತನ್ನವರು ಯಾರು ಎಂಬುದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ, ಯಾರನ್ನು ಆದುಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ತನ್ನವರು ಯಾರಾರೆಂಬದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ ಯಾರನ್ನು ತಾನೇ ಆದು ಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕೋರಹ ಮತ್ತು ಅವನ ಹಿಂಬಾಲಕರೆಲ್ಲರಿಗೆ ಹೇಳಿದ್ದೇನೆಂದರೆ: “ನಾಳೆ ಮುಂಜಾನೆ ಯಾವನು ತನ್ನವನೆಂದು ಮತ್ತು ಪವಿತ್ರನೆಂದು ಯೆಹೋವನು ತೋರಿಸುವನು. ತಾನು ಆರಿಸಿಕೊಂಡವನನ್ನು ಯೆಹೋವನು ತನ್ನ ಹತ್ತಿರ ಬರಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕೋರಹನಿಗೂ, ಅವನ ಸಮಸ್ತ ಸಮೂಹಕ್ಕೂ, “ಯೆಹೋವ ದೇವರು ತಮ್ಮ ಹತ್ತಿರ ಬರಮಾಡಿಕೊಳ್ಳುವ ಹಾಗೆ ತನ್ನವರು ಯಾರಾರೆಂಬುದನ್ನು ಮತ್ತು ಪರಿಶುದ್ಧ ಯಾರು ಎಂಬುದನ್ನು ನಾಳೆ ತೋರಿಸುವರು. ಅವರು ಯಾರನ್ನು ಆಯ್ದುಕೊಳ್ಳುವರೋ, ಅವರನ್ನು ಹತ್ತಿರ ಬರಮಾಡಿಕೊಳ್ಳುವರು. ನೀವು ಇದನ್ನು ಮಾಡಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:5
38 ತಿಳಿವುಗಳ ಹೋಲಿಕೆ  

ನಿನ್ನ ಆಸ್ಥಾನದಲಿ ನೆಲೆಸಲು ನೀನಾಯ್ದು ತಂದ ದೈವಭಕ್ತ ಧನ್ಯ I ನಮಗೆ ತರಲಿ ತೃಪ್ತಿ ನೀ ವಾಸಿಸುವ ಪವಿತ್ರಾಲಯದ ಸೌಭಾಗ್ಯ II


ಯಾರನ್ನು ನಾನು ಮೆಚ್ಚಿದ್ದೇನೋ ಅವನ ಕೋಲು ಚಿಗುರುವುದು. ನಿಮ್ಮಿಬ್ಬರ ವಿರುದ್ಧ ಇಸ್ರಯೇಲರು ಗೊಣಗುವುದು ಇನ್ನು ಕೇಳಿಸದಂತೆ ಹೀಗೆ ನಿಲ್ಲಿಸಿಬಿಡುತ್ತೇನೆ.”


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ಇವರೆಲ್ಲರೂ ಜೊತೆಗೂಡಿ ಮೋಶೆ ಮತ್ತು ಆರೋನರ ಬಳಿಗೆ ಬಂದು, “ನಿಮ್ಮ ವರ್ತನೆ ಅಧಿಕವಾಯಿತು. ಈ ಸಮುದಾಯದಲ್ಲಿ ಪ್ರತಿಯೊಬ್ಬನೂ ಪ್ರತಿಷ್ಠಿತನೇ. ಸರ್ವೇಶ್ವರ ಇವರೆಲ್ಲರಲ್ಲಿ ವಾಸವಾಗಿದ್ದಾರಲ್ಲವೇ? ಹೀಗಿರಲಾಗಿ ಸರ್ವೇಶ್ವರನ ಸಮುದಾಯದವರಿಗಿಂತ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇಕೆ?” ಎಂದು ವಾದಿಸಿದರು.


ತಮ್ಮ ಪಿತನಾದ ದೇವರ ಸೇವೆಗೆ ನಮ್ಮನ್ನು ದೈವೀರಾಜ್ಯದ ಯಾಜಕರನ್ನಾಗಿ ಮಾಡಿದವರೂ ಆದ ಯೇಸುಕ್ರಿಸ್ತರಿಗೆ ಮಹಿಮೆ ಮತ್ತು ಅಧಿಪತ್ಯ ಯುಗಯುಗಾಂತರಕ್ಕೂ ಸಲ್ಲಲಿ! ಆಮೆನ್.


ಆಗ ಅವನು, ‘ನಮ್ಮ ಪೂರ್ವಜರ ದೇವರು ತಮ್ಮ ಚಿತ್ತವನ್ನು ನೀನು ಅರಿಯಬೇಕೆಂದು, ತಮ್ಮ ಸತ್ಯಸ್ವರೂಪಿಯನ್ನು ನೀನು ನೋಡಬೇಕೆಂದು, ತಮ್ಮ ಕಂಠಸ್ವರವನ್ನು ನೀನು ಕೇಳಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ.


ಒಂದು ದಿನ ಅವರು ದೇವಾರಾಧನೆಯಲ್ಲೂ ಉಪವಾಸ ವ್ರತದಲ್ಲೂ ನಿರತರಾಗಿದ್ದಾಗ ಪವಿತ್ರಾತ್ಮ, “ಬಾರ್ನಬ ಮತ್ತು ಸೌಲರನ್ನು ನಾನು ಯಾವ ಕಾರ್ಯಕ್ಕಾಗಿ ಕರೆದಿದ್ದೇನೋ ಆ ಕಾರ್ಯಕ್ಕಾಗಿ ಮೀಸಲಾಗಿಡಿ,” ಎಂದರು.


ಅನಂತರ ಎಲ್ಲರೂ ಪ್ರಾರ್ಥನೆಮಾಡುತ್ತಾ, “ಸರ್ವೇಶ್ವರಾ, ನೀವು ಸರ್ವರ ಅಂತರಂಗಗಳನ್ನು ಅರಿತಿರುವಿರಿ. ಯೂದನು ತನ್ನ ಪ್ರೇಷಿತಸ್ಥಾನದಿಂದ ಭ್ರಷ್ಟನಾದ, ತನಗೆ ತಕ್ಕುದಾದ ಸ್ಥಳಕ್ಕೆ ತೆರಳಿದ. ಈ ಸೇವಾಸ್ಥಾನಕ್ಕೆ ಇವರಿಬ್ಬರಲ್ಲಿ ನೀವು ಆರಿಸಿದವನು ಯಾರೆಂದು ನಮಗೆ ತೋರಿಸಿರಿ,” ಎಂದರು.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.


ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆ ಬಲಿಪೀಠದ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಸರ್ವೇಶ್ವರನ ಸನ್ನಿಧಿಸೇವಕರಾಗಿದ್ದಾರೆ ಎಂದು ಹೇಳಿದನು.


ಕಳಿಸಿದ ತನ್ನ ದಾಸ ಮೋಶೆಯನು I ತಾನು ಆರಿಸಿಕೊಂಡ ಆರೋನನನು II


ಇಸ್ರಯೇಲರ ಕುಟುಂಬಗಳಲ್ಲೆಲ್ಲಾ ಅವರನ್ನೇ, ಯಾಜಕ ಸೇವಾವೃತ್ತಿಗೆ ಆರಿಸಿಕೊಂಡೆ: ಅಂದರೆ, ಬಲಿಯರ್ಪಿಸುವುದಕ್ಕೆ, ಧೂಪಾರತಿ ಎತ್ತುವುದಕ್ಕೆ ಹಾಗು ‘ಏಫೋದ’ನ್ನು ಧರಿಸಿಕೊಳ್ಳುವುದಕ್ಕೆ ಆರಿಸಿಕೊಂಡೆ; ಇಸ್ರಯೇಲರು ಅರ್ಪಿಸುವ ಬಲಿಶೇಷದ ಹಕ್ಕನ್ನೂ ಅವರಿಗೆ ಅನುಗ್ರಹಿಸಿದೆ.


:ನನಗೆ ಯಾಜಕಸೇವೆ ಮಾಡಲು ನೀನು ನಿನ್ನ ಅಣ್ಣ ಆರೋನನನ್ನು ಮತ್ತು ಅವನ ಮಕ್ಕಳಾದ ನಾದಾಬ್, ಅಬೀಹು, ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರನ್ನು ಇಸ್ರಯೇಲರ ಮಧ್ಯೆಯಿಂದ ನನ್ನ ಬಳಿಗೆ ಕರೆದುಕೊಂಡು ಬಾ.


ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.


ಹೀಗೆ ಹಿಂದೊಮ್ಮೆ ದೇವರಿಂದ ದೂರವಾಗಿದ್ದ ನಿಮ್ಮನ್ನು ಕ್ರಿಸ್ತಯೇಸು ಸುರಿಸಿದ ರಕ್ತದ ಮೂಲಕ ದೇವರ ಹತ್ತಿರಕ್ಕೆ ತರಲಾಯಿತು.


ಸುದೀರ್ಘ ಚರ್ಚೆಯಾದ ನಂತರ ಪೇತ್ರನು ಎದ್ದುನಿಂತು ಹೀಗೆಂದನು: “ಸಹೋದರರೇ, ಅನ್ಯಧರ್ಮೀಯರು ಶುಭಸಂದೇಶವನ್ನು ನನ್ನ ಬಾಯಿಯಿಂದ ಕೇಳಿ ವಿಶ್ವಾಸಿಸಲೆಂದು ದೇವರು ನಿಮ್ಮ ಮಧ್ಯೆಯಿಂದ ನನ್ನನ್ನು ಬಹುದಿನಗಳ ಹಿಂದೆಯೇ ಆರಿಸಿಕೊಂಡರು. ಇದು ನಿಮಗೆ ತಿಳಿದ ವಿಷಯ.


“ನೀನು ಆರೋನನನ್ನೂ ಅವನ ಗಂಡು ಮಕ್ಕಳನ್ನೂ ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು, ಅಭಿಷೇಕ ತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಹಾಗು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡು ಬಾ;


ಆರೋನನು ಮತ್ತು ಅವನ ಮಕ್ಕಳು ದೇವದರ್ಶನದ ಗುಡಾರದೊಳಗೆ ಬರುವಾಗ ಹಾಗು ಪವಿತ್ರಸ್ಥಾನದಲ್ಲಿ ಸೇವೆ ಮಾಡಲು ಬಲಿಪೀಠದ ಹತ್ತಿರ ಬರುವಾಗ ಇವುಗಳನ್ನು ಹಾಕಿಕೊಂಡಿರಲಿ. ಇಲ್ಲವಾದರೆ ಅವರು ಆ ಅಪರಾಧದ ನಿಮಿತ್ತ ಸಾಯುವರು. ಆರೋನನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮ.


ನೀವು ಮಾಡಬೇಕಾದುದಿಷ್ಟು - ಕೋರಹನು ಮತ್ತು ಅವನ ಪಂಗಡದವರಾದ ನೀವೆಲ್ಲರೂ ಧೂಪಾರತಿಗಳನ್ನು ತಂದು ಅವುಗಳಲ್ಲಿ ಕೆಂಡವನ್ನಿಟ್ಟು ನಾಳೆ ಸರ್ವೇಶ್ವರನ ಸನ್ನಿಧಿಯಲ್ಲಿ ಧೂಪ ಹಾಕಬೇಕು.


ಮಾರನೆಯ ದಿನ ಮೋಶೆ ಗುಡಾರದೊಳಗೆ ಹೋಗಿ ನೋಡಿದನು. ಏನಾಶ್ಚರ್ಯ! ಲೇವಿಕುಲದ ಪರವಾಗಿ ಆರೋನನು ಕೊಟ್ಟಿದ್ದ ಕೋಲು ಚಿಗುರಿತ್ತು; ಮೊಗ್ಗುಗಳು ಬಿಟ್ಟು, ಹೂವರಳಿ, ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗುವನು ಅವರ ವಂಶದವನೇ ಅವರನ್ನು ಆಳುವನು. ಅವನನ್ನು ನಾನು ನನ್ನ ಹತ್ತಿರ ಬರಗೊಡಿಸುವೆನು ಅವನು ನನ್ನ ಸನ್ನಿಧಾನಕ್ಕೆ ಸೇರುವನು. ಇಲ್ಲದಿದ್ದಲ್ಲಿ, ನನ್ನನು ಸಮೀಪಿಸಲು ಧೈರ್ಯಗೊಳ್ಳುವವನಾರು? - ಇದು ಸರ್ವೇಶ್ವರನಾದ ನನ್ನ ನುಡಿ.


“ಎದೋಮ್ಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇದೋ ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ಏರಿಬರುವೆನು. ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯುವಂಥ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?


ಬಾಬಿಲೋನಿಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇಗೋ, ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ನಾನು ಏರಿಬರುವೆನು. ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯಬಲ್ಲ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?


ಲೇವಿಯರೂ, ಚಾದೋಕನ ಸಂತಾನದವರೂ ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿ ಕೊಡು. ಇದು ಸರ್ವೇಶ್ವರನಾದ ದೇವರ ನುಡಿ.


ಇದು ನಾಡಿನಲ್ಲೇ ಪರಿಶುದ್ಧಭಾಗ; ಇದು ಪವಿತ್ರಾಲಯದ ಅರ್ಚಕರೂ ಸರ್ವೇಶ್ವರನ ಸನ್ನಿಧಿಸೇವಕರೂ ಆದ ಯಾಜಕರಿಗೆ ಸಲ್ಲತಕ್ಕದ್ದು; ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿ ಹಾಗು ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿ ಇರುವುದು.


ಈ ಬಗೆಯ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಉದ್ಯೋಗಕ್ಕೆ ಸೇರಿಸಿ ಪ್ರತಿಷ್ಠಿಸು. ಆಗ ಅವರು ನನಗೆ ಯಾಜಕರಾಗಿರುವರು.


ಪ್ರಭುವಿನಲ್ಲಿದೆ ಭರವಸೆ ಆರೋನನ ಕುಲಕೆ I ಆತನೇ ಸಹಾಯಕ, ರಕ್ಷಾಕವಚ ಅವರಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು