Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 17:10 - ಕನ್ನಡ ಸತ್ಯವೇದವು C.L. Bible (BSI)

10 ಅನಂತರ ಸರ್ವೇಶ್ವರ ಮೋಶೆಗೆ: “ಆರೋನನ ಕೋಲನ್ನು ಮರಳಿ ಮಂಜೂಷದ ಮುಂದೆ ಇಡಬೇಕು. ದಂಗೆಯೇಳುವವರಿಗೆ ದೃಷ್ಟಾಂತವಾಗಿ ಅದು ಅಲ್ಲೇ ಇರಲಿ. ಇನ್ನು ಮುಂದೆ ಈ ಜನರು ನನಗೆ ವಿರುದ್ಧ ಗೊಣಗಿ ನಾಶವಾಗಬಾರದು. ಅದಕ್ಕಾಗಿ ನೀನು ಹೀಗೆ ಮಾಡು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ತಿರುಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು. ಇವರು ಇನ್ನು ಮುಂದೆ ನನಗೆ ವಿರುದ್ಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ತರುವಾಯ ಯೆಹೋವನು ಮೋಶೆಗೆ - ಆರೋನನ ಕೋಲನ್ನು ತಿರಿಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು; ಇವರು ಇನ್ನು ಮುಂದೆ ನನಗೆ ವಿರೋಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡಬೇಕು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ಮತ್ತೆ ಒಡಂಬಡಿಕೆಯ ಪೆಟ್ಟಿಗೆಯ ಮುಂದಿಡು. ದಂಗೆಕೋರರಿಗೆ ಅದು ಎಚ್ಚರಿಕೆಯಾಗಿ ಅಲ್ಲೇ ಇರಬೇಕು, ಇವರು ಇನ್ನು ಮುಂದೆ ನನಗೆ ವಿರೋಧವಾಗಿ ಗುಣುಗುಟ್ಟಿ, ಮರಣಕ್ಕೆ ಗುರಿಯಾಗದಂತೆ ನೀನು ಹೀಗೆ ಮಾಡಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರು ಮೋಶೆಗೆ, “ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಇಟ್ಟುಕೊಳ್ಳುವುದಕ್ಕೆ ಒಡಂಬಡಿಕೆಯ ಮಂಜೂಷದ ಮುಂದೆ ತಿರುಗಿ ಇಡು. ಗೊಣಗುಟ್ಟುವುದನ್ನು ನೀನು ಸಂಪೂರ್ಣವಾಗಿ ತೆಗೆದುಬಿಡಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 17:10
23 ತಿಳಿವುಗಳ ಹೋಲಿಕೆ  

ಗರ್ಭಗುಡಿಯಲ್ಲಿ ಚಿನ್ನದ ಧೂಪಾರತಿ ಮತ್ತು ಚಿನ್ನದ ತಗಡನ್ನು ಸುತ್ತಲೂ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇದ್ದವು. ಈ ಮಂಜೂಷದಲ್ಲಿ ಮನ್ನವನ್ನು ಇಟ್ಟಿದ್ದ ಚಿನ್ನದ ಪಾತ್ರೆ ಆರೋನನ ಚಿಗುರಿದ ಕೋಲು ಮತ್ತು ಒಡಂಬಡಿಕೆಯ ಶಿಲಾಶಾಸನಗಳು ಇದ್ದವು.


ಹುರುಳಿಲ್ಲದ ಮಾತುಗಳನ್ನು ಆಡುವವರಿಗೆ ಮರುಳಾಗದಿರಿ. ಇಂಥ ಕೃತ್ಯಗಳನ್ನು ಮಾಡುವ ದುಷ್ಕರ್ಮಿಗಳ ಮೇಲೆ ದೇವರ ಕೋಪ ಎರಗುತ್ತದೆ.


ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.


ಸಿಕ್ಕಿಕೊಂಡಿರುವೆ ನರಭಕ್ಷಕ ಸಿಂಹಗಳ ನಡುವೆ I ಅವುಗಳ ಹಲ್ಲುಗಳೊ ಭರ್ಜಿಬಾಣಗಳಂತಿವೆ I ನಾಲಿಗೆಗಳು ಹದವಾದ ಕತ್ತಿ ಕಠಾರಿಗಳಂತಿವೆ II


ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮೂರ್ಖರೂ ಆದ ಕೆಲವು ಮಂದಿ, “ಇವರು ನಮ್ಮ ಸಂಗಡ ಬಾರದ್ದರಿಂದ ನಾವು ಬಿಡಿಸಿಕೊಂಡು ಬಂದ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವುದಿಲ್ಲ. ತಮ್ಮ ತಮ್ಮ ಮಡದಿ ಮಕ್ಕಳನ್ನು ಕರೆದುಕೊಂಡು ಹೋಗಿಬಿಡಲಿ,” ಎಂದರು.


ಏಲಿಯ ಮಕ್ಕಳು ಮಹಾದುಷ್ಟರು. ಅವರು ಸರ್ವೇಶ್ವರನನ್ನು ಲಕ್ಷಿಸುತ್ತಿರಲಿಲ್ಲ.


ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಸರ್ವೇಶ್ವರನ ಆಜ್ಞೆಯನ್ನು ಉಲ್ಲಂಘಿಸುತ್ತಾ ಬಂದಿದ್ದೀರಿ.


ಆರೋನನ ಸಂತತಿಯವರಲ್ಲದೆ ಇತರರು ಸರ್ವೇಶ್ವರನ ಸನ್ನಿಧಿಗೆ ಬಂದು ಧೂಪವನ್ನು ಅರ್ಪಿಸಬಾರದು; ಅರ್ಪಿಸಿದರೆ ಕೋರಹನಿಗೂ ಅವನ ಪಂಗಡದವರಿಗೂ ಆದ ಗತಿಗೆ ಗುರಿಯಾಗುವರು ಎಂದು ಇಸ್ರಯೇಲರಿಗೆ ಎಚ್ಚರಿಕೆ ನೀಡುವ ಚಿನ್ಹೆಯಾಯಿತು.


ಆ ಧೂಪಾರತಿಗಳು ಸರ್ವೇಶ್ವರನ ಸನ್ನಿಧಿಗೆ ತರಲಾದವುಗಳು. ಈ ಕಾರಣ ಪವಿತ್ರವಾದುವು. ಆದುದರಿಂದ ಅವುಗಳನ್ನು ತಗಡುಗಳಾಗಿ ತಟ್ಟಿ ಬಲಿಪೀಠಕ್ಕೆ ಮುಚ್ಚಳವನ್ನಾಗಿ ಮಾಡಿಸು. ಹೀಗೆ ಅವು ಇಸ್ರಯೇಲರಿಗೆ ನೆನಪು ಹುಟ್ಟಿಸುವ ಗುರುತುಗಳಾಗುವುವು,” ಎಂದು ಹೇಳಿದರು.


ಮೋಶೆ ಜನರಿಗೆ, “ಸರ್ವೇಶ್ವರ ಸ್ವಾಮಿ ಇದರ ವಿಷಯದಲ್ಲಿ ಕೊಟ್ಟ ಆಜ್ಞೆ ಇದು: ‘ನೀವು ಒಂದು ಹೋಮೆರ್ ತುಂಬ ಮನ್ನವನ್ನು ಇಟ್ಟುಕೊಳ್ಳಬೇಕು. ಏಕೆಂದರೆ ನಾನು ಈಜಿಪ್ಟಿನಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಈ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗೋಸ್ಕರ ಇದನ್ನು ಇಟ್ಟುಕೊಳ್ಳಬೇಕು,” ಎಂದು ಹೇಳಿದನು.


“ಇಸ್ರಯೇಲ್, ನೀನು ಗಿಬ್ಯದಲ್ಲಿದ್ದ ಕಾಲದಿಂದ ನನಗೆ ವಿರುದ್ಧ ಪಾಪಮಾಡುತ್ತಲೇ ಬಂದಿರುವೆ. ನಿನ್ನ ಜನರು ಪಾಪದಲ್ಲಿಯೇ ಮುಂದುವರಿಯುತ್ತಿದ್ದಾರೆ. ಗಿಬ್ಯದ ನಿವಾಸಿಗಳು ಯುದ್ಧಕ್ಕೆ ತುತ್ತಾಗಲಿದ್ದಾರೆ.


ಮತ್ತೆ ಕೆಲವರು ಗೊಣಗುಟ್ಟಿದರು; ಸಂಹಾರಕ ದೂತನಿಂದ ಸಂಹರಿಸಲ್ಪಟ್ಟರು. ನೀವೂ ಅವರಂತೆ ಗೊಣಗುಟ್ಟುವವರಾಗಬೇಡಿ.


ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿ ಆಜ್ಞಾಶಾಸನ ಮಂಜೂಷದ ಮುಂದೆ ಅದನ್ನು ಇಟ್ಟನು.


ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಮಂಜೂಷದ ಮುಂದೆ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇಡು.


ಮೋಶೆ ಆ ಕೋಲುಗಳನ್ನೆಲ್ಲ ಸವೇಶ್ವರನ ಸನ್ನಿಧಿಯಿಂದ ಇಸ್ರಯೇಲರೆಲ್ಲರ ಬಳಿಗೆ ತಂದು ತೋರಿಸಿದನು. ಅವರು ತಮ್ಮ ತಮ್ಮ ಕೋಲುಗಳನ್ನು ಪರೀಕ್ಷಿಸಿ ತೆಗೆದುಕೊಂಡರು.


ಸರ್ವೇಶ್ವರನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು.


ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಆ ಕೋಲನ್ನು ಅವರ ಸನ್ನಿಧಿಯಿಂದ ತೆಗೆದುಕೊಂಡನು.


“ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ಕೋಪ ಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿ. ಅದನ್ನು ಮರೆಯಬೇಡಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಸರ್ವೇಶ್ವರನ ಆಜ್ಞೆಗಳನ್ನು ಧಿಕ್ಕರಿಸುತ್ತಾ ಬಂದಿದ್ದೀರಿ.


“ಕೆಹಾತ್ಯರ ಗೋತ್ರಕುಟುಂಬಗಳವರು ಲೇವಿಯರೊಳಗೆ ಉಳಿಯದೆ ನಾಶವಾಗುವುದಕ್ಕೆ ಆಸ್ಪದಕೊಡಬೇಡಿ.


ಆಗ ಮೋಶೆ ಮತ್ತು ಆರೋನರು ಇಸ್ರಯೇಲರ ಸರ್ವಸಮೂಹದ ಮುಂದೆ ಅಡ್ಡಬಿದ್ದರು.


“ನೀವು ಈ ಸಮುದಾಯದವರಿಂದ ಪ್ರತ್ಯೇಕವಾಗಿ ನಿಲ್ಲಿ; ನಾನು ಇವರನ್ನು ಒಂದು ಕ್ಷಣಮಾತ್ರದಲ್ಲಿ ಭಸ್ಮ ಮಾಡಿಬಿಡುತ್ತೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು