Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 17:2 - ಕನ್ನಡ ಸತ್ಯವೇದವು C.L. Bible (BSI)

2 “ಇಸ್ರಯೇಲರ ಸಂಗಡ ನೀನು ಮಾತಾಡಿ ಒಂದೊಂದು ಕುಲದ ಅಧಿಪತಿಯಿಂದ ಒಂದೊಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ತೆಗೆದುಕೋ. ಅವನವನ ಕೋಲಿನ ಮೇಲೆ ಆಯಾ ಅಧಿಪತಿಯ ಹೆಸರನ್ನು ಬರೆಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರ ಸಂಗಡ ಮಾತನಾಡಿ, ‘ಅವರ ಪೂರ್ವಿಕರ ಒಂದೊಂದು ಕುಲದ ಅಧಿಪತಿಯಿಂದ ಗೋತ್ರಗಳ ಪ್ರಕಾರವಾಗಿ ಒಂದೊಂದು ಕೋಲುಗಳನ್ನು ತೆಗೆದುಕೊಳ್ಳಬೇಕು. ಗೋತ್ರಗಳ ಪ್ರಕಾರವಾಗಿ ಒಬ್ಬೊಬ್ಬ ಪ್ರಧಾನರ ಹೆಸರಿನಲ್ಲಿ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಅವರ ಹೆಸರನ್ನು ಬರೆಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಹೀಗೆ ಮಾಡಬೇಕು. ಒಂದೊಂದು ಕುಲದ ಅಧಿಪತಿಯಿಂದ ಒಂದೊಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಆಯಾ ಕುಲಾಧಿಪತಿಯ ಹೆಸರನ್ನು ಬರೆಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರ ಸಂಗಡ ಮಾತಾಡಿ ಹೀಗೆ ಮಾಡಬೇಕು: ಅವರ ಕುಲಗಳ ಪ್ರತಿಯೊಬ್ಬ ಪ್ರಧಾನನಿಂದ ಒಂದೊಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಆಯಾ ಕುಲಪ್ರಧಾನನ ಹೆಸರನ್ನು ಬರೆಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಗೋತ್ರಗಳ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ ಕೋಲುಗಳನ್ನು ತೆಗೆದುಕೊಂಡು, ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ನೀನು ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 17:2
18 ತಿಳಿವುಗಳ ಹೋಲಿಕೆ  

ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಸಂಭವಿಸಿದೆ ಪರಿಶೋಧನೆ ಏನು ಗತಿ, ರಾಜದಂಡವೇ ನಾಶವಾದರೆ!


ಆಹಾ ಖಡ್ಗ, ಖಡ್ಗ, ಸಾಣೆ ಹಿಡಿದ ಖಡ್ಗ, ಮಸೆದ ಖಡ್ಗ! ಸಾಣೆ ಹಿಡಿದಿದೆ ಹತಿಸುವಂತೆ, ಮಸೆದಿದೆ ಮಿಂಚುವಂತೆ. ಸಂಭ್ರಮಿಸಲಾದೀತೆ ‘ನಮ್ಮ ಕುಮಾರನ ರಾಜದಂಡ’ ಎಂದು? ಮಿಕ್ಕ ದಂಡಗಳನ್ನೆಲ್ಲ ಧಿಕ್ಕರಿಸುವಂಥ ದಂಡವೆಂದುಕೊಂಡು?


ಅದರ ಕಾಂಡದಿಂದ ಹೊರಟ ಬೆಂಕಿಯು ದಹಿಸಿಬಿಟ್ಟಿದೆ ಅದರ ಫಲಗಳನು ಎಂದೇ ಇನ್ನು ಉಳಿದಿಲ್ಲ ಅದರೊಳು ರಾಜದಂಡಕೆ ಯೋಗ್ಯವಾದ ಗಟ್ಟಿಕೊಂಬೆಯು.” ಇದೊಂದು ಶೋಕ ಗೀತೆ; ರೂಢಿಯಲ್ಲಿ ಇರುವ ಜಾನಪದ ಗೀತೆ.


ಸಜ್ಜನರ ನಾಡಿನಲಿ ಉಳಿಯದು ದುರ್ಜನರ ದಬ್ಬಾಳಿಕೆ I ಉಳಿಯಿತಾದರೆ ಸಜ್ಜನರೂ ಕೈಹಚ್ಚಬಹುದು ಅಕ್ರಮಕೆ II


ಸಿಯೋನಿನ ಹೊರಗು ವಿಸ್ತರಿಸುವನು ಪ್ರಭು ನಿನ್ನ ರಾಜ್ಯದಾಳಿಕೆಯನು I ನಿನ್ನ ವೈರಿ ವಿರೋಧಿಗಳ ನಟ್ಟನಡುವೆಯೆ ದೊರೆತನ ಮಾಡುವೆ ನೀನು II


ಈ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು. ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವೆ,” ಎಂದರು.


ಅದಕ್ಕೆ ಸರ್ವೇಶ್ವರ ಅವನನ್ನು, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದರು, ಅವನು, “ಇದು ಕೋಲು” ಎಂದನು.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಸರ್ವೇಶ್ವರ ಮೋಶೆಗೆ ಹೀಗೆಂದರು:


ಲೇವಿಯ ಕುಲಕ್ಕೂ ಒಂದು ಕೋಲು ಇರುವುದರಿಂದ ಅದರ ಮೇಲೆ ಆರೋನನ ಹೆಸರನ್ನು ಬರೆಯಿಸು.


ಅದರಿಂದ ದೇವದರ್ಶನದ ಗುಡಾರ, ಆಜ್ಞಾಶಾಸನಗಳ ಮಂಜೂಷ, ಮೇಜು, ಮೇಜಿನ ಉಪಕರಣಗಳು,


ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ಮೇಲೆ ಅದನ್ನೂ ಅದರ ಸಾಮಾನುಗಳನ್ನೂ ಹಾಗೂ ಬಲಿಪೀಠವನ್ನು ಅದರ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.


ಆ ಪಟ್ಟಿಯಲ್ಲಿ ಗೋತ್ರಗಳಿಗನುಸಾರ ಹಾಗು ಆಯಾ ಉದ್ಯೋಗ ವರ್ಗಗಳಿಗನುಸಾರ ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಯಾಜಕರು, ಲೇವಿಯರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು