Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 17:8 - ಕನ್ನಡ ಸತ್ಯವೇದವು C.L. Bible (BSI)

8 ಮಾರನೆಯ ದಿನ ಮೋಶೆ ಗುಡಾರದೊಳಗೆ ಹೋಗಿ ನೋಡಿದನು. ಏನಾಶ್ಚರ್ಯ! ಲೇವಿಕುಲದ ಪರವಾಗಿ ಆರೋನನು ಕೊಟ್ಟಿದ್ದ ಕೋಲು ಚಿಗುರಿತ್ತು; ಮೊಗ್ಗುಗಳು ಬಿಟ್ಟು, ಹೂವರಳಿ, ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮರುದಿನ ಮೋಶೆಯು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಹೋಗಿ ನೋಡಲಾಗಿ ಅಗೋ, ಲೇವಿ ಕುಲಕ್ಕೋಸ್ಕರ ಆರೋನನಿಗೆ ಕೊಟ್ಟಿದ್ದ ಕೋಲು ಚಿಗುರಿ, ಮೊಗ್ಗುಬಿಟ್ಟು ಹೂವಾಗಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮರುದಿನ ಮೋಶೆ ಗುಡಾರದಲ್ಲಿ ಹೋಗಿ ನೋಡಲಾಗಿ ಆಹಾ, ಲೇವಿಕುಲಕ್ಕೋಸ್ಕರ ಆರೋನನು ಕೊಟ್ಟಿದ್ದ ಕೋಲು ಚಿಗುರಿ ಮೊಗ್ಗೆ ಬಿಟ್ಟು ಹೂವರಳಿ ಬಾದಾವಿು ಹಣ್ಣುಗಳನ್ನು ಫಲಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮರುದಿನ ಮೋಶೆ ಗುಡಾರದೊಳಗೆ ಹೋಗಿ ನೋಡಲಾಗಿ ಲೇವಿಕುಲದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮರುದಿವಸದಲ್ಲಿ, ಮೋಶೆಯು ಸಾಕ್ಷಿ ಗುಡಾರದೊಳಗೆ ಪ್ರವೇಶಿಸುವಾಗ, ಲೇವಿಯ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ, ಮೊಗ್ಗು ಬಿಟ್ಟು, ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 17:8
13 ತಿಳಿವುಗಳ ಹೋಲಿಕೆ  

ಆಶ್ರಯ ಪಡೆವುವು ಅದರ ರೆಂಬೆಗಳ ನೆರಳಲಿ, ಆಗ ತಿಳಿವುವು ವನದ ವೃಕ್ಷಗಳು: ಎತ್ತರವಾದ ಮರಗಳ ತಗ್ಗಿಸುವವನು ತಗ್ಗಾದುದನು ಎತ್ತರಪಡಿಸುವವನು ಹಸುರಾದುದನು ಒಣಗಿಸುವವನು ಒಣಗಿದುದನು ಚಿಗುರಿಸುವವನು ಸರ್ವೇಶ್ವರ ನಾನೇ ಎಂದು ಇದ ನುಡಿದವ ನಾನು, ನುಡಿದುದನು ನಡೆಸುವವ ನಾನು.”


ಯಾರನ್ನು ನಾನು ಮೆಚ್ಚಿದ್ದೇನೋ ಅವನ ಕೋಲು ಚಿಗುರುವುದು. ನಿಮ್ಮಿಬ್ಬರ ವಿರುದ್ಧ ಇಸ್ರಯೇಲರು ಗೊಣಗುವುದು ಇನ್ನು ಕೇಳಿಸದಂತೆ ಹೀಗೆ ನಿಲ್ಲಿಸಿಬಿಡುತ್ತೇನೆ.”


ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆದಿರುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು.


ಅದರ ಕಾಂಡದಿಂದ ಹೊರಟ ಬೆಂಕಿಯು ದಹಿಸಿಬಿಟ್ಟಿದೆ ಅದರ ಫಲಗಳನು ಎಂದೇ ಇನ್ನು ಉಳಿದಿಲ್ಲ ಅದರೊಳು ರಾಜದಂಡಕೆ ಯೋಗ್ಯವಾದ ಗಟ್ಟಿಕೊಂಬೆಯು.” ಇದೊಂದು ಶೋಕ ಗೀತೆ; ರೂಢಿಯಲ್ಲಿ ಇರುವ ಜಾನಪದ ಗೀತೆ.


ಸಿಯೋನಿನ ಹೊರಗು ವಿಸ್ತರಿಸುವನು ಪ್ರಭು ನಿನ್ನ ರಾಜ್ಯದಾಳಿಕೆಯನು I ನಿನ್ನ ವೈರಿ ವಿರೋಧಿಗಳ ನಟ್ಟನಡುವೆಯೆ ದೊರೆತನ ಮಾಡುವೆ ನೀನು II


ಅದಕ್ಕೆ ಮೂರು ಕವಲುಗಳಿದ್ದವು. ಅದು ಚಿಗುರುತ್ತಲೇ ಹೂಗಳನ್ನು ಬಿಟ್ಟಿತು. ಆ ಹೂಗಳು ಗೊಂಚಲುಗಳಾಗಿ ಹಣ್ಣಾದವು.


ಗರ್ಭಗುಡಿಯಲ್ಲಿ ಚಿನ್ನದ ಧೂಪಾರತಿ ಮತ್ತು ಚಿನ್ನದ ತಗಡನ್ನು ಸುತ್ತಲೂ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇದ್ದವು. ಈ ಮಂಜೂಷದಲ್ಲಿ ಮನ್ನವನ್ನು ಇಟ್ಟಿದ್ದ ಚಿನ್ನದ ಪಾತ್ರೆ ಆರೋನನ ಚಿಗುರಿದ ಕೋಲು ಮತ್ತು ಒಡಂಬಡಿಕೆಯ ಶಿಲಾಶಾಸನಗಳು ಇದ್ದವು.


ಕಿತ್ತು ಬಿಸಾಡಿದರು ಕ್ರೋಧಿಗಳು ಆ ಲತೆಯನು ಬಾಡಿಸಿತು ಅದರ ಫಲವನು ಮೂಡಣಗಾಳಿಯು ಮುದುರಿ ಒಣಗಿಹೋದುವು ಅದರ ಗಟ್ಟಿಕೊಂಬೆಗಳು.


ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನಂತಿಹನು. ಕುಳಿತು ಸಂತೋಷಗೊಂಡೆ ನಾನದರ ನೆರಳಿನೊಳು ಸಿಹಿ ನನ್ನ ನಾಲಿಗೆಗೆ ಅದರ ಫಲವು.


ಕೋರಹನಿಗೂ ಅವನ ಪಂಗಡದವರೆಲ್ಲರಿಗೂ ಹೀಗೆಂದನು: “ಸರ್ವೇಶ್ವರ ತನ್ನವರು ಯಾರೆಂದು ನಾಳೆ ತಿಳಿಸುವರು. ಯಾರನ್ನು ಪ್ರತಿಷ್ಠಿಸಿದ್ದಾರೋ ಹಾಗೂ ತಾವೇ ಆರಿಸಿಕೊಂಡಿದ್ದಾರೋ ಅವರನ್ನು ಮಾತ್ರ ತಮ್ಮ ಹತ್ತಿರಕ್ಕೆ ಬರಗೊಳಿಸುವರು.


ಮೋಶೆ ಆ ಕೋಲುಗಳನ್ನೆಲ್ಲ ಸವೇಶ್ವರನ ಸನ್ನಿಧಿಯಿಂದ ಇಸ್ರಯೇಲರೆಲ್ಲರ ಬಳಿಗೆ ತಂದು ತೋರಿಸಿದನು. ಅವರು ತಮ್ಮ ತಮ್ಮ ಕೋಲುಗಳನ್ನು ಪರೀಕ್ಷಿಸಿ ತೆಗೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು