Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಆರೋನನಿಗೆ ಹೀಗೆಂದರು: “ದೇವದರ್ಶನದ ಗುಡಾರದ ವಿಷಯದಲ್ಲಿ ಏನಾದರು ಅಕ್ರಮ ನಡೆದರೆ ನೀನು, ನಿನ್ನ ಸಂತತಿಯವರು ಮತ್ತು ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕ ಸೇವೆಯ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನು ಮತ್ತು ನಿನ್ನ ಸಂತತಿಯವರು ಮಾತ್ರ ಆ ದೋಷದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಯೆಹೋವನು ಆರೋನನಿಗೆ, “ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ, ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರು ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಯೆಹೋವನು ಆರೋನನಿಗೆ - ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ ನಿನ್ನ ಸಂತತಿಯವರೂ ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ ನಿನ್ನ ಸಂತತಿಯವರೂ ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗ ಯೆಹೋವನು ಆರೋನನಿಗೆ, “ಪವಿತ್ರ ವಸ್ತುಗಳ ವಿಷಯದಲ್ಲಿ ಏನಾದರೂ ಹೊಲಸುತನ ನಡೆದರೆ, ನೀನೂ ನಿನ್ನ ಗಂಡುಮಕ್ಕಳೂ ನಿನ್ನ ಕುಲದವರೆಲ್ಲರೂ ಅದರ ಅಪರಾಧದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಏನಾದರೂ ಹೊಲಸುತನ ನಡೆದರೆ, ನೀನು ಮತ್ತು ನಿನ್ನ ಗಂಡುಮಕ್ಕಳು ಮಾತ್ರ ಅದರ ಅಪರಾಧದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಆರೋನನಿಗೆ, “ನೀನೂ, ನಿನ್ನ ಪುತ್ರರೂ, ನಿನ್ನ ಪಿತೃಗಳ ಮನೆಯವರೂ ಪರಿಶುದ್ಧ ಸ್ಥಳಕ್ಕೆ ವಿರೋಧವಾಗಿ ನಡೆಯುವ ಕಾರ್ಯಗಳ ಜವಾಬ್ದಾರಿ ವಹಿಸಬೇಕು. ಯಾಜಕತ್ವಕ್ಕೆ ವಿರೋಧವಾಗಿ ನಡೆಯುವ ಅಕ್ರಮಗಳಿಗೆ ನೀನು ಮತ್ತು ನಿನ್ನ ಪುತ್ರರು ಮಾತ್ರ ಹೊಣೆಯಾಗಿರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:1
22 ತಿಳಿವುಗಳ ಹೋಲಿಕೆ  

ಇಸ್ರಯೇಲರನ್ನು ಪರಿಶುದ್ಧಗೊಳಿಸುವ ಪವಿತ್ರವಸ್ತುಗಳಲ್ಲಿ ಹಾಗು ಅವರು ಕಾಣಿಕೆಯಾಗಿ ಸಮರ್ಪಿಸುವ ಸಮಸ್ತವಸ್ತುಗಳಲ್ಲಿ ದೋಷವೇನಾದರು ಇದ್ದರೆ ಆರೋನನು ಆ ಪಟ್ಟಿಯನ್ನು ತಲೆಯ ಮೇಲೆ ಧರಿಸಿ ಆ ದೋಷವನ್ನು ತಾನೇ ವಹಿಸಿಕೊಳ್ಳುತ್ತಾನೆ. ಆದ್ದರಿಂದ ಅವರು ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಅಂಗೀಕೃತರಾಗುತ್ತಾರೆ.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ. ಅವರ ಆಜ್ಞೆಗಳನ್ನು ಪಾಲಿಸಿರಿ. ಅವರು ನಿಮ್ಮ ಆತ್ಮಗಳ ಪಾಲಕರು; ದೇವರಿಗೆ ಲೆಕ್ಕ ಒಪ್ಪಿಸಬೇಕಾದವರು. ಈ ಸೇವೆಯನ್ನು ಅವರು ಸಂತೋಷದಿಂದ ಮಾಡುವಂತೆ ನೀವು ನಡೆದುಕೊಳ್ಳಿ. ಅವರು ಮನನೊಂದುಕೊಂಡು ಮಾಡುವ ಸೇವೆಯಿಂದ ನಿಮಗೆ ಒಳಿತಾಗದು.


ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


ತೊಳಲುತ್ತಿದ್ದೆವು ನಾವೆಲ್ಲರು ದಾರಿತಪ್ಪಿದ ಕುರಿಗಳಂತೆ ಹಿಡಿಯುತ್ತಿದ್ದನು ಪ್ರತಿಯೊಬ್ಬನು ತನ್ನ ತನ್ನ ದಾರಿಯನ್ನೆ. ನಮ್ಮೆಲ್ಲರ ದೋಷವನು ಸರ್ವೇಶ್ವರ ಹಾಕಿದ್ದ ಆತನ ಮೇಲೆ.


ಸರ್ವೇಶ್ವರನ ಗುಡಾರದ ಸಮೀಪಕ್ಕೆ ಬರುವವರೆಲ್ಲರು ಸಾಯಲೇ ಬೇಕಾದರೆ ಇನ್ನು ನಾವೆಲ್ಲರು ಸತ್ತಹಾಗೆ ತಾನೆ?” ಎಂದರು.


ಮೋಶೆ ಆ ಕೋಲುಗಳನ್ನು ಮಂಜೂಷವಿರುವ ಗುಡಾರದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಇಟ್ಟನು.


ಲೇವಿಯ ಕುಲಕ್ಕೂ ಒಂದು ಕೋಲು ಇರುವುದರಿಂದ ಅದರ ಮೇಲೆ ಆರೋನನ ಹೆಸರನ್ನು ಬರೆಯಿಸು.


ನೀವು ಆ ನಾಡನ್ನು ನಾಲ್ವತ್ತು ದಿನಗಳು ಸಂಚರಿಸಿ ನೋಡಿದಿರಿ. ಅಂತೆಯೇ ಒಂದು ದಿನಕ್ಕೆ ಒಂದು ವರ್ಷದ ಮೇರೆಗೆ ನಾಲ್ವತ್ತು ವರ್ಷ ನಿಮ್ಮ ಪಾಪದ ಫಲವನ್ನು ಅನುಭವಿಸಿರಿ; ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳುವಿರಿ.


“ಈ ನನ್ನ ಆಜ್ಞೆಗಳನ್ನು ಅವರು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸಾಯುವರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.


“ಆ ದೋಷಪರಿಹಾರಕ ಬಲಿ ಮಹಾಪರಿಶುದ್ಧವಾದುದಲ್ಲವೆ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆ, ಅವರ ಪರವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷನಿವಾರಿಸುವಂತೆ, ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲವೆ? ಅದನ್ನೇಕೆ ನೀವು ಪರಿಶುದ್ಧ ಸ್ಥಳದಲ್ಲಿ ತಿನ್ನಲಿಲ್ಲ?


ಹಾಗೆ ಮಾಡಿದರೆ ತಾವು ಆ ನೈವೇದ್ಯಗಳನ್ನು ಊಟ ಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಗೆ ಗುರಿಯಾಗುವರು, ನನ್ನ ಸೇವೆಗೆ ಯಾಜಕರನ್ನು ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.


“ನೀನು ಲೇವಿಕುಲದವರನ್ನು ಕರೆದುತಂದು ಅವರು ದೇವತಾ ಕಾರ್ಯಗಳಲ್ಲಿ ಯಾಜಕ ಆರೋನನಿಗೆ ಸಹಾಯಕರಾಗಿರುವಂತೆ ನಿಯುಕ್ತಗೊಳಿಸು.


ಇದು ಕೋರಹನಾದ ನಿನಗೂ ನಿನ್ನ ಸ್ವಕುಲದವರಾದ ಲೇವಿಯರಿಗೂ ಕೇವಲ ಅಲ್ಪಕಾರ್ಯವೆಂದು ತೋರಿತೇ? ಯಾಜಕ ಪದವಿ ನಿಮಗಾಗಬೇಕೆಂದು ಕೋರುತ್ತೀರೋ?


“ಇದಲ್ಲದೆ ಇಸ್ರಯೇಲರು ನನಗೆ ಮೀಸಲಾಗಿಟ್ಟು ಅರ್ಪಿಸುವ ದ್ರವ್ಯಗಳು, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸಲ್ಲಬೇಕು. ಇವು ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿ ಶುದ್ಧರಾದವರೆಲ್ಲರೂ ಊಟಮಾಡಬಹುದು.


“ಆ ಕಾಲದಲ್ಲಿ ಸರ್ವೇಶ್ವರ ಲೇವಿಕುಲದವರನ್ನು ಪ್ರತ್ಯೇಕಿಸಿ ತಮ್ಮ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕು, ತಮ್ಮ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕು ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕು ಅವರನ್ನು ನೇಮಿಸಿದರು. ಅವರು ಇಂದಿನವರೆಗೂ ಆ ಕೆಲಸವನ್ನು ನಡೆಸುತ್ತಾರೆ.


ಮೀಕನು ಯೌವನಸ್ಥನಾದ ಆ ಲೇವಿಯನನ್ನು ಯಾಜಕ ಸೇವೆಗಾಗಿ ಪ್ರತಿಷ್ಠಿಸಿ ತನ್ನ ಮನೆಯಲ್ಲೇ ಇಟ್ಟುಕೊಂಡನು.


“ಇದಲ್ಲದೆ ನೀನು ನಿನ್ನ ಎಡಮಗ್ಗುಲಲ್ಲಿ ಮಲಗು. ಇಸ್ರಯೇಲ್ ವಂಶದವರ ಅಧರ್ಮದ ಭಾರ ನಿನ್ನ ಮೇಲೆ ಬಿದ್ದಿದೆ ಎಂದು ಗೊತ್ತಾಗಲಿ; ನೀನು ಎಷ್ಟು ದಿವಸ ಹೀಗೆ ಮಲಗಿಕೊಂಡಿರುವಿಯೋ ಅಷ್ಟು ದಿವಸ ಅವರ ಅಧರ್ಮವನ್ನು ಹೊತ್ತುಕೊಂಡಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು