Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:13 - ಕನ್ನಡ ಸತ್ಯವೇದವು C.L. Bible (BSI)

13 ಆ ಜನರು ತಮ್ಮ ನಾಡಿನ ಎಲ್ಲ ಬೆಳೆಗಳಲ್ಲಿ ನನಗೆ ತರುವ ಪ್ರಥಮ ಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು; ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲವು ನಿಮಗೆ ಸಲ್ಲಬೇಕು. ನಿಮ್ಮ ಕುಟುಂಬಗಳಲ್ಲಿ ಶುದ್ಧರಾಗಿರುವವರೆಲ್ಲರೂ ಅವುಗಳನ್ನು ಊಟಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ಯೆಹೋವ ದೇವರಿಗೆ ತರುವ ಅವರ ದೇಶದಲ್ಲಿರುವ ಎಲ್ಲವುಗಳ ಪ್ರಥಮ ಫಲಗಳು ನಿನ್ನವುಗಳಾಗಿರುವುವು. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನೂ ಅದನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:13
13 ತಿಳಿವುಗಳ ಹೋಲಿಕೆ  

“ನಿಮ್ಮ ಕಣದಿಂದ ಹಾಗು ಆಲೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸಲು ತಡಮಾಡಬಾರದು.


ಅಯ್ಯೋ, ನನ್ನ ಗತಿ ಏನೆಂದು ಹೇಳಲಿ? ಬೇಸಿಗೆಯಲ್ಲಿ ಬೆಳೆಯನ್ನು ಕೊಯ್ಯಲು ಬಂದವನಂತೆ ಇದ್ದೇನೆ. ಹಕ್ಕಲನ್ನು ಆಯ್ದ ಮೇಲೆ ದ್ರಾಕ್ಷಿಹಣ್ಣನ್ನು ಕೊಯ್ಯಲು ಬಂದವನಂತೆ ಇದ್ದೇನೆ. ತಿನ್ನುವುದಕ್ಕೆ ಒಂದು ಗೊಂಚಲು ಸಹ ಉಳಿದಿಲ್ಲ. ನನಗೆ ಇಷ್ಟವಾದ ದೋರೆ ಅಂಜೂರ ಕೂಡ ಸಿಕ್ಕುತ್ತಿಲ್ಲ.


ಬೆಂಗಾಡಿನಲ್ಲಿ ದ್ರಾಕ್ಷೆ ಸಿಕ್ಕಿದಂತೆ ಇಸ್ರಯೇಲ್ ನನಗೆ ಸಿಕ್ಕಿತು. ಅಂಜೂರದ ಮರದ ಮೊತ್ತಮೊದಲ ಹಣ್ಣು ಕಣ್ಣಿಗೆ ಬೀಳುವಂತೆ ನಿಮ್ಮ ಪಿತೃಗಳು ನನಗೆ ಕಾಣಿಸಿಕೊಂಡರು. ಆದರೆ ಅವರು ಬಾಳ್‍ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾದರು. ಅವರು ನೆಚ್ಚಿಕೊಂಡ ದೇವತೆಯಂತೆ ನೀಚರಾದರು.


ಒಂದು ಬುಟ್ಟಿಯಲ್ಲಿ ಕಾಲಕ್ಕೆ ಮುಂಚೆ ಮಾಗಿದ್ದ ಹಣ್ಣುಗಳು ತುಂಬಿದ್ದವು. ಅವು ಅತ್ಯುತ್ತಮವಾದ ಅಂಜೂರದ ಹಣ್ಣುಗಳು. ಇನ್ನೊಂದು ಬುಟ್ಟಿಯಲ್ಲಿ ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.


“ನಿಮ್ಮ ಬೆಳೆಯ ಪ್ರಥಮ ಫಲದಲ್ಲಿ ಅತಿಶ್ರೇಷ್ಠವಾದುದ್ದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. "ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


“ಭೂಮಿಯ ಮೊದಲನೆಯ ಬೆಳೆಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”


ಅವರು ದಯಪಾಲಿಸಿದ ಹೊಲದ ಎಲ್ಲ ಬೆಳೆಗಳಲ್ಲೂ ಕೆಲವು ಪ್ರಥಮ ಫಲಗಳನ್ನು ಪುಟ್ಟಿಯಲ್ಲಿಟ್ಟು ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡುಹೋಗಿರಿ.


ಎಲ್ಲ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದು ಹಾಗು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲ ಪದಾರ್ಥಗಳು ಅವರದಾಗಬೇಕು. ನಿಮ್ಮ ಮನೆ ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.


ಹೊತ್ತು ಮುಳುಗಿದ ನಂತರ ಅವನು ಶುದ್ಧನಾಗಿ ನೈವೇದ್ಯ ಪದಾರ್ಥಗಳನ್ನು ಊಟಮಾಡಬಹುದು. ಏಕೆಂದರೆ ಅದು ಅವನ ಜೀವನಾಂಶ.


ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಎರಡು ಕಿಲೋಗ್ರಾಂ ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.


ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳ ಪ್ರಥಮಫಲಗಳನ್ನು ಹಾಗು ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನು ಅವರಿಗೆ ಕೊಡಬೇಕು.


ಒಂದು ದಿನ ಬಾಳ್‍ಷಾಲಿಷಾ ಊರಿನ ಒಬ್ಬ ವ್ಯಕ್ತಿ, ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ ಒಂದು ಚೀಲ ತುಂಬಾ ಹಸೀ ತೆನೆಗಳನ್ನೂ ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೈವಪುರುಷನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು; ಅವರು ಊಟಮಾಡಲಿ,” ಎಂದು ಹೇಳಿದನು.


ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದವೆಲ್ಲಾ ಹುಟ್ಟುವಳಿಯಿಂದ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು; ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು