Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:21 - ಕನ್ನಡ ಸತ್ಯವೇದವು C.L. Bible (BSI)

21 “ಇಗೋ, ಇಸ್ರಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಲೇವಿಯರಿಗೆ ಕೊಟ್ಟಿದ್ದೇನೆ. ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡುವ ಅವರಿಗೆ ಇದು ಸಲ್ಲತಕ್ಕ ಸಂಭಾವನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಲೇವಿಯರು ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡುವದಕ್ಕಾಗಿ ಇಸ್ರಾಯೇಲ್ಯರಿಂದ [ಸಕಲಪದಾರ್ಥಗಳ] ಹತ್ತನೆಯ ಪಾಲನ್ನು ಗೊತ್ತುಮಾಡಿಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಲೇವಿಯರು ದೇವದರ್ಶನಗುಡಾರಕ್ಕೋಸ್ಕರ ಮಾಡುವ ಭಾರವಾದ ಕೆಲಸಕ್ಕೆ ಪ್ರತಿಫಲವಾಗಿ ಪ್ರತಿಯೊಬ್ಬ ಇಸ್ರೇಲನ ದಶಾಂಶವನ್ನು ನಾನು ಲೇವಿಯರಿಗೆ ಅವರ ಪಾಲಾಗಿ ಕೊಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಅವರು ದೇವದರ್ಶನ ಗುಡಾರದ ಸೇವೆಯನ್ನೂ ಮಾಡುವುದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾಯೇಲರಲ್ಲಿ ಹತ್ತನೆಯ ಭಾಗವನ್ನು ಸೊತ್ತಾಗಿ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:21
26 ತಿಳಿವುಗಳ ಹೋಲಿಕೆ  

ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಯಿತು. ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ, ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.


ನಾವು ದೇವರಿಗಾಗಿ ಪ್ರತ್ಯೇಕಿಸಿಡತಕ್ಕ ಪ್ರಥಮ ಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ, ಮೊದಲಾದವುಗಳನ್ನು ಯಾಜಕರಿಗಾಗಿ ನಮ್ಮ ದೇವಾಲಯದ ಕೊಠಡಿಗಳಲ್ಲಿ ತಂದಿಡುತ್ತೇವೆ; ನಮ್ಮ ಭೂಮಿಯ ಆದಾಯದ ದಶಮಾಂಶವು ಲೇವಿಯರದಾಗಬೇಕು; ಲೇವಿಯರು ತಾವೇ ಬಂದು ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಕೂಡಿಸಬೇಕು;


ಲೇವಿಯ ಕುಲದವರಲ್ಲಿ ಯಾಜಕ ಪದವಿಯನ್ನು ಹೊಂದಿದವರು ಜನರಿಂದ, ಅಂದರೆ ಅಬ್ರಹಾಮನ ವಂಶಜರಾದ ತಮ್ಮ ಸ್ವಜನರಿಂದ, ದಶಮಾಂಶವನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆ ಉಂಟು.


ದೇವರ ವಾಕ್ಯದ ಉಪದೇಶ ಪಡೆಯುವವನು ಉಪದೇಶ ಮಾಡುವವನೊಂದಿಗೆ ತನಗೆ ಇರುವ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.


ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.


ಮುಖಂಡರಾದ ತಮ್ಮ ಸಹೋದರರನ್ನು ಸೇರಿಕೊಂಡು, ದೇವರ ದಾಸ ಮೋಶೆಯ ಮುಖಾಂತರ ಕೊಡಲಾದ ದೇವರ ಧರ್ಮೋಪದೇಶವನ್ನು ತಾವು ಅನುಸರಿಸಿ, ತಮ್ಮ ಸರ್ವೇಶ್ವರನಾದ ದೇವರ ಎಲ್ಲ ಆಜ್ಞಾನಿಯಮವಿಧಿಗಳನ್ನು ಕೈಗೊಂಡು ನಡೆಯುವುದಾಗಿ, ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು:


ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನು, ತಮ್ಮ ಆದಾಯದ ದಶಮಾಂಶವನ್ನು ಹಾಗು ದೇವರಿಗೆ ಮುಡುಪಾಗಿ ಇಟ್ಟಿದ್ದನ್ನು ನಿರ್ವಂಚನೆಯಿಂದ ತಂದು ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಯಲ್ಲಿ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು; ಅವನ ತಮ್ಮ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು.


ಇಸ್ರಯೇಲರಲ್ಲಿ ನಿನ್ನ ಕುಲದವರಾದ ಲೇವಿಯರನ್ನು ನಾನೇ ಆರಿಸಿಕೊಂಡಿದ್ದೇನೆ. ಅವರು ಸರ್ವೇಶ್ವರನಿಗೆ ಸಮರ್ಪಿತವಾಗಿ ಕಾಣಿಕೆಯಂತೆ ನಿನ್ನ ವಶದಲ್ಲೇ ಇದ್ದಾರೆ. ದೇವದರ್ಶನದ ಗುಡಾರದ ಪರಿಚರ್ಯವನ್ನು ಅವರೇ ಮಾಡಲಿ.


ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕಿಸದೇಕನಿಗೆ ಕೊಟ್ಟನು.


ಯುದ್ಧಕ್ಕೆ ಹೋಗಿದ್ದ ಸೈನಿಕರಿಗೆ ಬರುವ ಭಾಗದಿಂದ ಸೆರೆಯಾಳು, ದನ, ಕತ್ತೆ, ಆಡು, ಕುರಿ


ಅಂಥವನ ಕೈಯಲ್ಲಿ ಪಿತ್ರಾರ್ಜಿತ ಸೊತ್ತನ್ನು ಮಾರಿದ ಹಣವಿದ್ದರೂ ಮಿಕ್ಕ ಲೇವಿಯರೊಂದಿಗೆ ಸಮವಾದ ಪಾಲಿಗೆ ಬಾಧ್ಯನಾಗಿರುವನು.


ಜೆರುಬ್ಬಾಬೆಲ್, ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಯೇಲರು ಗಾಯಕರಿಗೂ ದ್ವಾರಪಾಲಕರಿಗೂ ದಿನದಿನಕ್ಕೆ ಸಿಕ್ಕತಕ್ಕ ಪಾಲುಗಳನ್ನು ಕೊಡುತ್ತ ಇದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಲೇವಿಯರು ತಮ್ಮದರಲ್ಲಿ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.


ನೈವೇದ್ಯದ್ರವ್ಯ, ಧೂಪಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳ ದಶಮಾಂಶವನ್ನೂ ಲೇವಿಯರಿಗೆ, ಗಾಯಕರಿಗೆ ಹಾಗು ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ ಯಾಜಕರಿಗಾಗಿ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಅವನಿಗಾಗಿ ಸಿದ್ಧಮಾಡಿಸಿಕೊಟ್ಟಿದ್ದನು.


ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಊರ್ಜಿತವಾಗಬೇಕೆಂದೇ ಈ ಅಪ್ಪಣೆಯನ್ನು ನಿಮಗೆ ಕೊಟ್ಟಿದ್ದೇನೆಂದು ಆಗ ನಿಮಗೆ ಗೊತ್ತಾಗುವುದು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನನ್ನ ಆಲಯದಲ್ಲಿ ಆಹಾರಕ್ಕೆ ಕೊರತೆಯಿಲ್ಲದಿರುವಂತೆ ದಶಮಾಂಶವನ್ನು ಪೂರ್ತಿಯಾಗಿ ನನ್ನ ಭಂಡಾರಕ್ಕೆ ತೆಗೆದುಕೊಂಡು ಬನ್ನಿ. ಆ ಬಳಿಕ ಪರಲೋಕದ ದ್ವಾರಗಳನ್ನು ತೆರೆದು, ತುಂಬಿತುಳುಕುವಷ್ಟು ವರದಾನಗಳನ್ನು ನಿಮ್ಮ ಮೇಲೆ ಸುರಿಸುವೆನೋ ಇಲ್ಲವೋ ಎಂಬುದನ್ನು ಪರೀಕ್ಷಿಸಿನೋಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಕೊಯ್ದು ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು. ಮಿಕ್ಕ ನಾಲ್ಕು ಪಾಲು ನಿಮ್ಮದು. ಅದನ್ನು ಬಿತ್ತನೆಗಾಗಿ ಮತ್ತು ನಿಮ್ಮ ಮನೆಯವರ ಹಾಗು ಕುಟುಂಬದವರ ಜೀವನಕ್ಕಾಗಿ ಇಟ್ಟುಕೊಳ್ಳಿ,” ಎಂದು ಹೇಳಿದನು.


ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲತಕ್ಕದ್ದು ಎಂಬ ಯೋಜನೆಯನ್ನು ಜೋಸೆಫನು ಈಜಿಪ್ಟ್ ದೇಶದ ಒಂದು ಶಾಸನವನ್ನಾಗಿ ಮಾಡಿದನು. ಈ ದಿನದವರೆಗೂ ಆ ಶಾಸನ ರೂಢಿಯಲ್ಲಿದೆ. ಅರ್ಚಕರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.


“ನೀನು ಲೇವಿಕುಲದವರನ್ನು ಕರೆದುತಂದು ಅವರು ದೇವತಾ ಕಾರ್ಯಗಳಲ್ಲಿ ಯಾಜಕ ಆರೋನನಿಗೆ ಸಹಾಯಕರಾಗಿರುವಂತೆ ನಿಯುಕ್ತಗೊಳಿಸು.


ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿದ ಭಾಗದ ದಶಮಾಂಶವನ್ನು ದೇವಾಲಯದ ಬಂಡಾರದಕೊಠಡಿಗಳಲ್ಲಿಡಬೇಕು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು