Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:24 - ಕನ್ನಡ ಸತ್ಯವೇದವು C.L. Bible (BSI)

24 ಇಸ್ರಯೇಲರು ನನಗೆ ಮೀಸಲಾಗಿಟ್ಟು ಸಮರ್ಪಿಸುವ ಹತ್ತನೆಯ ಪಾಲನ್ನು ಅವರಿಗೆ ಸೊತ್ತಾಗಿ ಕೊಟ್ಟಿದ್ದೇನೆ. ಆದುದರಿಂದಲೇ ಇತರ ಇಸ್ರಯೇಲರಿಗೆ ಪಾಲು ದೊರಕುವಂತೆ ಅವರಿಗೆ ಪಾಲು ದೊರಕುವುದಿಲ್ಲವೆಂದು ಒತ್ತಿಹೇಳಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇಸ್ರಾಯೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ಸ್ವತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ಲೇವಿಯರಿಗೆ ‘ಇತರ ಇಸ್ರಾಯೇಲರೊಂದಿಗೆ ಪಾಲು ದೊರೆಯುವುದಿಲ್ಲ’” ಎಂದು ಹೇಳಿದ ಮಾತಿಗೆ ಇದೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇಸ್ರಾಯೇಲ್ಯರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಪಾಲನ್ನೇ ಲೇವಿಯರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದೇನಲ್ಲಾ. ಇವರಿಗೆ ಇಸ್ರಾಯೇಲ್ಯರೊಂದಿಗೆ ಪಾಲು ದೊರೆಯುವದಿಲ್ಲವೆಂದು ನಾನು ಹೇಳಿದ ಮಾತಿಗೆ ಇದೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಇಸ್ರೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಪಾಲನ್ನು ಲೇವಿಯರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ. ಇವರಿಗೆ ಇಸ್ರೇಲರೊಂದಿಗೆ ಪಾಲು ದೊರೆಯುವುದಿಲ್ಲವೆಂದು ನಾನು ಲೇವಿಯರ ಕುರಿತು ಹೇಳಿದ ಮಾತಿಗೆ ಇದೇ ಕಾರಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇಸ್ರಾಯೇಲರು ಯೆಹೋವ ದೇವರಿಗೆ ಬಲಿಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ. ಆದಕಾರಣ, ‘ಇಸ್ರಾಯೇಲರ ಮಧ್ಯದಲ್ಲಿ ಅವರಿಗೆ ಸೊತ್ತು ಇರಬಾರದು ಎಂದು ನಾನು ಅವರಿಗೆ ಹೇಳಿದ್ದೇನೆ,’ ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:24
10 ತಿಳಿವುಗಳ ಹೋಲಿಕೆ  

“ಲೇವಿಯರಿಗೆ ನೀನು ಇಂತೆಂದು ಆಜ್ಞಾಪಿಸು - ‘ನಿಮ್ಮ ಸ್ವಂತಕ್ಕಾಗಿ ನಾನು ಗೊತ್ತುಮಾಡಿರುವ ಹತ್ತನೆಯ ಒಂದು ಪಾಲನ್ನು ಇಸ್ರಯೇಲರಿಂದ ನೀವು ತೆಗೆದುಕೊಳ್ಳುವಾಗ ಅದರಲ್ಲಿ ಹತ್ತನೆಯ ಒಂದು ಪಾಲನ್ನು ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸಮರ್ಪಿಸಬೇಕು.


ಸರ್ವೇಶ್ವರ ಮೋಶೆಗೆ ಹೀಗೆಂದರು:


ಬೇರೆ ಇಸ್ರಯೇಲರಿಗೆ ಸೊತ್ತು ದೊರಕಿದಂತೆ ಲೇವಿಯರಿಗೆ ದೊರಕದೆ ಹೋದುದರಿಂದ ಅವರು ಇಸ್ರಯೇಲರ ಸಮೇತ ಎಣಿಕೆ ಆಗಲಿಲ್ಲ. ಲೇವಿಯರಲ್ಲಿ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರನ್ನು ಲೆಕ್ಕ ಹಾಕಿದಾಗ ಅವರ ಸಂಖ್ಯೆ : 23,000 ಇತ್ತು.


ಆದುದರಿಂದ ಮಿಕ್ಕ ಇಸ್ರಯೇಲರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ವಾಸ್ತ್ಯ ದೊರಕಲಿಲ್ಲ. ನಿಮ್ಮ ದೇವರಾದ ಸರ್ವೇಶ್ವರ ಅವರಿಗೆ ಹೇಳಿದಂತೆ ಸರ್ವೇಶ್ವರಸ್ವಾಮಿಯೇ ಅವರ ಸೊತ್ತು.


“ದಶಮಾಂಶವನ್ನು ಕೊಡಬೇಕಾದ ಮೂರನೆಯ ಸಂವತ್ಸರದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ಪ್ರತ್ಯೇಕಿಸಿದಾಗ ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರು, ಪರದೇಶಿಗಳು, ತಾಯಿತಂದೆಯಿಲ್ಲದವರು ಹಾಗು ವಿಧವೆಯರೂ ಉಂಡು ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕು.


“ಹೊಲದ ದವಸಧಾನ್ಯವಾಗಲಿ, ತೋಟದ ಹಣ್ಣುಹಂಪಲು ಆಗಲಿ, ಭೂಮಿಯಿಂದುಂಟಾದ ಎಲ್ಲ ಆದಾಯದಲ್ಲಿ ಹತ್ತನೆಯ ಒಂದು ಪಾಲು ಸರ್ವೇಶ್ವರನದಾಗಿರಬೇಕು. ಅದು ಸರ್ವೇಶ್ವರನಿಗೆ ಮೀಸಲಾದದ್ದು.


ಲೇವಿ ಕುಲದವರಿಗೆ ಮಾತ್ರ ಯಾವ ಪಾಲೂ ಸಿಕ್ಕಲಿಲ್ಲ. ಏಕೆಂದರೆ ಇಸ್ರಯೇಲಿನ ದೇವರಾದ ಸರ್ವೇಶ್ವರನು ಆಜ್ಞಾಪಿಸಿದಂತೆ ಯಜ್ಞಶೇಷವೇ ಅವರ ಸೊತ್ತಾಗಿತ್ತು.


ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿದ ಭಾಗದ ದಶಮಾಂಶವನ್ನು ದೇವಾಲಯದ ಬಂಡಾರದಕೊಠಡಿಗಳಲ್ಲಿಡಬೇಕು;


ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು