Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:30 - ಕನ್ನಡ ಸತ್ಯವೇದವು C.L. Bible (BSI)

30 “ಲೇವಿಯರಿಗೆ ಮತ್ತೆ ಹೀಗೆಂದು ತಿಳಿಸು: “ನಿಮಗೆ ದೊರಕಿದ್ದರಲ್ಲಿ ಉತ್ತಮವಾದುದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಮಿಕ್ಕದ್ದನ್ನು ಕಣದಲ್ಲಿನ ದವಸ ಹಾಗೂ ದ್ರಾಕ್ಷಿತೊಟ್ಟಿಯ ರಸವೆಂದು ಭಾವಿಸಿ ನೀವು ಉಪಯೋಗಿಸಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದುದರಿಂದ ನೀನು ಲೇವಿಯರಿಗೆ ಹೀಗೆ ಹೇಳಬೇಕು, ‘ನಿಮಗೆ ದೊರಕಿದ್ದರಲ್ಲಿ ನೀವು ಉತ್ತಮವಾದದ್ದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಉಳಿದದ್ದನ್ನು ಕಣದಲ್ಲಿನ ದವಸದ ಹಾಗೂ, ದ್ರಾಕ್ಷಿತೊಟ್ಟಿಯ ರಸವೆಂದು ಭಾವಿಸಿ ಉಪಯೋಗಿಸಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಮತ್ತು ನೀನು ಲೇವಿಯರಿಗೆ ಹೀಗೆ ಹೇಳಬೇಕು - ನಿಮಗೆ ದೊರಕಿದ್ದರಲ್ಲಿ ನೀವು ಉತ್ತಮವಾದದ್ದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ವಿುಕ್ಕದ್ದನ್ನು ಕಣದಲ್ಲಿನ ದವಸದ ಹಾಗೂ ದ್ರಾಕ್ಷೇತೊಟ್ಟಿಯ ರಸದ ಹಾಗೂ ಭಾವಿಸಿ ಉಪಯೋಗಿಸಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ಮೋಶೆಯೇ, ಲೇವಿಯರಿಗೆ ಹೀಗೆ ಹೇಳು: ಆ ಕಾಣಿಕೆಗಳಲ್ಲಿ ಉತ್ತಮವಾದ ಭಾಗವನ್ನು ನೀವು ಯೆಹೋವನಿಗೆ ಕೊಡುವಾಗ, ಲೇವಿಯರಾದ ನಿಮಗೆ ಅದು ಕಣದ ಉತ್ಪಾದನೆಯಂತೆಯೂ ದ್ರಾಕ್ಷಿಆಲೆಯ ಉತ್ಪಾದನೆಯಂತೆಯೂ ಪರಿಗಣಿಸಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ನೀನು ಲೇವಿಯರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಅದರಲ್ಲಿ ಉತ್ತಮವಾದದ್ದನ್ನು ಸಮರ್ಪಿಸಿದ ನಂತರ ಉಳಿದವುಗಳನ್ನು ಕಣದಲ್ಲಿನ ದವಸದಂತೆಯೂ ದ್ರಾಕ್ಷಿತೊಟ್ಟಿಯ ರಸದಂತೆಯೂ ಪರಿಗಣಿಸಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:30
12 ತಿಳಿವುಗಳ ಹೋಲಿಕೆ  

ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


ಕುರುಡಾದ ಪಶುಗಳನ್ನು ಬಲಿಯರ್ಪಿಸುವುದು ತಪ್ಪಲ್ಲವೆ? ಊನವಾದ ರೋಗದ ಪಶುಗಳನ್ನು ಅರ್ಪಿಸುವುದು ದೋಷವಲ್ಲವೇ? ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ಇಂಥದ್ದನ್ನು ನಿಮ್ಮ ರಾಜಪಾಲನಿಗೆ ಕಾಣಿಕೆಯಾಗಿ ಕೊಟ್ಟರೆ ಅವನು ನಿಮ್ಮನ್ನು ಮೆಚ್ಚುವನೋ ಅಥವಾ ನಿಮ್ಮ ಕೋರಿಕೆಯನ್ನು ನೆರವೇರಿಸುವನೋ?’


ನಿನ್ನ ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ನಿನ್ನ ದೇವರಾದ ಸರ್ವೇಶ್ವರನನ್ನು ಪ್ರೀತಿಸು.


ಇಷ್ಟಾದ ಮೇಲೆ ಅವರ ತಂದೆ ಯಕೋಬನು, “ನೀವು ಹೋಗಲೇಬೇಕಾದರೆ, ಒಂದು ಕೆಲಸಮಾಡಿ; ಈ ನಾಡಿನಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಹಾಕಿಕೊಂಡು ಹೋಗಿ, ಆ ಮನುಷ್ಯನಿಗೆ ಕಾಣಿಕೆಯಾಗಿ ಕೊಡಿ.


ಅವರು ಜೋರ್ಡನ್ ನದಿಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು; ಜೋಸೆಫನು ತನ್ನ ತಂದೆಗೋಸ್ಕರ ಏಳು ದಿನದ ಶೋಕಾಚರಣೆಯನ್ನು ಏರ್ಪಡಿಸಿದನು.


ಆರೋನನಿಗೂ ಅವನ ಮಕ್ಕಳಿಗೂ ಯಾಜಕದೀಕ್ಷೆಯನ್ನು ಕೊಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ಕಾಣಿಕೆಯಾಗಿ ಆರತಿ ಮಾಡಿಸಿದ ಎದೆಯ ಭಾಗವನ್ನು ಮತ್ತು ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ಅದರ ತೊಡೆಯನ್ನು ದೇವರದೆಂದು ಭಾವಿಸಬೇಕು.


ನಿಮಗೆ ಕೊಡಲಾಗುವ ಸಕಲ ಪದಾರ್ಥಗಳಲ್ಲಿ ಉತ್ತಮ ಭಾಗವನ್ನೇ, ಅಂದರೆ ದೇವರ ವಸ್ತುವಾಗುವುದಕ್ಕೆ ಯೋಗ್ಯವಾದ ಭಾಗವನ್ನೇ ಸರ್ವೇಶ್ವರನಿಗೆ ಮೀಸಲಾಗಿಟ್ಟು ಸಮರ್ಪಿಸಬೇಕು.


ನೀವು ಮತ್ತು ನಿಮ್ಮ ಮನೆಯವರು ಅದನ್ನು ಯಾವ ಸ್ಥಳದಲ್ಲಿಯಾದರೂ ಊಟಮಾಡಬಹುದು. ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ಪ್ರತಿಫಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು