Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:31 - ಕನ್ನಡ ಸತ್ಯವೇದವು C.L. Bible (BSI)

31 ನೀವು ಮತ್ತು ನಿಮ್ಮ ಮನೆಯವರು ಅದನ್ನು ಯಾವ ಸ್ಥಳದಲ್ಲಿಯಾದರೂ ಊಟಮಾಡಬಹುದು. ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ಪ್ರತಿಫಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನೀವೂ, ನಿಮ್ಮ ಮನೆಯವರೂ ಅದನ್ನು ಎಲ್ಲಾ ಸ್ಥಳಗಳಲ್ಲಿ ಊಟಮಾಡಬಹುದು. ನೀವು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ದೊರೆಯುವ ಪ್ರತಿಫಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನೀವೂ ನಿಮ್ಮ ಮನೆಗಳವರೂ ಅದನ್ನು ಯಾವ ಸ್ಥಳದಲ್ಲಿಯಾದರೂ ಊಟಮಾಡಬಹುದು. ನೀವು ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ಪ್ರತಿಫಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಉಳಿದದ್ದನ್ನು ನೀವು ಮತ್ತು ನಿಮ್ಮ ಕುಟುಂಬದವರು ಎಲ್ಲಿ ಬೇಕಾದರೂ ತಿನ್ನಬಹುದು. ನೀವು ದೇವದರ್ಶನಗುಡಾರದಲ್ಲಿ ಮಾಡುವ ಕೆಲಸಕ್ಕೆ ಇದು ನಿಮಗೆ ಪ್ರತಿಫಲವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನೀವೂ ನಿಮ್ಮ ಮನೆಯವರೂ ಅದನ್ನು ಸಕಲ ಸ್ಥಳಗಳಲ್ಲಿ ತಿನ್ನಬಹುದು. ಏಕೆಂದರೆ ದೇವದರ್ಶನದ ಗುಡಾರದಲ್ಲಿ ನೀವು ಮಾಡುವ ಸೇವೆಗೋಸ್ಕರ ಅದು ನಿಮಗೆ ಪ್ರತಿಫಲವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:31
9 ತಿಳಿವುಗಳ ಹೋಲಿಕೆ  

ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು.


ಎರಡು ಅಂಗಿಗಳನ್ನಾಗಲಿ, ಕಾಲಿಗೆ ಕೆರವನ್ನಾಗಲಿ, ಕೈಗೆ ದಂಡವನ್ನಾಗಲಿ ತೆಗೆದುಕೊಳ್ಳಬೇಡಿ. ಏಕೆಂದರೆ, ದುಡಿಮೆಗಾರನು ಜೀವನಾಧಾರಕ್ಕೆ ಬಾಧ್ಯನು.


ದೇವರ ವಾಕ್ಯದ ಉಪದೇಶ ಪಡೆಯುವವನು ಉಪದೇಶ ಮಾಡುವವನೊಂದಿಗೆ ತನಗೆ ಇರುವ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.


ನನ್ನ ಜೀವನಾಂಶದ ಹೊಣೆಯನ್ನು ನಾನು ನಿಮ್ಮ ಮೇಲೆ ಹೊರಿಸಲಿಲ್ಲ. ಇದೊಂದನ್ನು ಬಿಟ್ಟರೆ ಯಾವ ವಿಷಯದಲ್ಲೂ ನಿಮ್ಮನ್ನು ಮಿಕ್ಕ ಸಭೆಗಳಿಗಿಂತ ಕೀಳಾಗಿ ಕಾಣಲಿಲ್ಲ. ಈ ಒಂದು ಅನ್ಯಾಯಕ್ಕಾಗಿ ನನ್ನನ್ನು ಕ್ಷಮಿಸಿರಿ.


“ಲೇವಿಯರಿಗೆ ಮತ್ತೆ ಹೀಗೆಂದು ತಿಳಿಸು: “ನಿಮಗೆ ದೊರಕಿದ್ದರಲ್ಲಿ ಉತ್ತಮವಾದುದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಮಿಕ್ಕದ್ದನ್ನು ಕಣದಲ್ಲಿನ ದವಸ ಹಾಗೂ ದ್ರಾಕ್ಷಿತೊಟ್ಟಿಯ ರಸವೆಂದು ಭಾವಿಸಿ ನೀವು ಉಪಯೋಗಿಸಿಕೊಳ್ಳಬಹುದು.


ಅದರಲ್ಲಿ ಉತ್ತಮಭಾಗವನ್ನು ಸರ್ವೇಶ್ವರನಿಗೆ ಮೀಸಲಾಗಿಟ್ಟ ನಂತರ ಮಿಕ್ಕದ್ದನ್ನು ಊಟಮಾಡುವುದರಿಂದ ಯಾವ ದೋಷಕ್ಕೂ ನೀವು ಗುರಿಯಾಗುವುದಿಲ್ಲ. ಇಸ್ರಯೇಲರು ಸಮರ್ಪಿಸುವ ಪವಿತ್ರ ವಸ್ತುಗಳನ್ನು ಅಪವಿತ್ರಗೊಳಿಸಬೇಡಿ; ಇಲ್ಲವಾದರೆ ಸಾಯುವಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು